ಭಾನುವಾರ, ಮೇ 26, 2024
ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?-ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!-ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ದಾಂಪತ್ಯ ಜೀವನದಲ್ಲಿ ಬಿರುಕು? ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಸುದ್ದಿ..!-ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ..!-ಅಚ್ಚರಿ ಘಟನೆ; ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!

Twitter
Facebook
LinkedIn
WhatsApp
ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!

ಮಲೇಷ್ಯಾ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್​​ನಲ್ಲಿ ಸಂಚರಿಸುತ್ತಿದ್ದ 19 ವರ್ಷದ ಯುವಕನ ಕಣ್ಣಿನೊಳಗೆ ಬೈಕ್‌ನ ಬ್ರೇಕ್ ಹ್ಯಾಂಡಲ್ ನುಗ್ಗಿದೆ. ತಕ್ಷಣ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ವೈದ್ಯರ ಸಮಯ ಪ್ರಜ್ಞೆಯಿಂದಾಗಿ ಇದೀಗ ಯುವಕ ಯಾವುದೇ ದೃಷ್ಟಿ ದೋಷದ ಸಮಸ್ಯೆಯಿಲ್ಲದೇ ಚೇತರಿಸಿಕೊಳ್ಳುತ್ತಿದ್ದಾನೆ. ಈ ಈ ಘಟನೆ ಮಲೇಷ್ಯಾದ ಕೌಲಾಲಂಪುರ್‌ ನಲ್ಲಿ ನಡೆದಿದೆ.

ಯುವಕನನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ವೈದ್ಯರು ಯುವಕನನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದು, ಕಣ್ಣಿನ ಒಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್​​ ಅನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. CT ಸ್ಕ್ಯಾನ್‌ ಮಾಡಲಾಗಿದ್ದು, ಈವೇಳೆ ಕಣ್ಣಿನ ಗುಡ್ಡೆಗಿಂತ ಕೆಲವೇ ಕೆಲವು ಮಿಲಿ ಮೀಟರ್​​ ಅಂತದಲ್ಲಿ ಬ್ರೇಕ್ ಹ್ಯಾಂಡಲ್ ಸಿಲುಕಿರುವುದು ಕಂಡುಬಂದಿದ್ದು, ಸದ್ಯ ಕಣ್ಣಿನ ಗುಡ್ಡೆಗೆ ಯಾವುದೇ ಹಾನಿಯಾಗಿಲ್ಲ. ಕಣ್ಣುಗುಡ್ಡೆಯ ಕೆಳಗೆ ಭಾಗ ಹಾಗೂ ಮೂಗಿನ ಸುತ್ತಲಿನ ಮೂಳೆಗೆ ಹಾನಿಯಾಗಿದ್ದು, ಮೂಗಿನ ಸುತ್ತಲಿನ ಹಾನಿಗೊಳಗಾದ ಮೂಳೆಯನ್ನು ಎರಡು ಸ್ಕ್ರೂಗಳಿಂದ ಸರಿಪಡಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕೌಲಾಲಂಪುರ್‌ನಲ್ಲಿರುವ ಯೂನಿವರ್ಸಿಟಿಯ ಕಣ್ಣಿನ ಸಂಶೋಧನಾ ಕೇಂದ್ರದಲ್ಲಿ ಆತನ ಕಣ್ಣಿನ ಒಳಗೆ ನುಗ್ಗಿದ್ದ ಬೈಕ್‌ನ ಬ್ರೇಕ್ ಹ್ಯಾಂಡಲ್​​ನ CT ಸ್ಕ್ಯಾನ್‌ ಚಿತ್ರವನ್ನು ಹಂಚಿಕೊಂಡಿದ್ದಾರೆ. ಸದ್ಯ ಶಸ್ತ್ರಚಿಕಿತ್ಸೆಯ ಬಳಿಕ ಯುವಕ ಚೇತರಿಸಿಕೊಳ್ಳುತ್ತಿದ್ದು, ಯುವಕನ ದೃಷ್ಟಿಗೆ ಯಾವುದೇ ಹಾನಿಯಾಗಿಲ್ಲ ಎಂದು ವೈದ್ಯರು ತಿಳಿಸಿರುವುದು ವರದಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ