ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತೆಲಂಗಾಣ ಶಾಸಕ ರಾಜಾ ಸಿಂಗ್‌ ಠಾಕೂರ್‌ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು!

Twitter
Facebook
LinkedIn
WhatsApp
ತೆಲಂಗಾಣ ಶಾಸಕ ರಾಜಾ ಸಿಂಗ್‌ ಠಾಕೂರ್‌ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು!

ಬೆಂಗಳೂರು, ಅ 21: 2017ರಲ್ಲಿ ಯಾದಗಿರಿಯಲ್ಲಿ ಪ್ರಚೋದನಕಾರಿ ಭಾಷಣ ಆರೋಪದಡಿ ತೆಲಂಗಾಣ ಶಾಸಕ ರಾಜಾ ಸಿಂಗ್‌ ಠಾಕೂರ್‌ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ ರದ್ದು ಗೊಳಿಸಿದೆ. ನಿಯಮದಂತೆ ವಿಚಾರಣೆಗೆ ಪೂರ್ವಾನುಮತಿ ಪಡೆದಿಲ್ಲಎಂಬ ಕಾರಣಕ್ಕೆ ಪ್ರಕರಣ ರದ್ದುಗೊಳಿಸುತ್ತಿರುವುದಾಗಿ ನ್ಯಾಯಾಲಯ ಹೇಳಿದೆ.

ಇದರಿಂದಾಗಿ ಶಾಸಕ ರಾಜಾಸಿಂಗ್ ನಿಟ್ಟುಸಿರು ಬಿಡುವಂತಾಗಿದೆ. ರಾಜಾ ಸಿಂಗ್‌ ಠಾಕೂರ್‌ ಸಲ್ಲಿಸಿದ್ದ ಪ್ರಕರಣವನ್ನು ಆಲಿಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

ಪ್ರಕರಣದ ವಿವರ: ಯಾದಗಿರಿ ಜಿಲ್ಲೆಯಲ್ಲಿ2017ರ ಡಿ.12ರಂದು ನಡೆದ ಹಿಂದೂ ವಿರಾಟ ಸಮಾವೇಶದಲ್ಲಿಅರ್ಜಿದಾರರು ಭಾಗವಹಿಸಿದ್ದರು. ಅವರಿಗೆ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುವಂತಿಲ್ಲ ಹಾಗೂ ಯಾವುದೇ ವಿವಾದಾತ್ಮಕ ಹೇಳಿಕೆ ನೀಡುವಂತಿಲ್ಲಎಂದು ಮೊದಲನೇ ಷರತ್ತು ವಿಧಿಸಿ ಸಭೆ ನಡೆಸಲು ಅನುಮತಿ ನೀಡಲಾಗಿತ್ತು.

ಆದರೂ, ಸಹ ಅವರು ವೇದಿಕೆಯಲ್ಲಿಕತ್ತಿಯನ್ನು ಝಳಪಿಸಿ ಜನರನ್ನು ಪ್ರಚೋದಿಸುವಂತಹ ಭಾಷಣವನ್ನು ಮಾಡಿದ್ದರು. ಹಾಗಾಗಿ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿತ್ತು. ಪೊಲೀಸರು ತನಿಖೆಯನ್ನು ಪೂರ್ಣಗೊಳಿಸಿ 2019ರಲ್ಲಿ ಯಾದಗಿರಿ ಜಿಲ್ಲಾ ಮ್ಯಾಜಿಸ್ಪ್ರೇಟ್‌ ಕೋರ್ಟ್‌ನಲ್ಲಿಐಪಿಸಿ ಸೆಕ್ಷನ್‌ 153ಎ ಮತ್ತು ಶಸ್ತ್ರಾಸ್ತ್ರ ಕಾಯಿದೆ ಸೆಕ್ಷನ್‌ 25(1ಎಎ) ಅಡಿಯಲ್ಲಿಆರೋಪ ಹೊರಿಸಿ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು.

ಈ ಪ್ರಕರಣದಲ್ಲಿಒರ್ವ ಜನಪ್ರತಿನಿಧಿ ಇದ್ದ ಕಾರಣ ಪ್ರಕರಣವನ್ನು ಸಂಸದರು/ಶಾಸಕರ ವಿರುದ್ಧದ ಪ್ರಕರಣಗಳನ್ನು ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ವಿಶೇಷ ನ್ಯಾಯಾಲಯ ಆರೋಪದ ಕಾಗ್ನಿಜೆನ್ಸ್‌ ತೆಗೆದುಕೊಂಡು ಆರೋಪ ನಿಗದಿಗೆ ವಿಚಾರಣೆ ನಡೆಸುತ್ತಿತ್ತು.

ಕೋರ್ಟ್ ಆದೇಶವೇನು?

ಅರ್ಜಿದಾರರ ವಿರುದ್ಧ ಆರೋಪಗಳನ್ನು ಹೊರಿಸಲಾಗಿದೆ. ಆದರೆ ವಿಚಾರಣೆಗೆ ಪೂರ್ವಾನುಮತಿ ಪಡೆದಿಲ್ಲ. ಹಾಗಾಗಿ ಐಪಿಸಿ ಸೆಕ್ಷನ್‌ 153ಎ ಅವರಿಗೆ ಅನ್ವಯಿಸುವುದಿಲ್ಲ. ಜತೆಗೆ ಮೇಲ್ನೋಟಕ್ಕೆ ಸಾಕ್ಷ್ಯಗಳೂ ಸಹ ಇಲ್ಲ. ಹಾಗಾಗಿ ಪ್ರಕರಣ ರದ್ದುಗೊಳಿಸಲಾಗುತ್ತಿದೆ” ಎಂದು ನ್ಯಾಯಾಲಯ ಆದೇಶಿಸಿದೆ.

ಅರ್ಜಿದಾರರ ಪರ ವಕೀಲರು, ಅಪರಾಧ ದಂಡ ಸಂಹಿತೆ ಸೆಕ್ಷನ್‌ 193 ಅಡಿಯಲ್ಲಿ ಕೇಂದ್ರ ಅಥವಾ ರಾಜ್ಯ ಸರಕಾರದಿಂದ ಅಗತ್ಯ ಪೂರ್ವಾನುಮತಿ ಪಡೆಯದೆ ವಿಚಾರಣೆ ನಡೆಸಲಾಗುತ್ತಿದೆ. ಇದು ಅಕ್ರಮ ಹಾಗೂ ಕಾನೂನು ಬಾಹಿರ ಎಂದು ವಾದಿಸಿದ್ದರು.

ಅಲ್ಲದೆ, ಶಸ್ತ್ರಾಸ್ತ್ರ ಕಾಯಿದೆಯಡಿ ಆರೋಪ ಹೊರಿಸಲಾಗಿದೆ. ಆದರೆ ಅದಕ್ಕೆ ಯಾವುದೇ ಪ್ರತ್ಯಕ್ಷದರ್ಶಿಗಳ ಸಾಕ್ಷಿಗಳಿಲ್ಲ. ಯಾವುದೇ ಸಾಕ್ಷಿಗಳಿಲ್ಲದೆ ಅಕ್ರಮವಾಗಿ ಹೂಡಿರುವ ಆರೋಪಗಳು ಕಾನೂನಿನಡಿ ಊರ್ಜಿತವಲ್ಲಎಂದು ಹೇಳಿದ್ದರು.

ಆದರೆ ಪ್ರಾಸಿಕ್ಯೂಷನ್‌ ಅರ್ಜಿದಾರರ ವಾದವನ್ನು ವಿರೋಧಿಸಿ, ಅರ್ಜಿದಾರರು ಕತ್ತಿ ಪ್ರದರ್ಶಿಸಿದ್ದಾರೆ ಮತ್ತು ಪ್ರಚೋದನಾತ್ಮಕ ಭಾಷಣ ಮಾಡಿದ್ದಾರೆ. ಅದು ಐಪಿಸಿ ಸೆಕ್ಷನ್‌ 153ಎ ಅಡಿ ಅಪರಾಧವಾಗಿದೆ. ಪೂರ್ವಾನುಮತಿಯನ್ನು ಐದು ವರ್ಷದೊಳಗೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು ಎಂದು ವಾದ ಮಂಡಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist