ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ; ಕುಮಾರಸ್ವಾಮಿ

Twitter
Facebook
LinkedIn
WhatsApp
ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ; ಕುಮಾರಸ್ವಾಮಿ

ಬೆಂಗಳೂರು: ಲೋಕಸಭೆ ಚುನಾವಣೆಗೆ (Lok Sabha Elections) ಕರ್ನಾಟಕದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಅದರಂತೆ ಮೂರು ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಜೆಪಿ ಬಿಟ್ಟುಕೊಟ್ಟಿದ್ದು, ಉಳಿದ 25 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಜೆಡಿಎಸ್ ಬೆಂಬಲಿಸಲಿದೆ. ಆದರೆ, ಈ ಮೈತ್ರಿಯು ತಾತ್ಕಾಲಿಕವಲ್ಲ ಎಂದು ಹೇಳಿರುವ ಹೆಚ್.​ಡಿ. ಕುಮಾರಸ್ವಾಮಿ (H.D.Kumaraswamy), ಬಿಜೆಪಿ-ಜೆಡಿಎಸ್ ಮೈತ್ರಿ (BJP-JDS Alliance) ಮುಂದುವರಿಯಲಿದೆ. ಮೈತ್ರಿ ನಾಯಕರು ಭದ್ರ ಬುನಾದಿ ಹಾಕಿದರೆ ರಾಜ್ಯದಲ್ಲಿ ಕಾಂಗ್ರೆಸ್ (Congress) ಗೆಲುವು ಅಸಾಧ್ಯ ಎಂದರು.

ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಮೂರನೇ ಬಾರಿ ಕೇಂದ್ರದಲ್ಲಿ ಸರ್ಕಾರ ರಚನೆ‌ ಮಾಡುವುದು ಎಷ್ಟು ಸತ್ಯವೋ, ಸೂರ್ಯ ಚಂದ್ರ ಹುಟ್ಟುವುದು ಅಷ್ಟೇ ಸತ್ಯ. ಬೂತ್ ಮಟ್ಟ, ಜಿಲ್ಲಾ ಮಟ್ಟದಲ್ಲಿ ಪರಸ್ಪರ ಸಂಶಯಕ್ಕೆ ಒಳಗಾಗದೇ ಕೆಲಸ ಮಾಡಬೇಕು. ಮೈತ್ರಿ ನಾಯಕರು ಭದ್ರ ಬುನಾದಿ ಹಾಕಿದರೆ ಕಾಂಗ್ರೆಸ್ ಬರಲು ಸಾಧ್ಯವಿಲ್ಲ ಎಂದರು.

ಮೈತ್ರಿಯಿಂದಾಗಿ ಕಾಂಗ್ರೆಸ್‌ಗೆ ಅಂದೇ ಭಯ ಶುರುವಾಗಿದೆ. ಇದು ತಾತ್ಕಾಲಿಕ ಮೈತ್ರಿ ಅಲ್ಲ, ಇನ್ನೂ ಮುಂದೆ ಮೈತ್ರಿಯನ್ನು ಮುಂದುವರಿಸಿಕೊಂಡು ಹೋಗಬೇಕು. ಇದು ರಾಜ್ಯದ ಅಭಿವೃದ್ಧಿ ಮೈತ್ರಿಯಾಗಿದೆ. ನನ್ನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಕನಿಷ್ಠ 25 ಸಾವಿರ ಮತಗಳ ಲೀಡ್ ಕೊಡಿಸುತ್ತೇನೆ ಎಂದರು.

ನಮ್ಮ ಈ ಮೈತ್ರಿ ಕೃತಕವಾಗಿ ಸೃಷ್ಟಿಯಾಗಿಲ್ಲ. ಹಿಂದಿನ ಮೈತ್ರಿ ಸರ್ಕಾರದಲ್ಲಿ ಯಡಿಯೂರಪ್ಪ ಸಹಕಾರ ಕೊಟ್ಡಿದ್ದಕ್ಕೆ ಹಲವು ಒಳ್ಳೆಯ ಕೆಲಸ ಆಗಿದೆ. ಅದೇ ಮಾದರಿಯ ಸರ್ಕಾರ ಮತ್ತೆ ತರಬೇಕು, ಇದಕ್ಕೆ ಈ ಮೈತ್ರಿ ವೇದಿಕೆ ಆಗಬೇಕು. ಎರಡೂ ಪಕ್ಷಗಳಲ್ಲಿ ಬೂತ್ ಮಟ್ಟದಿಂದ ಸಮನ್ವಯತೆ ಸಾಧಿಸಲು ಪರಸ್ಪರ ಪಕ್ಷಗಳ ಬಾವುಟಗಳ ಬಳಕೆ ಮಾಡುತ್ತೇವೆ ಎಂದರು.

ಎರಡೂ ಪಕ್ಷಗಳ ಸಂಶಯಕ್ಕೆ ಒಳಗಾಗದೇ ಒಟ್ಟಾಗಿ ಹೋಗುತ್ತೇವೆ. ನಮ್ಮ ಕಾರ್ಯಬದ್ಧತೆಯಲ್ಲಿ ಕಿಂಚಿತ್ತೂ ಅಡ್ಡಿ ಆಗಬಾರದು. ಸಣ್ಣಪುಟ್ಟ ಸಮಸ್ಯೆ ಇದ್ದರೆ ಉಸ್ತುವಾರಿಗಳ ಗಮನಕ್ಕೆ ತನ್ನಿ. ಇದು ತಾತ್ಕಾಲಿಕ ಮೈತ್ರಿ ಅಲ್ಲ, ಮುಂದೆಯೂ ಮುಂದುವರೆಯಬೇಕು ಎಂಬ ಉದ್ದೇಶ ಇದೆ ಎಂದರು.

ಬೆಂಗಳೂರಿನಲ್ಲಿ ಬಿಜೆಪಿ-JDS​​ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಉಭಯ ಪಕ್ಷದ ಸಭೆ ಮಾಡಲು ಆಗಿರಲಿಲ್ಲ. ಆರೋಗ್ಯ ಸಮಸ್ಯೆಯಿಂದ ಈ ಸಭೆ ಮುಂದೂಡಲಾಗಿತ್ತು. ಎರಡೂ ಪಕ್ಷದಲ್ಲಿ ವಿಶ್ವಾಸದ ಮೂಲಕ ಕೆಲಸ ಆಗಬೇಕು. ನಮ್ಮ ಗುರಿ ಕರ್ನಾಟಕದಲ್ಲಿ 28 ಸ್ಥಾನಗಳನ್ನ ಗೆಲ್ಲುವುದಾಗಿದೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ