ಅತ್ತಿಬೆಲೆ ಪಟಾಕಿ ದುರಂತ ಸಾವಿನ ಸಂಖ್ಯೆ 16ಕ್ಕೆ ಏರಿಕೆ : ಪಟಾಕಿ ತರಲು ಹೋಗಿದ್ದ ಯುವಕ ಸಾವು!
ಆನೇಕಲ್ ಅಕ್ಟೋಬರ್ 12: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಸಾವನಪ್ಪಿದವರ ಸಂಖ್ಯೆ ಇದೀಗ 16ಕ್ಕೇ ಏರಿಕೆಯಾಗಿದೆ. ಪಟಾಕಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೆಂಕಟೇಶ್ ಎಂಬುವರು ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ವೆಂಕಟೇಶ್ ಸ್ನೇಹಿತನೊಂದಿಗೆ ಪಟಾಕಿ ಖರೀದಿಗೆ ಹೋಗಿದ್ದ ಸಂದರ್ಭದಲ್ಲಿ ಪಟಾಕಿ ದುರಂತ ಸಂಭವಿಸಿತ್ತು. ದುರಂತದಲ್ಲಿ ಅವರ ಸ್ನೇಹಿತ ಪಾರಾಗಿದ್ದು, ವೆಂಕಟೇಶ್ ಗೋದಾಮಿನ ಒಳಗೆ ಸಿಲುಕಿ ಹಾಕಿಕೊಂಡಿದ್ದರು. ಬೆನ್ನು, ತಲೆ, ಕೈ ಕಾಲುಗಳುಗಳಿಗೆ ಬೆಂಕಿ ತಗುಲಿ ಸುಟ್ಟ ಗಾಯಗಳಾಗಿದ್ದವು.
ಮೃತ ವೆಂಕಟೇಶ್ (25) ಬೆಂಗಳೂರು ನಗರ ಜಿಲ್ಲೆಯ ಗಾರೆ ಭಾವಿಪಾಳ್ಯದ ನಿವಾಸಿಯಾಗಿದ್ದು, ವೃತ್ತಿಯಲ್ಲಿ ಛಾಯಾಗ್ರಾಹಕರಾಗಿದ್ದ ಅವರು ಪ್ರವೃತ್ತಿಯಲ್ಲಿ ಬಾಡಿ ಬಿಲ್ಡರ್ ಆಗಿದ್ದರು. ಪರಿಚಯದವರ ಕಾರ್ಯಕ್ರಮಕ್ಕೆ ಪಟಾಕಿ ತರಲು ಅತ್ತಿಬೆಲೆಗೆ ಹೋಗಿದ್ದರು. ದುರಂತದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಯುವಕ ತಮಿಳುನಾಡಿನ ದಿನೇಶ್ ಬುಧವಾರ ಮೃತಪಟ್ಟಿದ್ದರು
ಅನ್ಯಜಾತಿ ಯುವಕನನ್ನ ಪ್ರೀತಿಸುತ್ತಿದ್ದ ಕಾರಣಕ್ಕೆ ಮಗಳ ಕತ್ತು ಕೊಯ್ದ ತಂದೆ..!
ಚಿಕ್ಕಬಳ್ಳಾಪುರ: ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳೆಂಬ ಕಾರಣಕ್ಕೆ ಮುದ್ದು ಮಗಳ ಕತ್ತನ್ನೇ ಕೊಯ್ದು ತಂದೆ ಕೊಲೆ ಮಾಡಿದ ಘಟನೆ ಬುಧವಾರ ತಡರಾತ್ರಿ ದೇವನಹಳ್ಳಿಯ ಬಿದಲೂರು ಗ್ರಾಮದಲ್ಲಿ ನಡೆದಿದೆ.
ಕವನ (20) ಮೃತ ದುರ್ದೈವಿ ಯುವತಿಯಾಗಿದ್ದಾಳೆ,
ಆರೋಪಿ ತಂದೆ ಮಂಜುನಾಥ್ (47) ಕೊಲೆ ಮಾಡಿ ಪೋಲಿಸರಿಗೆ ಶರಣಾಗಿದ್ದಾನೆ.
ಮಗಳು ಪ್ರೀತಿ ಮಾಡುತ್ತಿದ್ದ ವಿಷಯ ತಿಳಿದು ಆಕ್ರೋಶಗೊಂಡಿದ್ದ ಚಿಕನ್ ಅಂಗಡಿ ಇಟ್ಟುಕೊಂಡಿದ್ದ ತಂದೆ ಮಂಜುನಾಥ್ ಕೋಳಿ ಕತ್ತರಿಸುವ ಕತ್ತಿಯಿಂದಲೇ ಮಗಳ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.
ಸ್ಥಳಕ್ಕೆ ವಿಶ್ವನಾಥಪುರ ಪೋಲಿಸರು ಭೇಟಿ ಪರಿಶೀಲಿಸಿದ್ದು, ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿ ಮಂಜುನಾಥ್ ಕಿರಿಯ ಮಗಳು ಪ್ರೀತಿಸಿ ಬೇರೊಬ್ಬ ಯುವಕನೊಂದಿಗೆ ಪರಾರಿಯಾಗಿದ್ದಳು.
ಈ ಹಿನ್ನೆಲೆಯಲ್ಲಿ ಹಿರಿಯ ಮಗಳ ಜೊತೆ ತಡರಾತ್ರಿ ಗಲಾಟೆ ನಡೆದಿತ್ತು.
ಚಿಕ್ಕವಳು ಓಡಿ ಹೋದಳು, ನೀನೂ ಸಹ ಅನ್ಯಜಾತಿ ಯವಕನನ್ನ ಪ್ರೀತಿ ಮಾಡ್ತಿದ್ದೀಯಾ? ನಾವು ಊರಲ್ಲಿ ಹೇಗೆ ಮರ್ಯಾದೆಯಿಂದ ಒಡಾಡಬೇಕು ಅಂತಾ ಮಗಳನ್ನ ಕೊಂದೇಬಿಟ್ಟಿದ್ದಾನೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.