ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿಯ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಮುಸ್ಲಿಂ ಅಭ್ಯರ್ಥಿ ಡಾ. ಅಬ್ದುಲ್ ಸಲಾಂ ಯಾರು ಗೊತ್ತೆ?

Twitter
Facebook
LinkedIn
WhatsApp
ಬಿಜೆಪಿಯ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಮುಸ್ಲಿಂ ಅಭ್ಯರ್ಥಿ ಡಾ. ಅಬ್ದುಲ್ ಸಲಾಂ ಯಾರು ಗೊತ್ತೆ?

ನವದೆಹಲಿ: ಲೋಕಸಭೆ ಚುನಾವಣೆ 2024 ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳೂ ಲೋಕಸಭಾ ಅಖಾಡದಲ್ಲಿ ತಮ್ಮ ಪ್ರಾಬಲ್ಯ ಪ್ರದರ್ಶನಕ್ಕೆ ಸಿದ್ಧತೆ ನಡೆಸಿವೆ. ಕೇಂದ್ರದ ಆಡಳಿತಾರೂಢ ಭಾರತೀಯ ಜನತಾ ಪಕ್ಷ (BJP) ಶನಿವಾರ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರು ಎಲ್ಲಾ ಅಭ್ಯರ್ಥಿಗಳ ಹೆಸರನ್ನು ಮಾಧ್ಯಮದ ಮುಂದೆ ಮಂಡಿಸಿದರು. ಬಿಜೆಪಿಯ 195 ಅಭ್ಯರ್ಥಿಗಳಿರುವ ಈ ಪಟ್ಟಿಯಲ್ಲಿ ಇರುವುದು ಒಬ್ಬರೇ ಮುಸ್ಲಿಂ ಸಮುದಾಯದ ಅಭ್ಯರ್ಥಿ. ಅವರೇ ಡಾ. ಅಬ್ದುಲ್ ಸಲಾಂ. ಕೇರಳದ ಮಲಪ್ಪುರಂ ಕ್ಷೇತ್ರದಿಂದ ಡಾ. ಅಬ್ದುಲ್ ಸಲಾಂ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಿದೆ.

ಡಾ.ಅಬ್ದುಲ್ ಸಲಾಂ ಯಾರು? 

ಜಾತ್ಯತೀತ ಚಿತ್ರಣಕ್ಕೆ ಹೆಸರಾದ ಡಾ.ಅಬ್ದುಲ್ ಸಲಾಂ ಅವರು ಕ್ಯಾಲಿಕಟ್ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿದ್ದಾರೆ. ಸಲಾಂ ಅವರ ಹೆಸರನ್ನು ಘೋಷಿಸುವ ಮೂಲಕ ಬಿಜೆಪಿಯು ರಾಜ್ಯದ ಎಲ್ಲಾ ಸಮುದಾಯಗಳ ಮತಗಳನ್ನು ಸೆಳೆಯುವ ಪ್ರಯತ್ನದಲ್ಲಿದೆ. ಕೇರಳದಲ್ಲಿ ಬಿಜೆಪಿ ಹೊಸ ಮತ್ತು ಹಳೆಯ ಮುಖಗಳ ಮಿಶ್ರಣವನ್ನು ಕಾಣಬಹುದು. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನೂ ಕೇರಳದಲ್ಲಿ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ.

ಮಲಪ್ಪುರಂ ಲೋಕಸಭಾ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದವರೇ ಹೆಚ್ಚಾಗಿದ್ದಾರೆ. ಈ ಕಾರಣಕ್ಕಾಗಿಯೇ ಬಿಜೆಪಿ ಡಾ.ಸಲಾಂ ಅವರನ್ನು ಆಯ್ಕೆ ಮಾಡಿದೆ ಎಂದು ಹೇಳಲಾಗ್ತಿದೆ. ಇದಕ್ಕೂ ಮುನ್ನ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯು ತಿರೂರು ಕ್ಷೇತ್ರದಿಂದ ಡಾ.ಸಲಾಂ ಅವರನ್ನು ಅಭ್ಯರ್ಥಿಯನ್ನಾಗಿಸಿತ್ತು. 

ಬಿಜೆಪಿ ಅಭ್ಯರ್ಥಿಗಳ ಪಟ್ಟಿ:

ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೋಶಿಯಲ್ ಇಂಜಿನಿಯರಿಂಗ್ ಬಗ್ಗೆ ಸಂಪೂರ್ಣ ಕಾಳಜಿ ವಹಿಸಿದೆ. ಒಬಿಸಿಗಳಿಗೆ ಗರಿಷ್ಠ 57 ಟಿಕೆಟ್‌ಗಳನ್ನು ನೀಡಲಾಗಿದೆ. ಮೊದಲ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಹೊರತುಪಡಿಸಿ ಯುವಕರು ಮತ್ತು ಮಹಿಳೆಯರನ್ನೂ ಪರಿಗಣಿಸಲಾಗಿದೆ. 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 28 ಮಹಿಳೆಯರು, 47 ಐವತ್ತು ವರ್ಷದೊಳಗಿನವರು ಹಾಗೂ ಪರಿಶಿಷ್ಟ ಜಾತಿಯ 27, ಪರಿಶಿಷ್ಟ ಪಂಗಡದ 18 ಮತ್ತು ಒಬಿಸಿ ಸಮುದಾಯದ 57 ಜನರನ್ನು ಅಭ್ಯರ್ಥಿಗಳಾಗಿ ಮಾಡಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ