ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಥಾಣೆಯ ಸಮೃದ್ಧಿ ಹೆದ್ದಾರಿಯಲ್ಲಿ ಕ್ರೇನ್ ಕುಸಿದು 16 ಕಾರ್ಮಿಕರು ಸಾವು!

Twitter
Facebook
LinkedIn
WhatsApp
ಥಾಣೆಯ ಸಮೃದ್ಧಿ ಹೆದ್ದಾರಿಯಲ್ಲಿ ಕ್ರೇನ್ ಕುಸಿದು 16 ಕಾರ್ಮಿಕರು ಸಾವು!

ಮಹಾರಾಷ್ಟ, ಅ 1:ಥಾಣೆಯ ಶಹಾಪುರದಲ್ಲಿ ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತಿದ್ದ ಸ್ಥಳದಲ್ಲಿ ಕ್ರೇನ್ ಕುಸಿದು 16 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗರ್ಡರ್ ಯಂತ್ರಕ್ಕೆ ಸಂಪರ್ಕ ಕಲ್ಪಿಸುವ ಕ್ರೇನ್ ಮತ್ತು ಸ್ಲ್ಯಾಬ್ 100 ಅಡಿ ಎತ್ತರದಿಂದ ಬಿದ್ದು ಭಾರಿ ಅವಘಡ ಸೋಮವಾರ ತಡ ರಾತ್ರಿ ನಡೆದಿದೆ. ಹಲವು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಥಾಣೆಯ ಸರ್ಲಾಂಬೆ ಗ್ರಾಮದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಈ ವೇಳೆ ಕ್ರೇನ್ ಕುಸಿದು ಅಪಘಾತ ಸಂಭವಿಸಿದೆ. ಮೃತರ ಹೊರತಾಗಿ ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ಕೂಡ ವ್ಯಕ್ತವಾಗಿದೆ. ಸ್ಥಳದಲ್ಲಿ ರಕ್ಷಣಾ ತಂಡದಿಂದ ಕಾರ್ಯಚರಣೆ ನಡೆಯುತ್ತಿದೆ..

ಪೊಲೀಸ್ ಸಿಬ್ಬಂದಿ, ಎನ್‌ಡಿಆರ್‌ಎಫ್ ಸಿಬ್ಬಂದಿ ಮತ್ತು ಅಗ್ನಿಶಾಮಕ ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಎದುರಾಗಿದೆ.

ಶಹಾಪುರ ಅಪಘಾತದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

“ಕಾರ್ಮಿಕರ ಸಾವು ಅತ್ಯಂತ ದುಃಖಕರ ಮತ್ತು ಹೃದಯ ವಿದ್ರಾವಕವಾಗಿದೆ. ಅವರಿಗೆ ನನ್ನ ಹೃತ್ಪೂರ್ವಕ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಮತ್ತು ಅವರ ಕುಟುಂಬದವರ ದುಃಖದಲ್ಲಿ ನಾವು ಭಾಗಿಯಾಗುತ್ತೇವೆ. ಅಪಘಾತದಲ್ಲಿ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಫಡ್ನವೀಸ್ ಹೇಳಿದ್ದಾರೆ.

”ಅವಶೇಷಗಳ ಅಡಿಯಲ್ಲಿ ಇನ್ನಷ್ಟು ಮಂದಿ ಸಿಲುಕಿರುವ ಸಾಧ್ಯತೆ ಇದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಎಂಎಸ್‌ಆರ್‌ಡಿಸಿ ಸಚಿವ ದಾದಾ ಭೂಸೆ ಮಂಗಳವಾರ ಬೆಳಗ್ಗೆ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ನಂತರ ಹೇಳಿದರು.

ವಿಶ್ವ ಹಿಂದೂ ಪರಿಷತ್‌ ಮೆರವಣಿಗೆ ಮೇಲೆ ಕಲ್ಲು ತೂರಾಟ – ಹರಿಯಾಣದಲ್ಲಿ ಹಿಂಸಾಚಾರ, ಇಬ್ಬರು ಸಾವು

ಚಂಡೀಗಢ: ಹರಿಯಾಣದ (Haryana) ಮೇವತ್‌ ಪ್ರದೇಶದ ನಂದ್‌ಗ್ರಾಮ್‌ನಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆಯೋಜಿಸಲಾಗಿದ್ದ ಮೆರವಣಿಗೆ (Religious Procession) ಮೇಲೆ ಕಲ್ಲು ತೂರಾಟ ನಡೆದಿದ್ದು, ಗಲಭೆ ತೀವ್ರ ಸ್ವರೂಪ ಪಡೆದು ಹಿಂಸಾಚಾರಕ್ಕೆ ತಿರುಗಿದೆ.

ಈ ವೇಳೆ ಕಲ್ಲು ಎಸೆದು ಕಾರುಗಳಿಗೆ ಬೆಂಕಿ ಹಚ್ಚಿದ ಗುಂಪೊಂದು ಗುಂಡು ಹಾರಿಸಿ ಇಬ್ಬರು ಹೋಮ್‌ ಗಾರ್ಡ್‌ಗಳನ್ನ ಹತ್ಯೆ ಮಾಡಿದ್ದಾರೆ. ಅಲ್ಲದೇ 7 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಕಿಡಿಗೇಡಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು (Police) ಅಶ್ರುವಾಯು ಪ್ರಯೋಗಿಸಿದ್ದಾರೆ. 

ವಿಶ್ವ ಹಿಂದೂ ಪರಿಷತ್‌ (Vishwa Hindu Parishad) ಮತ್ತು ಭಜರಂಗದಳದ ಕಾರ್ಯಕರ್ತರು ಗುರುಗ್ರಾಮದಿಂದ ಶೋಭಾಯಾತ್ರೆಯನ್ನ ಆರಂಭಿಸಿದ್ದರು. ಮೆರವಣಿಗೆ ನಂದ್‌ಗ್ರಾಮ ಸಮೀಪಿಸುತ್ತಿದ್ದಂತೆ ಅನ್ಯಕೋಮಿನ ಕೆಲವರು ಯಾತ್ರೆಯನ್ನ ತಡೆದು ಕಲ್ಲು ತೂರಾಟ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಸಂಘರ್ಷ ಏರ್ಪಟ್ಟಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಭಾರೀ ಹಿಂಸಾಚಾರ ಏರ್ಪಟ್ಟಿರುವುದರಿಂದ ಸುಮಾರು 2,500 ಪುರುಷರು, ಮಹಿಳೆಯರು ಮತ್ತು ಮಕ್ಕಳು ಗುರುಗ್ರಾಮ್ ಬಳಿಯ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾರೆ. 

ಭಿವಾನಿ ಹತ್ಯೆ ಪ್ರಕರಣದ ಆರೋಪಿ ಮೋನು ಮನೇಸರ್‌ ಎಂಬಾತ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿಯೇ ಸಮುದಾಯ ಆಕ್ರೋಶ ವ್ಯಕ್ತಪಡಿಸಿ, ಕಲ್ಲುತೂರಾಟಕ್ಕೆ ಮುಂದಾಗಿದೆ ಎನ್ನಲಾಗಿದೆ. ಮತ್ತೊಂದೆಡೆ ಬಜರಂಗದಳದ ಕಾರ್ಯಕರ್ತರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ವೀಡಿಯೋ ಪೋಸ್ಟ್‌ ಮಾಡಿದ್ದಕ್ಕೆ ಸಂಬಂಧಿಸಿದಂತೆ ಗಲಭೆ ನಡೆದಿದೆ ಎಂದೂ ಹೇಳಲಾಗುತ್ತಿದೆ.

ಇಂಟರ್ನೆಟ್‌ ಬಂದ್‌, 144 ನಿಷೇಧಾಜ್ಞೆ ಜಾರಿ:
ಗಲಭೆಯ ವಿಡಿಯೊ ಜಾಲತಾಣಗಳಲ್ಲೂ ಹರಿದಾಡುತ್ತಿದ್ದು ಸಂಘರ್ಷ ಮತ್ತಷ್ಟು ವಿಕೋಪಕ್ಕೆ ಹೋಗುವುದನ್ನು ತಡೆಯಲು ಆಗಸ್ಟ್‌ 2ರವರೆಗೆ ಹರ್ಯಾಣದ ನಹ್‌ ಜಿಲ್ಲೆಯಲ್ಲಿ ಅಂಜರ್ತಾಲ ಸೇವೆ ಸ್ಥಗಿತಗೊಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಸೆಕ್ಷನ್‌ 144 ನಿಷೇಧಾಜ್ಞೆ ಜಾರಿಗೊಳಿಸಿದ್ದು, ಸಾರ್ವಜನಿಕರು ಪೊಲೀಸರು ಘಟನೆ ಹತ್ತಿಕ್ಕಲು ಶತಪ್ರಯತ್ನ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist