ದ. ಕ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ ಸೇರಿದಂತೆ 16 ಕಡೆ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ..!
Twitter
Facebook
LinkedIn
WhatsApp
ಮಂಗಳೂರು : ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ ಐಎ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿಂನಗಡಿ, ವೇಣೂರು ಸೇರಿದಂತೆ 16 ಕಡೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವರ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.