ಪ್ರತಾಪ್ ಸಿಂಹರವರು ಸತತ ಎರಡು ಬಾರಿ ಗೆದ್ದಂತಹ ಮೈಸೂರು ಲೋಕಸಭಾ ಕ್ಷೇತ್ರ ಈ ಬಾರಿ ಜೆಡಿಎಸ್ ತೆಕ್ಕೆಗೆ..?
Twitter
Facebook
LinkedIn
WhatsApp
ಬೆಂಗಳೂರು, ಡಿಸೆಂಬರ್ 04: 2023 ರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್,ಕಾಂಗ್ರೆಸ್ ಗೆ ಸೋಲಿನ ರುಚಿ ತೋರಿಸಲು ಮೈತ್ರಿಯಾಗಿದ್ದು, ಹಲವು ತಂತ್ರಗಾರಿಕೆಯನ್ನ ನಡೆಸಿವೆ. ಇತ್ತ ಬಿಜೆಪಿ-ಜೆಡಿಎಸ್ ನಡುವೆ ಕ್ಷೇತ್ರ ಹಂಚಿಕೆ ವಿಚಾರ ಇನ್ನು ಗುಟ್ಟಾಗಿಯೇ ಉಳಿದಿದ್ದು, ಈ ಬಾರೀ ಮೈಸೂರು ಲೋಕಸಭಾ ಕ್ಷೇತ್ರ ಜೆಡಿಎಸ್ ಕೈ ಸೇರುವ ಸಾಧ್ಯತೆ ಇದೆ.
ಹೌದು, ಸತತ ಎರಡು ಬಾರಿ ಮೈಸೂರು ಲೋಕಸಭಾ ಕ್ಷೇತ್ರದಿಮದ ಗೆದ್ದು ಸಂಸದರಾಗಿರುವ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಟಿಕೆಟ್ ಸಿಗುವುದು ಅನುಮಾನ ಎನ್ನುವ ಮಾತುಗಳು ಹರಿದಾಡುತ್ತಿವೆ. ಏಕೆಂದರೆ ಲೋಕ ಸಮರಕ್ಕಾಗಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಮೈತ್ರಿಗೆ ಮುಂದಾಗಿದ್ದು, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಹಾಗೂ ಜೆಡಿಎಸ್ ರಾಜ್ಯಾಧ್ಯ ಹೆಚ್ ಡಿ ಕುಮಾರಸ್ವಾಮಿ ಅವರು ಈ ಬಾರೀ ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಈ ನಡುವೆ ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಹೆಸರು ಕೇಳಿ ಬರುತ್ತಿದ್ದು, ಮಂಡ್ಯದಲ್ಲೂ ಸಹ ಹಾಲಿ ಸಂಸದೆಯಾಗಿರುವ ಸುಮಲತಾ ಅಂಬರೀಶ್ ಅವರು ಮಂಡ್ಯ ಕ್ಷೇತ್ರವನ್ನ ಬಿಟ್ಟು ಕೊಡುವಂತೆ ದಳಪತಿಗಳು ಪಟ್ಟು ಹಿಡಿದಿದ್ದಾರೆ. ಅದೇ ರೀತಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೇಲೆ ಜೆಡಿಎಸ್ ನಾಯಕರು ಕಣ್ಣೀಟ್ಟಿದ್ದಾರೆ. ಹೀಗಾಗಿ ಈ ಬಾರೀ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಜೆಡಿಎಸ್ ಕೈ ಸೇರಲಿದ್ದೆ ಎನ್ನಲಾಗಿದ್ದು, ಎರಡು ಬಾರೀ ಸಂಸದರಾಗಿರುವ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪುವ ಭೀತಿ ಶುರುವಾಗಿದೆ.
ಈ ಬಾರೀ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಠಕ್ಕರ್ ಕೊಟ್ಟು ಹಳೇ ಮೈಸೂರು ಭಾಗದಲ್ಲಿ ತನ್ನ ಪ್ರಬಲ್ಯವನ್ನ ಹೆಚ್ಚಿಗೆ ಮಾಡಿಕೊಳ್ಳಲು ದಳಪತಿಗಳು ಮುಂದಾಗಿದ್ದು, ಅದರಂತೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಕ್ಷೇತ್ರ ಹಂಚಿಕೆ ಮಾತುಕತೆ ವೇಳೆ ಮೈಸೂರು ಲೋಕಸಭಾ ಕ್ಷೇತ್ರ ಕೇಳಲು ದಳಪತಿಗಳ ಚಿಂತನೆ ನಡೆಸಿದೆ. ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ ತುಮಕೂರು ಕ್ಷೇತ್ರಗಳ ಜೊತೆಗೆ ಹೊಸದಾಗಿ ಮೈಸೂರು ಲೋಕಸಭಾ ಕ್ಷೇತ್ರ ಬೇಕೆಂದು ಬಿಜೆಪಿ ಹೈಕಮಾಂಡ್ ಬಳಿ ಬೇಡಿಕೆ ಇಡುವ ಕುರಿತು ಚರ್ಚೆ ನಡೆಸದ್ದಾರೆ ಎಂದು ಹೇಳಲಾಗಿದೆ.
ಇನ್ನೂ ಮೈಸೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ತೆಕ್ಕೆಗೆ ತೆಗೆದುಕೊಳ್ಳಲು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ ಸಹ ಒಲವು ಹೊಂದಿದ್ದಾರೆ. ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಹಿಡಿತ ಮತ್ತು ಪ್ರಾಬಲ್ಯ ಹೆಚ್ಚಿದೆ. ಇದರಿಂದ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿದರೆ ಗೆಲುವಿನ ಹಾದಿ ಸುಗುಮ ಎನ್ನುವ ಲೆಕ್ಕಾಚಾರವನ್ನ ದಳಪತಿಗಳು ಹೊಂದಿದ್ದಾರೆ. ಅಲ್ಲದೇ ಬಿಜೆಪಿ ಹೈಕಮಾಂಡ್ ನಾಯಕರ ಜೊತೆಗೆ ಹೆಚ್ಚು ಒಡನಾಟ ಹೊಂದಿರುವ ಕುಮಾರಸ್ವಾಮಿ ಅವರು ಕೇಳಿದ ಕ್ಷೇತ್ರ ಬಿಟ್ಟುಕೊಂಡ ಕುರಿತು ಕೊನೆಯ ಹಂತದ ಚರ್ಚೆ ನಡೆಯಲಿದೆ.
ಶೀಘ್ರದಲ್ಲೇ ಮೈಸೂರು ಭಾಗದಲ್ಲಿ ಜೆಡಿಎಸ್ ನಾಯಕರು ಮುಖಂಡರ ಜೊತೆಗೆ ಸಭೆ ನಡೆಸಿ ಅಂತಿಮ ಹಂತದ ಸಭೆ ನಡೆಸಿ ಅಂತಿಮ ನಿರ್ಧಾರಕ್ಕೆ ದಳಪತಿಗಳು ಬರಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಹಾಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾದ ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪುವ ಆತಂಕ ಶುರುವಾಗಿದೆ.
ಒಂದು ವೇಳೆ ದಳಪತಿಗಳ ಪಟ್ಟು ಹಿಡಿದು ಮೈಸೂರು ಕ್ಷೇತ್ರವನ್ನ ಪಡೆದುಕೊಂಡರೇ ಹಾಲಿ ಮೈಸೂರು ಸಂಸದರಾಗಿರುವ ಪ್ರತಾಪ್ ಸಿಂಹ ಅವರು ರಾಜಕೀಯ ಭವಿಷ್ಯವೇನು ಎಂಬ ಪ್ರಶ್ನೆ ಉದ್ಭವಿಸಿದ್ದು, ಈಗಾಗಲೇ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಿರುವ ಸದಾನಂದಗೌಡ ಅವರ ಕ್ಷೇತ್ರವಾದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.