ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಖ್ಯಮಂತ್ರಿ ಸಿದ್ದರಾಮಯ್ಯಗೆ 10 ಸಾವಿರ ದಂಡ ವಿಧಿಸಿದ ಹೈಕೋರ್ಟ್ ...!

Twitter
Facebook
LinkedIn
WhatsApp
ಮುಖ್ಯಮಂತ್ರಿ ಸಿದ್ದರಾಮಯ್ಯಗೆ 10 ಸಾವಿರ ದಂಡ ವಿಧಿಸಿದ ಹೈಕೋರ್ಟ್ ...!

ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಸಲ್ಲಿಸಿದ್ದ ಅರ್ಜಿಯನ್ನು ​​ಹೈಕೋರ್ಟ್ ವಜಾ ಮಾಡಿ, 10 ಸಾವಿರ ರೂ. ದಂಡ ವಿಧಿಸಿದೆ. ಹಾಗೆ ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ.

ಮಾರ್ಚ್ 7 ರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ​ ರಣದೀಪ್ ಸುರ್ಜೇವಾಲಾ, ಮಾರ್ಚ್ 11 ರಂದು ಸಚಿವ ಎಂ.ಬಿ.ಪಾಟೀಲ್, ಮಾರ್ಚ್ 15 ರಂದು ಸಚಿವ ರಾಮಲಿಂಗಾರೆಡ್ಡಿ ಅವರು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.

ಅನಗತ್ಯವಾಗಿ ಪಿಎಸ್ಐ ಕು.ಜಹಿದಾ ಪ್ರತಿವಾದಿಯಾಗಿಸಿದ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮತ್ತಿತರರಿಗೆ ನ್ಯಾಯಾಲಯ 10 ಸಾವಿರ ದಂಡ ವಿಧಿಸಿದೆ.

ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವವರೆಗೆ ಆದೇಶವನ್ನು ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದರು. ಆದರೆ, ನ್ಯಾಯಾಲಯ ಮನವಿಯನ್ನು ತಿರಸ್ಕರಿಸಿತು.

ಜನಪ್ರತಿನಿಧಿಗಳು ಕಾನೂನು ಪಾಲಿಸಿದರೆ ಜನ ಪಾಲಿಸುತ್ತಾರೆ. ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ ಕಷ್ಟವಾಗುತ್ತದೆ. ಸಿಟಿ ಲೈಫ್ ಈಸ್ ಟಾರ್ಚರ್,‌ ಪ್ರತಿಭಟನೆಗಳಿಂದ‌ ಜನರಿಗೆ ಮತ್ತಷ್ಟು ತೊಂದರೆಯಾಗುತ್ತದೆ. ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ. ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು ಎಂದು ನ್ಯಾಯಾಲಯ ಚಾಟಿ ಬೀಸಿದೆ.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ, ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವರ ರಾಜಿನಾಮೆ ಆಗ್ರಹಿಸಿ 2022ರ ಏಪ್ರಿಲ್ 14 ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸಿದ್ದರಾಮಯ್ಯ, ಸಚಿವ ಎಂಬಿ ಪಾಟೀಲ್​ ಸೇರಿದಂತೆ ಕಾಂಗ್ರೆಸ್​ನ ನಾಯಕರು ಮತ್ತು ಕಾರ್ಯಕರ್ತರು ಬೃಹತ್​ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಸ್ತೆ ತಡೆ ಉಂಟಾಗಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ಜನಸಾಮಾನ್ಯರ ಸಂಚಾರಕ್ಕೆ ತೊಂದರೆಯುಂಟಾಗಿತ್ತು. ಹೀಗಾಗಿ ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದಾರೆ ಎಂದು ಆರೋಪಿಸಿ ಆಗಿನ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist