ಉದ್ಯಾವರ ಸೇತುವೆಯಲ್ಲಿ ಸ್ಕೂಟರ್ ಬಿಟ್ಟು ಹೊಳೆಗೆ ಹಾರಿದ್ದ ವ್ಯಕ್ತಿಯ ಮೃತದೇಹ ಪತ್ತೆ..!
ಉಡುಪಿ ಡಿಸೆಂಬರ್ 14: ಉದ್ಯಾವರ ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಯ ಮೃತ ದೇಹವು ನಿನ್ನೆ ಸಂಜೆ ಉದ್ಯಾವರ ಅಂಕುದ್ರು ಎಂಬಲ್ಲಿ ಪತ್ತೆಯಾಗಿದೆ.
ಮೃತರನ್ನು ಉಡುಪಿ ನಗರದ ಕೋರ್ಟ್ ರಸ್ತೆಯ ನಿವಾಸಿ, ಉಡುಪಿ ಪೈ ಇಂಟರ್ನ್ಯಾಷನಲ್ ಎಲೆಕ್ಟ್ರಾನಿಕ್ ಮಳಿಗೆಯ ಸೇಲ್ಸ್ ಮ್ಯಾನ್ ರವೀಂದ್ರ ಭಟ್( 55 ) ಎಂದು ಗುರುತಿಸಲಾಗಿದೆ ಅವರು ನಿನ್ನೆ ಮನೆಯಿಂದ ಹೋದವರು ನಾಪತ್ತೆಯಾಗಿದ್ದರು ತನ್ನ ಸ್ಕೂಟರ್ ಅನ್ನು ಸೇತುವೆ ಮೇಲೆ ನಿಲ್ಲಿಸಿ ಮೇಲಿನಿಂದ ಹೊಳೆಗೆ ಹಾರಿ ನಾಪತ್ತೆಯಾಗಿದ್ದರು.
ಸ್ಥಳಕ್ಕೆ ಆಗಮಿಸಿದ ಕಾಪು ಪೋಲೀಸರು ದೋಣಿ ಮೂಲಕ ಶೋಧ ಕಾರ್ಯಾ ನಡೆಸಿದ್ದು ಮೃತ ದೇಹವು ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಕುಕ್ಕೆ ಚಂಪಾಷಷ್ಠಿ – ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು ಡಿಸೆಂಬರ್ 14:- ಜಿಲ್ಲೆಯ ಕಡಬ ತಾಲೂಕು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಟಿ ಮಹೋತ್ಸವ ಇದೇ ಡಿಸೆಂಬರ್ 24ರ ವರೆಗೆ ನಡೆಯಲಿದೆ.
ಡಿಸೆಂಬರ್ 16ರಿಂದ 19ರವರೆಗೆ ಮುಖ್ಯ ರಥೋತ್ಸವಗಳು ನಡೆಯಲಿದೆ. ಈ ಸಂದರ್ಭದಲ್ಲಿ ಅಪಾರ ಭಕ್ತದಿಗಳು ಸೇರುವುದರಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಡಿಸೆಂಬರ್ 17ರಂದು ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 18ರ ಮಧ್ಯರಾತ್ರಿ 12 ಗಂಟೆಯವರೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂಚಾಡಿ ಬಳಿ ಇರುವ ಪ್ರಶಾಂತ್ ಬಾರ್ ಆಂಡ್ ರೆಸ್ಟೋರೆಂಟ್ ಹಾಗೂ ಬೆಳ್ಳಿ ಬಾರ್ ಆಂಡ್ ರೆಸ್ಟೋರೆಂಟ್ ಗಳನ್ನು ಮತ್ತು ಎಲ್ಲಾ ವಿವಿಧ ಅಮಲು ಪದಾರ್ಥಗಳ ಮಾರಾಟವನ್ನು ನಿರ್ಬಂಧಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ.