ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಗ್ರ ಹೇಳಿಕೆಗಳಿಂದ ಅಬ್ಬರಿಸುತ್ತಿದ್ದ ಕಾಂಗ್ರೆಸ್‌ ಕಟ್ಟಾಳು ಈಗ ಸೈಲೆಂಟ್‌!

Twitter
Facebook
LinkedIn
WhatsApp
BK Hariprasad

ಕಾಂಗ್ರೆಸ್‌ ಸರ್ಕಾರದ ಅದ್ಭುತ ಗೆಲುವು, ನಂತರದ ಸರ್ಕಾರ-ಸಂಪುಟ ರಚನೆ, ಗ್ಯಾರಂಟಿ ಯೋಜನೆ, ಬಳಿಕ ಅಧಿವೇಶನ ಈ ಎಲ್ಲಾ ಘಟನೆಗಳಿಂದ ಒಬ್ಬ ಕಾಂಗ್ರೆಸ್‌ ನಾಯಕ ಕಾಣೆಯಾಗಿದ್ದಾರೆ. ವಿಧಾನ ಪರಿಷತ್‌ನಲ್ಲಿ ಅಬ್ಬರಿಸುತ್ತಿದ್ದ ಕಾಂಗ್ರೆಸ್‌ ಕಟ್ಟಾಳು ಬಿಕೆ ಹರಿಪ್ರಸಾದ್‌ ಈಗ ಫುಲ್‌ ಸೈಲೆಂಟ್‌ ಆಗಿದ್ದಾರೆ. 

ಬೆಂಗಳೂರು (ಜು.15): ರಾಜ್ಯ ರಾಜಕಾರಣದಲ್ಲಿ ಏನೋ ಹೊಸದಾದ ಬೆಳವಣಿಗೆ ನಡೆಯುತ್ತಿದೆ. ಚುನಾವಣೆಗಳು ಆಯ್ತು, ಹೊಸ ಸರ್ಕಾರ, ಸಂಪುಟ ಬಂದಾಯ್ತು, ಸಿದ್ಧರಾಮಯ್ಯ ಮುಖ್ಯಮಂತ್ರಿ ಆದ್ರು, ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಮುಗಿಬಿದ್ದಿದ್ದಾರೆ.

ಈ ಎಲ್ಲದರ ನಡುವೆ ಒಬ್ಬ ವ್ಯಕ್ತಿ ಬಹಳ ಮಿಸ್ಸಿಂಗ್ ಅನಿಸುತ್ತಿದೆ. ವಿಧಾನಪರಿಷತ್‌ನ ಸಭಾನಾಯಕರಾಗಿದ್ದ ಬಿಕೆ ಹರಿಪ್ರಸಾದ್‌ ಎಲ್ಲಿ ಹೋದರು ಎನ್ನುವ ಕುತೂಹಲ ಎಲ್ಲರಲ್ಲಿದೆ. ಸಚಿವ ಸ್ಥಾನ ತಪ್ಪಿದ ಹಿನ್ನಲೆಯಲ್ಲಿ ಹರಿಪ್ರಸಾದ್‌ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಅದರೊಂದಿಗೆ ಪರಿಷತ್‌ ಕಲಾಪಗಳಿಗೂ ಅವರು ಗೈರಾಗುತ್ತಿದ್ದಾರೆ. ಬಿಜೆಪಿಯನ್ನು ಟೀಕೆ ಮಾಡುವಾಗ ಉಗ್ರ ಹೇಳಿಕೆಗಳಿಂದ ಮೊದಲ ಸಾಲಿನಲ್ಲಿ ನಿಲ್ಲುತ್ತಿದ್ದ ಬಿಕೆ ಹರಿಪ್ರಸಾದ್‌ ಮೌನ ಎಷ್ಟು ಪರಿಣಾಮಕಾರಿಯಾಗಲಿದೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

ಬಿಜೆಪಿ ವಿರುದ್ಧ ಸೈದ್ಧಾಂತಿಕವಾಗಿ ತೀವ್ರ ವಾಗ್ದಾಳಿ ನಡೆಸುತ್ತಿದ್ದ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ‌ಅಧಿಕಾರಕ್ಕೆ ಬಂದರೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಅಲ್ಲದೇ ಸಂಭವನೀಯರ ಪಟ್ಟಿಯಲ್ಲಿ ಬಿಕೆ ಹರಿಪ್ರಸಾದ್ ಅವರ ಹೆಸರು ಇತ್ತು.

ಆದ್ರೆ, ಪಟ್ಟಿ ಕೊನೆ ಕ್ಷಣದಲ್ಲಿ ಬದಲಾಗಿದ್ದರಿಂದ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ.

ಬಿಕೆ ಹರಿಪ್ರಸಾದ್​ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬಣದಲ್ಲಿ ಗುರುಸಿಕೊಂಡಿದ್ದು, ಅವರಿಗೆ ಸಚಿವ ಸ್ಥಾನ ಕೊಡಿಸಲು ಡಿಕೆ ಶಿವಕುಮಾರ್ ಸಹ ಇನ್ನಿಲ್ಲದ ಕಸರತ್ತು ನಡೆಸಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಹರಿಪ್ರಸಾದ್ ಅವರಿಗೆ ಮಂತ್ರಿಭಾಗ್ಯ ಸಿಕ್ಕಿಲ್ಲ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ