ಬುಧವಾರ, ಫೆಬ್ರವರಿ 21, 2024
ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!-ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!-ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನ..!-ದೆಹಲಿ ಗಡಿಯಲ್ಲಿ 14 ಸಾವಿರ ರೈತರು ಮತ್ತೆ ಪ್ರತಿಭಟನೆ..!-ಆಟೋಗೆ ಟ್ರಕ್‌ ಡಿಕ್ಕಿಯಾಗಿ ಅಪ್ಪಚ್ಚಿ; ಸ್ಥಳದಲ್ಲೇ 9 ಮಂದಿ ದುರ್ಮರಣ...!-ಪುತ್ತೂರು : ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ: ನಾಲ್ವರ ಸೆರೆ-Sonia Gandhi: ರಾಜ್ಯಸಭೆಗೆ ಸೋನಿಯಾ ಗಾಂಧಿ ಅವಿರೋಧವಾಗಿ ಆಯ್ಕೆ!-Gold Rate Today : ಇಳಿಕೆಯತ್ತ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್-ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾಗೆ ಎರಡನೇ ಗಂಡು ಮಗು ; ಹೆಸರೇನು ಗೊತ್ತೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ಇಂದಿನಿಂದ ನಡೆಯಲಿದೆ ತುಳುನಾಡು ಸಂಸ್ಕೃತಿಯ ಐತಿಹಾಸಿಕ ಕಂಬಳ..!

Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ಇಂದಿನಿಂದ ನಡೆಯಲಿದೆ ತುಳುನಾಡು ಸಂಸ್ಕೃತಿಯ ಐತಿಹಾಸಿಕ ಕಂಬಳ..!

ಬೆಂಗಳೂರು: ಭಾರೀ ಕುತೂಹಲ ಕೆರಳಿಸಿರುವ ತುಳುನಾಡಿನ ಜಾನಪದ ಕ್ರೀಡೆ ಕಂಬಳ ಆಯೋಜನೆಗೆ ಬೆಂಗಳೂರು  ಸಜ್ಜಾಗಿದ್ದು, ಇಂದಿನಿಂದ ಎರಡು ದಿನಗಳ ಕಾಲ ರಾಜಧಾನಿಯಲ್ಲಿ ತುಳುನಾಡಿನ ಸಂಸ್ಕೃತಿ ಅನಾವರಣಗೊಳ್ಳಲಿದೆ.

ಕಳೆದ ಕೆಲ ತಿಂಗಳಿಂದ ಕುತೂಹಲ ಕೆರಳಿಸಿದ್ದ ಬೆಂಗಳೂರು ಕಂಬಳಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಇಡೀ ದೇಶವೇ ತಿರುಗಿ ನೋಡುವಂತೆ ಕಂಬಳ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ ದೊರಕಲಿದೆ. ಇಂದು ಗಾರ್ಡನ್ ಸಿಟಿಯಲ್ಲಿ ಕಂಬಳದ ಪರಿಮಳ ಪಸರಿಸಲಿದ್ದು, ಇಂತಹ ಐತಿಹಾಸಿಕ ಕ್ಷಣಕ್ಕೆ ರಾಜಧಾನಿಯ ನೆಲ ಸಾಕ್ಷಿಯಾಗಲಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಮೊಟ್ಟ ಮೊದಲ ಕಂಬಳದ ಸೊಗಬನ್ನು ಸವಿಯಲು ಸಿಲಿಕಾನ್ ಸಿಟಿ ಮಂದಿ ಕಾತರದಿಂದ ಕಾಯುತ್ತಿದ್ದಾರೆ.

ಈಗಾಗಲೇ ಕೆಸರಲ್ಲಿ ಚರಿತ್ರೆಯ ಓಟ ಬೀರಿ ಮೋಡಿ ಮಾಡಲು ಮಂಗಳೂರು, ಉಡುಪಿ, ಕುಂದಾಪುರ ಮತ್ತು ಕಾಸರಗೋಡು ಭಾಗದ ಸುಮಾರು 200 ಜೋಡಿ ಪ್ರತಿಷ್ಠಿತ ಕೋಣಗಳು ಬೆಂಗಳೂರಿಗೆ ಬಂದಿಳಿದಿದ್ದು, ಗುರುವಾರ ಬೆಳಗ್ಗೆ ಉಪ್ಪಿನಂಗಡಿಯಲ್ಲಿ ಭವ್ಯ ಸ್ವಾಗತದಿಂದ ಹೊರಟಿದ್ದ ಕೋಣಗಳು ಅಂದೇ ರಾತ್ರಿ ವೇಳೆಗೆ ಬೆಂಗಳೂರಿಗೆ ತಲುಪಿತ್ತು. ಕೋಣಗಳಿಗೆ ಪ್ರತಿದಿನವೂ ವಿಶೇಷ ಆರೈಕೆ ಮಾಡುವುದರಿಂದ ನಿನ್ನೆ ಪೂರ್ತಿ ದಿನ ಅವುಗಳಿಗೆ ವಿಶ್ರಾಂತಿ ನೀಡಲಾಗಿತ್ತು. ಅವುಗಳ ಆರೋಗ್ಯದ ಹಿತದೃಷ್ಠಿಯಿಂದ ಕೋಣಗಳಿಗೆ ಬೈಹುಲ್ಲು, ನೀರನ್ನು ಸಹ ಮಂಗಳೂರಿನಿಂದಲೇ ಕರೆದೊಯ್ಯಲಾಗಿದೆ.

ಉದ್ಘಾಟನೆ ಯಾರಿಂದ?

ಈ ಕಂಬಳದಲ್ಲಿ ಬೆಳಗ್ಗೆ 10 ಗಂಟೆಗೆ ಕೋಣಗಳು ಓಡುವ ಕಂಬಳದ ಕರೆ (ಟ್ರ್ಯಾಕ್) ಅನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಉದ್ಘಾಟಿಸಲಿದ್ದು, ಬೆಳಗ್ಗೆ 11 ಗಂಟೆಗೆ ಸರಿಯಾಗಿ ಬೆಳಗಿನ ಸಭಾ ಕಾರ್ಯಕ್ರಮವನ್ನು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ. ಇನ್ನು, ಮಧ್ಯಾಹ್ನ  12.00ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಉದ್ಘಾಟಿಸಿದರೆ ಸಂಜೆ 6 ಗಂಟೆಗೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಮುಖ್ಯ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಪಕ್ಷಾತೀತವಾಗಿ ಎರಡು ದಿನಗಳ ಕಾಲ ನಡೆಯುವ ಕಂಬಳದಲ್ಲಿ ಎಲ್ಲಾ ಪಕ್ಷಗಳ ಗಣ್ಯರು ಅತಿಥಿಗಳಾಗಿ ಎರಡು ದಿನಗಳ ಕಾಲ ವಿವಿಧ ಸಮಯದಲ್ಲಿ ಭಾಗವಹಿಸಲಿದ್ದಾರೆ. ಜೊತೆಗೆ ತುಳುನಾಡಿನಿಂದ ತೆರಳಿ ಚಿತ್ರರಂಗದಲ್ಲಿ ಸಾಧನೆ ಮಾಡಿರುವ ಐಶ್ವರ್ಯಾ ರೈ, ಅನುಷ್ಕಾ ಶೆಟ್ಟಿ, ಶಿಲ್ಪಾ ಶೆಟ್ಟಿ, ಸುನೀಲ್ ಶೆಟ್ಟಿ ಅವರಿಂದ ಹಿಡಿದು ತಮಿಲಿನ ಕೆಲ ಮತ್ತು ಕನ್ನಡ ಚಿತ್ರರಂಗದ ಎಲ್ಲಾ ಕಲಾವಿದರೂ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು, ಬೆಂಗಳೂರು ಕಂಬಳದ ಮುಖ್ಯ ವೇದಿಕೆಗೆ ಪುನಿತ್ ರಾಜ್ ಕುಮಾರ್ ಹೆಸರು ಇಡಲಾಗಿದ್ದು, ಕಂಬಳದ ಕರೆ (ಟ್ರ್ಯಾಕ್‌)ಗೆ ರಾಜ ಮಹಾರಾಜ ಎಂದು ಹೆಸರು ನೀಡಲಾಗಿದೆ. ಇನ್ನು, ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ  ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದೆ.

ಸಾಮಾನ್ಯವಾಗಿ ಕಂಬಳ ಕೋಣಗಳು ಓಡುವ ಕರೆ (ಟ್ರ್ಯಾಕ್) 147 ಮೀಟರ್ ಉದ್ದ ಇರುತ್ತದೆ. ಆದರೆ ಬೆಂಗಳೂರು ಕಂಬಳದ ಟ್ರ್ಯಾಕ್ 155 ಮೀಟರ್ ಉದ್ದವಿದೆ. ಹೀಗಾಗಿ ಇದು ಕಂಬಳದ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಟಿಸಲಿದೆ. ಈಗಾಗಲೇ ಕಂಬಳಕ್ಕೆ 228 ಜೋಡಿ ಕೋಣಗಳ ರಿಜಿಸ್ಟ್ರೇಷನ್ ಆಗಿದ್ದು, 200 ಜೋಡಿ‌ ಫೈನಲ್‌ ಆಗಿದೆ. ಕಂಬಳದ ವೇಳೆ ಪ್ರಾಣಿ ರಕ್ಷಣಾ ಕಾಯ್ದೆಯನ್ನು ಕೂಡ ಅನುಸರಿಸಲಾಗುತ್ತದೆ.

 

ಅರಮನೆ ಮೈದಾನಕ್ಕೆ ಪ್ರವೇಶ ಹೇಗೆ?

ಅರಮನೆ ಮೈದಾನದ ಗೇಟ್ ನಂಬರ್ 1, 2, 3 ಹಾಗೂ 4 ರಲ್ಲಿ ಸಾರ್ವಜನಿಕರಿಗೆ ಪ್ರವೇಶಾವಕಾಶ ನೀಡಲಾಗಿದ್ದು, ಕಂಬಳ ವೀಕ್ಷಿಸಲು ವಿವಿಐಪಿಗಳಿಗೆ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿಗಳಿಗೆ ಫನ್ ವರ್ಲ್ಡ್‌ ಕಡೆಯಿಂದ ಪ್ರವೇಶ ಮಾಡಲು ಅವಕಾಶ ನೀಡಲಾಗಿದ್ದು, ನಾಳೆ, ನಾಡಿದ್ದು ನಡೆಯಲಿರುವ ಕಂಬಳಕ್ಕೆ ಸಾರ್ವಜನಿಕರಿಗೆ ಮಾತ್ರ ಯಾವುದೇ ಟಿಕೆಟ್‌ ಇಲ್ಲದೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಅಲ್ಲದೇ, ಸಾರ್ವಜನಿಕರು ಯಾವುದೇ ಪಾಸ್‌ ತೋರಿಸುವ ಅಗತ್ಯವೂ ಇಲ್ಲ, ಆದರೆ ವಿಐಪಿಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಇನ್ನು, ಕಂಬಳ ನೋಡಲು ಜನರಿಗೆ ಗ್ಯಾಲರಿ ವ್ಯವಸ್ಥೆ ಮಾಡಲಾಗಿದ್ದು, 6 ರಿಂದ 7 ಸಾವಿರ ಜನರು ಏಕಕಾಲದಲ್ಲಿ ಗ್ಯಾಲರಿಯಲ್ಲಿ ಕುಳಿತುಕೊಂಡು ಕಂಬಳ ನೋಡಬಹುದು. ಕಂಬಳದಲ್ಲಿ 200 ಜೋಡಿ ಕೋಣಗಳು ಭಾಗವಹಿಸುವ ಸಾಧ್ಯತೆ ಇದ್ದು, ಬೆಂಗಳೂರು ಕಂಬಳದ ಮುಖ್ಯ ವೇದಿಕೆಗೆ ಕರ್ನಾಟಕ ರತ್ನ ಪುನಿತ್ ರಾಜ್ ಕುಮಾರ್ ಹೆಸರನ್ನು ಇಡಲಾಗಿದೆ. ಇನ್ನು ಕಂಬಳದ ಕರೆಗೆ (ಟ್ರ್ಯಾಕ್‌) ರಾಜ ಮಹಾರಾಜ ಎಂದು ಹೆಸರು ಇಡಲಾಗಿದ್ದು, ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡಲಾಗಿದೆ. ಕಂಬಳದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮದ ವೈಭವವೂ ನಡೆಯಲಿದ್ದು, ತುಳುನಾಡಿನ ಸಾಂಪ್ರದಾಯಿಕ ಪಿಲಿಯೇಸ (ಹುಲಿ ಕುಣಿತ) ಕೂಡ ಇರಲಿದೆ.  

 

ಕೋಣಗಳಿಗೆ ನೀರು, ಆಹಾರವೂ ಊರಿಂದಲೇ!

ಇನ್ನು ಆಹಾರ, ನೀರಿನ ಬಗ್ಗೆ ಕೋಣಗಳ ಮಾಲೀಕರು ದಿನನಿತ್ಯ ವಿಶೇಷ ಕಾಳಜಿ ವಹಿಸುತ್ತಿದ್ದು, ಹೀಗಾಗಿ ಕೋಣಗಳಿಗೆ ಬೈಹುಲ್ಲು, ನೀರನ್ನು ಕೂಡ ಊರಿನಿಂದಲೇ ತರಲಾಗುತ್ತದೆ. ನೀರು ಬದಲಾದರೆ ಕೋಣಗಳ ಆರೋಗ್ಯ ಏರುಪೇರು ಆಗುವ ಸಾಧ್ಯತೆ ಇದ್ದು, ಹೀಗಾಗಿ ಊರಿನಿಂದಲೇ ಟ್ಯಾಂಕರ್ ಮೂಲಕ ನೀರು ತರಲಾಗಿದೆ. ಕಂಬಳದಲ್ಲಿ ಕೋಣಗಳ ಆರೈಕೆಗೆ ಕಂಬಳದ ಸ್ಥಳಕ್ಕೆ ಪಶುವೈದ್ಯರು, ನಾಟಿ ವೈದ್ಯರೂ ಕೂಡ ಬರಲಿದ್ದಾರೆ.

ಬಹುಮಾನವೇನು?

ಈ ಕಂಬಳದಲ್ಲಿ ಗೆದ್ದ ಕೋಣಗಳಿಗೆ ಪ್ರಥಮ ಬಹುಮಾನ  16 ಗ್ರಾಂ ಚಿನ್ನ ಹಾಗೂ 1 ಲಕ್ಷ ನಗದು ಮೀಸಲಿರಿಸಲಾಗಿದ್ದು, ಎರಡನೇ ಬಹುಮಾನ 8 ಗ್ರಾಂ ಚಿನ್ನ ಹಾಗೂ 50,000 ನಗದು ಇಡಲಾಗಿದೆ. ಮೂರನೇ ಬಹುಮಾನ 4 ಗ್ರಾಂ ಚಿನ್ನ ಹಾಗೂ 25,000 ನಗದು ಸಿಗಲಿದೆ.

ಇನ್ನು ಕಂಬಳ ನಡೆಯುವ ಅರಮನೆ ಮೈದಾನದಲ್ಲಿ ಇಂದು ಕೂಡ ಕೆಲ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರು ತುಳುಕೂಟಕ್ಕೆ  ಇಂದಿಗೆ 50 ವರ್ಷ ಹಿನ್ನೆಲೆ ಇಂದು ಅರಮನೆ ಮೈದಾನದಲ್ಲಿ ಸುವರ್ಣ ಮಹೋತ್ಸವನ್ನು ಆಯೋಜನೆ ಮಾಡಲಾಗಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ Twitter Facebook LinkedIn WhatsApp Drago Fruit; ಡ್ರಾಗನ್ ಫ್ರೂಟ್ ಒಂದು ಆರೋಗ್ಯದಾಯಕ ಹಣ್ಣು. ‘ಸಿ’ ಮತ್ತು ‘ಬಿ’