ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಸ್ಪತ್ರೆಯಿಂದ ನವಾಜಾತ ಶಿಶುವನ್ನು ಕದ್ದು ಪರಾರಿಯಾಗುತ್ತಿದ್ದ ಆರೋಪಿ ಅರೆಸ್ಟ್!

Twitter
Facebook
LinkedIn
WhatsApp
ಆಸ್ಪತ್ರೆಯಿಂದ ನವಾಜಾತ ಶಿಶುವನ್ನು ಕದ್ದು ಪರಾರಿಯಾಗುತ್ತಿದ್ದ ಆರೋಪಿ ಅರೆಸ್ಟ್!

ಕೋಲಾರ ಅ.27: ಎಸ್‌ಎನ್‌‌ ಜಿಲ್ಲಾ ಆಸ್ಪತ್ರೆಯ (Diaristic Hospital) ಹೆರಿಗೆ ವಾರ್ಡ್‌ನಿಂದ ಕಳುವಾಗಿದ್ದ ನವಜಾತ ಶಿಶುವನ್ನು (Baby) ಕೋಲಾರ (Kolar) ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. ಮಗು ಕಳ್ಳತನ ಮಾಡಿದ್ದ ಆರೋಪಿಗಳ ಪೈಕಿ ಓರ್ವ ಮಹಿಳೆಯನ್ನು ಬಂಧಿಸಲಾಗಿದೆ.

ಗುರುವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ವಾರ್ಡ್‌ನಲ್ಲಿ ತಾಯಿ ನಿದ್ದೆ ಹೋದ ಸಂದರ್ಭದಲ್ಲಿ ಮೂವರು ಅಪರಿಚಿತ ಮಹಿಳೆಯರು ಹೊಂಚು ಹಾಕಿ ಮಗುವನ್ನು ಕದ್ದೊಯ್ದಿದಿದ್ದಾರೆ. ಮೂವರು ಮಹಿಳೆಯರು ನವಜಾತ ಗಂಡು ಶಿಶುವನ್ನು ಯಾರಿಗೂ ಗೊತ್ತಾಗದಂತೆ ಕಾಲೇಜು ಬ್ಯಾಗಿನಲ್ಲಿ ಬಚ್ಚಿಟ್ಟುಕೊಂಡು ಪರಾರಿಯಾಗಿದ್ದಾರೆ. ಆಸ್ಪತ್ರೆಯಿಂದ ಹೊರ ಬಂದು ಆಟೊ ಹತ್ತುತ್ತಿರುವ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ವಿಷಯ ತಿಳಿದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಕೋಲಾರ ಮಹಿಳಾ‌‌ ಠಾಣೆ ಪೊಲೀಸರು ತಮಿಳುನಾಡಿನ ಬೇರಿಕೆ ಬಳಿ ಮಗುವನ್ನು ರಕ್ಷಣೆ ಮಾಡಿದ್ದಾರೆ. ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಉಳಿದ‌ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ನಾಲ್ಕು ದಿನದ ಕಂದಮ್ಮ ತಾಯಿ ಮಡಿಲು ಸೇರಿದೆ. ಮಗುವನ್ನು ಕಂಡು ತಾಯಿಯ ಕಣ್ಣೀರು ಹಾಕಿದ್ದಾರೆ. ತಾಯಿ ಮಗುವನ್ನು ಬಿಗಿದಪ್ಪಿ ಸಂತೋಷಪಟ್ಟಿದ್ದಾಳೆ. ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಮೇಶ್ವರ್ ಒಡೆತನದ ಸಿದ್ದಾರ್ಥ ಇಂಜಿನಿಯರಿಂಗ್‌ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ತುಮಕೂರು, ಅಕ್ಟೋಬರ್​​ 26: ಗೃಹಸಚಿವ ಪರಮೇಶ್ವರ್ (G Parameshwara) ಒಡೆತನದ ಸಿದ್ದಾರ್ಥ ಇಂಜಿನಿಯರಿಂಗ್‌ ಕಾಲೇಜಿನ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. 

ನೇಣುಬಿಗಿದ ಸ್ಥಿತಿಯಲ್ಲಿ 19 ವರ್ಷದ ಬನಸಿರಿ (ಭಾವನಾ) ಶವ ಪತ್ತೆ ಆಗಿದೆ. ಬಿಇ ಐಎಸ್ ವಿಭಾಗದಲ್ಲಿ 3ನೇ ಸೆಮಿಸ್ಟರ್‌ ಓದುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ತುಮಕೂರು ಡಿವೈಎಸ್‌ಪಿ ಪಿ.ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ