ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೈಕ್ ನ ಸೈಡ್ ಸ್ಟ್ಯಾಂಡ್ ತೆಗೆಯದೆ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್ ; ಕಾಲೇಜು ವಿದಾರ್ಥಿ ಸಾವು!

Twitter
Facebook
LinkedIn
WhatsApp
ಬೈಕ್ ನ ಸೈಡ್ ಸ್ಟ್ಯಾಂಡ್ ತೆಗೆಯದೆ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್ ; ಕಾಲೇಜು ವಿದಾರ್ಥಿ ಸಾವು!

ಬೆಳ್ತಂಗಡಿ ನವೆಂಬರ್ 24: ಬೈಕ್ ನ ಸೈಡ್ ಸ್ಟ್ಯಾಂಡ್ ತೆಗೆಯದೆ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ನಿಯಂತ್ರಣ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿದ ಘಟನೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮೃತ ಯುವಕನನ್ನು ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಕಾಲೇಜಿನಲ್ಲಿ ಸ್ಪೋರ್ಟ್ಸ್ ಡೇ ಕಾರ್ಯಕ್ರಮ ಇದ್ದ ಕಾರಣ ದೀಕ್ಷಿತ್‌ ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವ ವೇಳೆ ಬೈಕ್‌ ಸ್ಟ್ಯಾಂಡ್‌ ತೆಗೆಯದೆ ಚಲಾಯಿಸಿಕೊಂಡು ಬಂದ ಕಾರಣ ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದಿದೆ.

ಈ ಸಂದರ್ಭ ಬೈಕ್‌ ಮಗುಚಿದ್ದು, ದೀಕ್ಷಿತ್‌ ತಲೆಗೆ ಗಂಭೀರ ಗಾಯಗಳಾಗಿದ್ದವು. ಉಜಿರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ದೀಕ್ಷಿತ್‌ ಸಾವನ್ನಪ್ಪಿದ್ದಾರೆ.

ಬಂಟ್ವಾಳ : ಬೈಕ್ ಕದ್ದು ಕೊಂಡೊಯ್ಯುವಾಗ ಅಪಘಾತ.ಚಪ್ಪಲಿ, ಬೈಕ್ ಬಿಟ್ಟು ಕಳ್ಳ ಪರಾರಿ..!

ಬಂಟ್ವಾಳ: ಬೈಕ್ ಕಳವು ಮಾಡಿಕೊಂಡು ಹೋಗುವ ವೇಳೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಬೈಕ್ ಬಿಟ್ಟು ಪರಾರಿಯಾದ ಘಟನೆ ಗುರುವಾರ ಸಂಜೆ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ.

ಇಲ್ಲಿನ‌ ತುಂಬೆ ಶಾಲಾ ಮಕ್ಕಳ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅತೀ ವೇಗ ‌ಮತ್ತು‌ ಅಜಾಗಕರುಕತೆಯಿಂದ ಬೈಕ್ ಸವಾರ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಘಟನೆಯ ಬಳಿಕ ಬೈಕನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ವಾಮದಪದವು ಗ್ರಾಮದ ಕೊರಗಟ್ಟೆ ನಿವಾಸಿ ಬೇಬಿ ಗೌಡ ಎಂಬವರ ಸ್ಲೆಂಡರ್ ಬೈಕ್ ಇದಾಗಿದ್ದು ಕಳವಾಗಿತ್ತು. ಬೇಬಿ ಗೌಡರ ಸಂಬಂಧಿಕರೋರ್ವರು ಅನಾರೋಗ್ಯದಿಂದ ಇದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕಾರಣ ವಾಮದಪದವಿನಿಂದ ಬಿಸಿರೋಡು ವರೆಗೆ ಬೈಕ್ ನಲ್ಲಿ ಬಂದಿದ್ದು , ಆ ಬಳಿಕ ಬಿಸಿರೋಡಿನ ಪ್ಲೈ ಓವರ್ ನ ಅಡಿ ಭಾಗದಲ್ಲಿ ಬೈಕನ್ನು ನಿಲ್ಲಿಸಿ, ಮಂಗಳೂರಿಗೆ ಬಸ್ ನಲ್ಲಿ ತೆರಳಿದ್ದರು. ಮಂಗಳೂರು ಆಸ್ಪತ್ರೆಗೆ ಭೇಟಿ ನೀಡಿ ಬಸ್ ನಲ್ಲಿ ವಾಪಸು ಆಗುತ್ತಿರುವಾಗ ಮೋಬೈಲ್ ಕರೆ ಬಂದಿದ್ದು, ನಿಮ್ಮ ಬೈಕ್ ಬ್ರಹ್ಮರಕೋಟ್ಲು ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ಸಾರ್ವಜನಿಕರು ತಿಳಿಸಿದ್ದರು. ಇವರಿಗೆ ಆಶ್ಚರ್ಯ ಉಂಟಾಗಿ ,ನಾನು ಬೈಕ್ ಬಿಸಿರೋಡಿನಲ್ಲಿ ನಿಲ್ಲಿಸಿದ್ದೆ ಅಲ್ಲಿ ಹೇಗೆ ಬಂತು ಎಂದು ಪ್ರಶ್ನಿಸಿದ್ದಾರೆ. ಬಳಿಕ ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ವಿಚಾರ ಸ್ಪಷ್ಟವಾಗಿದೆ. ಯಾರೋ ಅಂದಾಜು 45 ವರ್ಷದ ವ್ಯಕ್ತಿ ಬೈಕ್ ಕಳವು ಮಾಡಿ ಕೊಂಡು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು ಈ ಸಂದರ್ಭ ಅಲ್ಪಸ್ವಲ್ಪ ಪ್ರಮಾಣದಲ್ಲಿ ಗಾಯಗಳಾಗಿದ್ದುವು. ನಿಂತರೆ ಅಸಲಿ ಕಥೆ ಸಾರ್ವಜನಿಕರಿಗೆ ತಿಳಿಯುತ್ತದೆ ಎಂದು ಬೈಕ್ ಕಳ್ಳ ಬೈಕ್ ಬಿಟ್ಟು ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಇನ್ನು ಓಡುವ ಭರದಲ್ಲಿ ಆತ ಚಪ್ಪಲಿ ಕೂಡ ಬಿಟ್ಟು ಹೋಗಿದ್ದಾನೆ. ಇತ್ತೀಚಿನ ದಿನಗಳಲ್ಲಿ ಬಿಸಿರೋಡಿನಿಂದ ಅನೇಕ ವಾಹನಗಳ ಕಳವು ನಡೆದಿದೆ. ಅದರಲ್ಲೂ ಬಿಸಿರೋಡಿನ ಒವರ್ ಬ್ರಿಡ್ಜ್ ನ ಅಡಿಭಾಗದಲ್ಲಿ ನಿಲ್ಲಿಸಲಾಗಿದ್ದ ಅನೇಕ ದ್ವಿಚಕ್ರ ವಾಹನಗಳ ಕಳವು ನಡೆದಿದ್ದು,ಇದರಲ್ಲಿ ‌ಕೇವಲ ಕೆಲವೇ ವಾಹನಗಳ ಪತ್ತೆಯಾಗಿದ್ದು ಬಿಟ್ಟರೆ ಉಳಿದ ವಾಹನಗಳ ಇನ್ನೂ ಕೂಡ ಪತ್ತೆಯಾಗಿಲ್ಲ. ಕಳೆದ ಎಂಟು ವರ್ಷಗಳ ಹಿಂದೆ ವಾಮದಪದವು ದೇರೊಟ್ಟು ನಿವಾಸಿ ರಮೇಶ್ ಮೂಲ್ಯ ಅವರ ಪಲ್ಸರ್ ಬೈಕ್ ಕೂಡ ಕಳವಾಗಿತ್ತು. ಆದರೆ ಈವರೆಗೆ ಪತ್ತೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಬಿಸಿರೋಡಿನ ಠಾಣೆಯ ಕೂಗಳತೆಯ ದೂರದಲ್ಲಿ ಈ ರೀತಿಯಲ್ಲಿ ಹಾಡುಹಗಲೇ ಕಳವು ನಡೆಯುವುದು ಕಾನೂನು ಸುವ್ಯವಸ್ಥೆಗೆ ಕೆಟ್ಟ ಹೆಸರು ತರುವಂತದ್ದು, ಹಾಗಾಗಿ ಬಿಸಿರೋಡಿನ ಹೃದಯ ಭಾಗದಲ್ಲಾದರೂ ಉತ್ತಮ ಗುಣಮಟ್ಟದ ಸಿಸಿ ಕ್ಯಾಮರಾಗಳ ಅಳವಡಿಕೆ ಆಗಬೇಕಾಗಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ