ರೈಲು ಅಪಘಾತದಲ್ಲಿ ಸಿಲುಕಿಕೊಂಡ ಗಾಯಾಳುಗಳನ್ನು ಆಸ್ಪತ್ರೆಗೆ ಕರೆಯದೊಯ್ಯುತ್ತಿದ್ದ ಬಸ್ ಅಪಘಾತ..!
Twitter
Facebook
LinkedIn
WhatsApp
ಕೊಲ್ಕತ್ತ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ಬಳಿ ಮೂರು ರೈಲುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಶನಿವಾರ ಅಪಘಾತಕ್ಕೀಡಾಗಿದೆ.
ಪಶ್ಚಿಮ ಬಂಗಾಳದ ಮೇದಿನಿಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ಬಸ್ ಹಾಗೂ ಪಿಕ್ಅಪ್ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಆಸ್ಪತ್ರೆಗೆ ದಾಖಲು
ಗಾಯಾಳುಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಹಾಗೂ ಪಿಕ್ಅಪ್ ವ್ಯಾನ್ ನಡುವೆ ಅಪಘಾತ ಸಂಭವಿಸಿದ ಕಾರಣ ಮೇದಿನಿಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳೀಯರ ಸಹಾಯದೊಂದಿಗೆ ಸಂಚಾರ ದಟ್ಟಣೆ ನಿವಾರಿಸಿ ಗಾಯಾಳುಗಳನ್ನು ಪಶ್ಚಿಮ ಬಂಗಾಳದಲ್ಲಿರುವ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.