ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಐಸ್‍ಲ್ಯಾಂಡ್‍ನಲ್ಲಿ 800 ಬಾರಿ ಕಂಪಿಸಿದ ಭೂಮಿ..!

Twitter
Facebook
LinkedIn
WhatsApp
ಐಸ್‍ಲ್ಯಾಂಡ್‍ನಲ್ಲಿ 800 ಬಾರಿ ಕಂಪಿಸಿದ ಭೂಮಿ..!

ಐಸ್‍ಲ್ಯಾಂಡ್: ಸುಮಾರು 800 ಬಾರಿ ಭೂಮಿ ಕಂಪಿಸಿದ್ದರಿಂದ (Earthquake) ಐಸ್‍ಲ್ಯಾಂಡ್‍ನಲ್ಲಿ (Iceland) ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಪರಿಸ್ಥಿತಿ (Emergency) ಘೋಷಿಸಲಾಗಿದೆ.

ಶುಕ್ರವಾರ ನಸುಕಿನ ಜಾವ 2 ಗಂಟೆಗೆ ಸರಣಿ ಭೂಕಂಪಗಳಾಗಿದ್ದು, ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆ ದಾಖಲಾಗಿದೆ. ಇದು ಜ್ವಾಲಾಮುಖಿ ಸ್ಫೋಟಕ್ಕೆ ಕಾರಣವಾಗಬಹುದು. ಇದು ಮುಂದುವರೆದರೆ ಹಲವಾರು ಸಮಸ್ಯೆಗಳು ಎದುರಾಗಬಹುದು ಎಂದು ಅಂದಾಜಿಸಲಾಗಿದೆ. ಅಕ್ಟೋಬರ್ ಅಂತ್ಯದಿಂದ ಇಲ್ಲಿಯವರೆಗೂ ದ್ವೀಪದಲ್ಲಿ ಸುಮಾರು 24,000 ಭೂಕಂಪಗಳು ದಾಖಲಾಗಿವೆ.

ಐಸ್‍ಲ್ಯಾಂಡ್‍ನ ಅತಿದೊಡ್ಡ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾದ ಬ್ಲೂ ಲಗೂನ್ ಜಿಯೋಥರ್ಮಲ್ ಸ್ಪಾ ಜ್ವಾಲಾಮುಖಿ ಸಾಧ್ಯತೆಯಿಂದಾಗಿ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಅಲ್ಲದೇ ಜನರ ರಕ್ಷಣೆ ಸಲುವಾಗಿ ಭೂಕಂಪನ ಸ್ಥಳಗಳಲ್ಲಿ ಸೇನಾ ಹಡಗುಗಳು ಕಾರ್ಯ ನಿರ್ವಹಿಸುತ್ತಿವೆ.

ಪ್ರವಾಸಿ ತಾಣಗಳಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗಿದೆ. ಕೆಲವೆಡೆ ನಿರಾಶ್ರಿತರ ತಾಣಗಳನ್ನು ತೆರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವಿನ ವರದಿಯಾಗಿಲ್ಲ.

2010ರ ಏಪ್ರಿಲ್‍ನಲ್ಲಿ ಐಸ್‍ಲ್ಯಾಂಡ್‍ನ ದಕ್ಷಿಣ ಪ್ರದೇಶದಲ್ಲಿ ಬೃಹತ್ ಜ್ವಾಲಾಮುಖಿ ಸ್ಫೋಟದಿಂದಾಗಿ ವಿಶ್ವದಾದ್ಯಂತ ಸುಮಾರು 1 ಲಕ್ಷ ವಿಮಾನಗಳು ರದ್ದಾಗಿದ್ದವು. ಇದರೀಮದಾಗಿ ವಿಶ್ವದಲ್ಲಿ ಕೋಟಿಗೂ ಹೆಚ್ಚು ಜನರು ಪರದಾಡಿದ್ದರು.

ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರ ಎಲ್‌ಇಟಿ ಕಮಾಂಡರ್‌ಗೆ ಗುಂಡಿಕ್ಕಿ ಹತ್ಯೆ

ಇಸ್ಲಾಮಾಬಾದ್‌: ಪಾಕಿಸ್ತಾನದ (Pakistan) ಖೈಬರ್ ಪಖ್ತುಂಖ್ವಾದಲ್ಲಿ ಅಪರಿಚಿತರು ಲಷ್ಕರ್-ಎ-ತೊಯ್ಬಾ ಕಮಾಂಡರ್ (Lashkar e Taiba Terrorist) ಅಕ್ರಮ್ ಘಾಜಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಒಂದು ವಾರದ ಅವಧಿಯಲ್ಲಿ ನಡೆದ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನ ಎರಡನೇ ಹತ್ಯೆ ಇದಾಗಿದೆ.

ಬಜೌರ್ ಜಿಲ್ಲೆಯಲ್ಲಿ ಬೈಕ್‌ನಲ್ಲಿ ಬಂದ ಪಾಕಿಸ್ತಾನದ ಅಪರಿಚಿತ ವ್ಯಕ್ತಿಗಳು ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಕ್ರಮ್ ಖಾನ್ ಅಲಿಯಾಸ್ ಘಾಜಿ (Akram Ghazi) 2018-2020 ರ ಅವಧಿಯಲ್ಲಿ ಲಷ್ಕರ್‌ಗೆ ಉನ್ನತ ನೇಮಕಾತಿದಾರರಲ್ಲಿ ಒಬ್ಬನಾಗಿದ್ದ. ಕಳೆದ ಎರಡು ವರ್ಷಗಳಲ್ಲಿ ಕಾಶ್ಮೀರ ಕಣಿವೆಗೆ ಅನೇಕ ಬ್ಯಾಚ್‌ಗಳಲ್ಲಿ ನುಸುಳಿದ ಹಲವಾರು ಭಯೋತ್ಪಾದಕರ ಜವಾಬ್ದಾರಿಯನ್ನು ಹೊತ್ತಿದ್ದ.

ಜಮ್ಮು ಮತ್ತು ಕಾಶ್ಮೀರದಲ್ಲಿ 2018 ರ ಸುಂಜ್ವಾನ್ ಭಯೋತ್ಪಾದನಾ ದಾಳಿಯ ಮಾಸ್ಟರ್‌ಮೈಂಡ್‌ಗಳಲ್ಲಿ ಒಬ್ಬನಾಗಿದ್ದ ಖ್ವಾಜಾ ಶಾಹಿದ್‌ನನ್ನು ಭಾನುವಾರ ಅಪಹರಿಸಲಾಗಿತ್ತು. ಪಾಕ್ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಶಿರಚ್ಛೇದನ ಮಾಡಲಾಯಿತು.

ಘಾಜಿ ಹತ್ಯೆಯಲ್ಲಿ ವಿವಿಧ ಭಯೋತ್ಪಾದಕ ಗುಂಪುಗಳು ಸೇರಿದಂತೆ ಸ್ಥಳೀಯ ವಿರೋಧಿಗಳ ಪಾತ್ರ ಇರಬಹುದು ಎನ್ನಲಾಗಿದೆ. ಘಾಜಿ ಲಷ್ಕರ್‌ನ ಕೇಂದ್ರ ನೇಮಕಾತಿ ಸೆಲ್‌ನ ಪ್ರಮುಖ ಸದಸ್ಯನಾಗಿದ್ದ. ಭಾರತದ ವಿರುದ್ಧ ದ್ವೇಷ ತುಂಬಿದ ಭಾಷಣಗಳಿಗೆ ಹೆಸರುವಾಸಿಯಾಗಿದ್ದ.

ಇತ್ತೀಚಿನ ದಿನಗಳಲ್ಲಿ ಲಷ್ಕರ್‌ನ ಉನ್ನತ ಕಾರ್ಯಕರ್ತನ ಎರಡನೇ ಹತ್ಯೆ ಇದಾಗಿದೆ. ಸೆಪ್ಟೆಂಬರ್‌ನಲ್ಲಿ ಎಲ್‌ಇಟಿ ಕಮಾಂಡರ್ ರಿಯಾಜ್ ಅಹ್ಮದ್‌ನನ್ನು ಪಿಒಕೆಯ ರಾವಲಕೋಟ್‌ನಲ್ಲಿರುವ ಅಲ್ ಖುದ್ದೂಸ್ ಮಸೀದಿಯ ಹೊರಗೆ ಕೊಲ್ಲಲಾಯಿತು. ಆತ ಪಿಒಕೆಯಲ್ಲಿ ಲಷ್ಕರ್ ನೇಮಕಾತಿಯನ್ನು ನಿರ್ವಹಿಸುತ್ತಿದ್ದ. ಘಾಜಿಯ ಹತ್ಯೆಯು ಎಲ್‌ಇಟಿ ಮತ್ತು ಐಎಸ್‌ಐಗೆ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ