ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Amitabh Bachchan: ಅಮಿತಾಬ್ ಬಚ್ಚನ್ ಆಸ್ಪತ್ರೆಗೆ ದಾಖಲಾಗಿದ್ದ ಸುದ್ದಿ ಸುಳ್ಳು.?

Twitter
Facebook
LinkedIn
WhatsApp
Amitabh Bachchan: ಅಮಿತಾಬ್ ಬಚ್ಚನ್ ಆಸ್ಪತ್ರೆಗೆ ದಾಖಲಾಗಿದ್ದ ಸುದ್ದಿ ಸುಳ್ಳು.?

ಸೆಲೆಬ್ರಿಟಿಗಳ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತವೆ. ಕೆಲವು ಸುದ್ದಿಗಳು ನಿಜ ಎಂದೇ ಭಾಸವಾಗುತ್ತವೆ. ಈಗ ಅಮಿತಾಭ್ ಬಚ್ಚನ್ ವಿಚಾರದಲ್ಲಿ ಹಾಗೆಯೇ ಆಗಿದೆ. ಅವರು ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್ 2024 (ಐಎಸ್ಪಿಎಲ್)(ISPL-2024) ಫೈನಲ್ ಮ್ಯಾಚ್ ನೋಡಲು ಮುಂಬೈಗೆ ಬಂದಿದ್ದರು. ಈ ಸಂದರ್ಭದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾಗಾದರೆ ಅಮಿತಾಭ್ ಬಚ್ಚನ್ (Amitabh Bachchan) ಆರೋಗ್ಯದ ಬಗ್ಗೆ ಹುಟ್ಟಿಕೊಂಡಿದ್ದ ಸುದ್ದಿ ಸುಳ್ಳೇ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಮೂಡಿತ್ತು. ಇದಕ್ಕೆ

ಅಮಿತಾಭ್ ಬಚ್ಚನ್ ಅವರು ಶುಕ್ರವಾರ (ಮಾರ್ಚ್ 15) ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾದರು ಎನ್ನುವ ಸುದ್ದಿ ಹರಿದಾಡಿತ್ತು. ಇಷ್ಟೇ ಅಲ್ಲ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ವರದಿ ಆಗಿತ್ತು. ಎಲ್ಲರೂ ಬಿಗ್ ಬಿಗೆ ಹೃದಯದ ಸಮಸ್ಯೆ ಉಂಟಾಗಿದೆ ಎಂದು ಭಾವಿಸಿದ್ದರು. ಆದರೆ, ನಂತರ ಅವರ ಕಾಲಿನ ರಕ್ತನಾಳದಲ್ಲಿ ಸಮಸ್ಯೆ ಆಗಿತ್ತು ಎಂದು ವರದಿ ಆಯಿತು. ಅಸಲಿಗೆ ಇದೆಲ್ಲವೂ ಫೇಕ್ ಸುದ್ದಿ! ಅಸಲಿಗೆ ಅಮಿತಾಭ್​ಗೆ ಏನು ಆಗೇ ಇರಲಿಲ್ಲ.

ಅಮಿತಾಭ್ ಅವರು ಐಎಸ್​ಪಿಎಲ್​ನ ಫಿನಾಲೆ ಮ್ಯಾಚ್​ನಲ್ಲಿ ಭಾಗಿ ಆಗಿದ್ದಾರೆ. ‘ಮಜಿ ಮುಂಬೈ’ ಹಾಗೂ ‘ಟೈಗರ್ಸ್ ಆಫ್ ಕೋಲ್ಕತ್ತಾ’ ಮಧ್ಯೆ ಫಿನಾಲೆ ನಡೆದಿದೆ. ಅವರು ಮ್ಯಾಚ್​ನ ಎಂಜಾಯ್ ಮಾಡಿದ್ದಾರೆ. ಅಭಿಷೇಕ್ ಬಚ್ಚನ್ ಜೊತೆ ಸೇರಿ ಅವರು ಮುಂಬೈ ತಂಡವನ್ನು ಬೆಂಬಲಿಸಿದ್ದಾರೆ. ಇವರ ಜೊತೆ ಸಚಿನ್ ತೆಂಡೂಲ್ಕರ್ ಕೂಡ ಇದ್ದರು.

ಅಮಿತಾಭ್ ಅವರನ್ನು ನೊಡಿ ಸ್ಟೇಡಿಯಂನಿಂದ ಫ್ಯಾನ್ಸ್ ಹರ್ಷೋದ್ಘಾರ ಕೂಗಿದ್ದಾರೆ. ಅಲ್ಲದೆ ಕೆಲವರು ಅವರ ಆರೋಗ್ಯದ ಬಗ್ಗೆ ವಿಚಾರಸಿದ್ದಾರೆ. ಮೊದಲು ಅವರು ಕೈಸನ್ನೆ ಮಾಡಿ ತಾವು ಆರೋಗ್ಯವಾಗಿ ಇರುವುದಾಗಿ ಹೇಳಿದ್ದಾರೆ. ಆ ಬಳಿಕ ‘ಫೇಕ್ ನ್ಯೂಸ್’ ಎಂದಿದ್ದಾರೆ. ಈ ಮೂಲಕ ವದಂತಿಗೆ ತೆರೆ ಎಳೆದಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಅಮಿತಾಭ್ ಬಗ್ಗೆ ಇಷ್ಟೊಂದು ದೊಡ್ಡ ಸುಳ್ಳು ಸುದ್ದಿ ಹಬ್ಬಿಸಿದ್ದು ಯಾರು ಎನ್ನುವ ಪ್ರಶ್ನೆ ಮೂಡಿದೆ.

ಅಮಿತಾಭ್ ಬಚ್ಚನ್​ಗೆ ಈಗ 81 ವರ್ಷ ವಯಸ್ಸು. ಈ ಅವಧಿಯಲ್ಲಿ ಅವರಿಗೆ ಅನಾರೋಗ್ಯ ಉಂಟಾಗಿದೆ ಎಂದಾಗ ಸಹಜವಾಗಿಯೇ ಆತಂಕ ಮೂಡುತ್ತದೆ. ಹೀಗಾಗಿ ಅವರ ಅಭಿಮಾನಿಗಳು ಸಾಕಷ್ಟು ಆತಂಕಗೊಂಡಿದ್ದರು. ಈಗ ಅವರು ಆರೋಗ್ಯವಾಗಿದ್ದಾರೆ ಎನ್ನುವ ವಿಚಾರ ತಿಳಿದು ಫ್ಯಾನ್ಸ್ ಖುಷಿಯಾಗಿದ್ದಾರೆ.

ಅಮಿತಾಭ್ ಬಚ್ಚನ್ ಅವರು ಇತ್ತೀಚೆಗಷ್ಟೇ ‘ಕಲ್ಕಿ 2898 ಎಡಿ’ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಈ ಸಿನಿಮಾದಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮೊದಲಾದವರು ನಟಿಸಿದ್ದಾರೆ. ನಾಗ್ ಅಶ್ವಿನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರ ಮೇ 9ರಂದು ರಿಲೀಸ್ ಆಗಲಿದೆ. ಈ ಸಿನಿಮಾನ ವಿಷ್ಣು ಪುರಾಣ, ಭಗವತ ಪುರಾಣ ಹಾಗೂ ಕಲ್ಕಿ ಪುರಾಣ ಆಧರಿಸಿದೆ. ವೈಜಯಂತಿ ಮೂವೀಸ್ ಈ ಚಿತ್ರ ನಿರ್ಮಾಣ ಮಾಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ