ಶನಿವಾರ, ಏಪ್ರಿಲ್ 20, 2024
ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮರಕ್ಕೆ ಢಿಕ್ಕಿ ಹೊಡೆದು ಕಾರಿಗೆ ಬೆಂಕಿ; ನಾಲ್ವರು ಸಜೀವ ದಹನ

Twitter
Facebook
LinkedIn
WhatsApp
images 19

ಭೋಪಾಲ್:‌ ಮರವೊಂದಕ್ಕೆ ಕಾರು ಢಿಕ್ಕಿಯಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ಘಟನೆ ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.

ಜಿಲ್ಲೆಯ ತಿಮರಿ ಪೊಲೀಸ್ ಠಾಣೆ ವ್ಯಾಪ್ತಿಯ ಪೋಖರ್ನಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬುಧವಾರ ಮುಂಜಾನೆ (ಮೇ.31 ರಂದು) ಮದುವೆಯೊಂದರಲ್ಲಿ ಪಾಲ್ಗೊಂಡು ವಾಪಾಸಾಗುತ್ತಿದ್ದರು.ಈ ವೇಳೆ ಕಾರು ವೇಗದಿಂದ ಬಂದು ಮರವೊಂದಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

ಪರಿಣಾಮ ವರ್ಕಳ ಚರಖೇಡ ಗ್ರಾಮದ ನಿವಾಸಿಗಳಾದ ಅಖಿಲೇಶ್ ಕುಶ್ವಾಹ, ಗೋಲು ಚೌಧರಿ, ರಾಕೇಶ್ ಕುಶ್ವಾಹ ಮತ್ತು ಅವರ ಪತ್ನಿ ಶಿವಾನಿ ಅವರು ಸಜೀವ ದಹನವಾಗಿದ್ದಾರೆ. ಮೃತರು 25 ರಿಂದ 30 ವರ್ಷದ ಅಸುಪಾಸಿನವರು ಎಂದು ಪೊಲೀಸರು ಹೇಳಿದ್ದಾರೆ.

“ಅಪಘಾತದಲ್ಲಿ ಸುಟ್ಟಗಾಯಗಳ ನಂತರ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆರೋಗ್ಯ ಸಮುದಾಯ ಕೇಂದ್ರ ತಿಮರ್ನಿಗೆ ಕಳುಹಿಸಲಾಗಿದೆ” ಎಂದು ಪೊಲೀಸ್ ಅಧೀಕ್ಷಕ (ಎಸ್ಪಿ) ಹಾರ್ದಾ ಸಂಜೀವ್ ಕುಮಾರ್ ಕಾಂಚನ್ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ