ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪೆನ್‌ಡ್ರೈವ್‌ ಇದೆ, ಕಳೆದಿಲ್ಲ; ಅದನ್ನು ತೋರಿಸಿದೊಡನೆ ನನ್ನಲ್ಲಿಗೆ ಓಡಿ ಬಂದವರ ಪಟ್ಟಿ ಕೊಡಲೇ..!

Twitter
Facebook
LinkedIn
WhatsApp
ಪೆನ್‌ಡ್ರೈವ್‌ ಇದೆ, ಕಳೆದಿಲ್ಲ; ಅದನ್ನು ತೋರಿಸಿದೊಡನೆ ನನ್ನಲ್ಲಿಗೆ ಓಡಿ ಬಂದವರ ಪಟ್ಟಿ ಕೊಡಲೇ..!

ಬೆಂಗಳೂರು, ನವೆಂಬರ್ 19: ಪೆನ್‌ಡ್ರೈವ್ ವಿಚಾರದಲ್ಲಿ ಮತ್ತೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಧ್ವನಿ ಎತ್ತಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಲವು ಪ್ರಶ್ನೆಗಳನ್ನು ಅವರು ಕೇಳಿದ್ದಾರೆ. ‘ಪೆನ್‌ಡ್ರೈವ್‌ ಇದೆ, ಕಳೆದಿಲ್ಲ. ಅದನ್ನು ತೋರಿಸಿದೊಡನೆ ನನ್ನಲ್ಲಿಗೆ ಓಡಿ ಬಂದವರ ಪಟ್ಟಿ ಕೊಡಲೇ?’ ಎಂದು ಪ್ರಶ್ನಿಸಿದ್ದಾರೆ.

 

ಭಾನುವಾರ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ‘ಪೆನ್‌ಡ್ರೈವ್‌ ಇದೆ, ಕಳೆದಿಲ್ಲ. ಅದನ್ನು ತೋರಿಸಿದೊಡನೆ ನನ್ನಲ್ಲಿಗೆ ಓಡಿ ಬಂದವರ ಪಟ್ಟಿ ಕೊಡಲೇ?. ಸಿಎಂ ಸಾಹೇಬರೇ, ‘ಸಿಂಹ ಸಿಂಗಲ್ಲಾಗಿ ಬೇಟೆಯಾಡುತ್ತದೆ, —— ಗುಂಪಾಗಿ ಬರುತ್ತವೆ.’ ಬಿಟ್ಟಸ್ಥಳ ಭರ್ತಿ ಮಾಡಿಸುವ ಕೆಲಸ ನನ್ನಿಂದ ನೀವು ಮಾಡಿಸುವುದಿಲ್ಲ ಎಂದು ನಂಬಿದ್ದೇನೆ’ ಎಂದು ತಿರುಗೇಟು ನೀಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ‘ನನ್ನ ಮಾನಸಿಕ ಸ್ವಾಸ್ಥ್ಯ ಇರಲಿ. ನಿಮ್ಮ ಅಧಿಕಾರದ ಅಂಟುರೋಗಕ್ಕೆ ಮದ್ದೇನು? ನಿಮಗಿರುವ ಧನದಾಹ ಜಾಡ್ಯಕ್ಕೆ ಚಿಕಿತ್ಸೆ ಪಡೆಯಬಾರದೇ? ಮಾನಸಿಕ ಅಸ್ವಾಸ್ಥ್ಯಕ್ಕಿಂತ ಇದು ಮಾರಕ ಮನೋರೋಗವಲ್ಲವೇ? ಮುಖ್ಯಮಂತ್ರಿಯೇ ಇಂಥ ವಿನಾಶಕಾರಿ ಕಾಯಿಲೆಗೆ ತುತ್ತಾದರೆ ನಾಡಿನ ಪಾಡೇನು? ತುರ್ತುಚಿಕಿತ್ಸೆ ನಿಮಗೆ ಅಗತ್ಯವಿದೆ’ ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.

ಉತ್ತರ ಕೊಡಿ ಸಿದ್ದರಾಮಯ್ಯ; ಕುಮಾರಸ್ವಾಮಿ, ‘ಸನ್ಮಾನ್ಯ ಮುಖ್ಯಮಂತ್ರಿಗಳೇ, ವಿಡಿಯೋ ವಿಷಯ ವಿಷಯಾಂತರ ಮಾಡಬೇಡಿ. ನಾನು ಕೇಳಿದ್ದೇನು? ನೀವು ಹೇಳುತ್ತಿರುವುದೇನು? ತಿರುಚುವ, ವಕ್ರೀಕರಿಸುವ ಚಾಳಿ ಬಿಡಿ. ನೀವು ಈ ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಪ್ರತಿನಿಧಿ ಮತ್ತು ಉತ್ತರದಾಯಿ. ಉತ್ತರ ಕೊಡಿ ಸಿದ್ದರಾಮಯ್ಯ ನವರೇ?’ ಎಂದು ಹೇಳಿದ್ದಾರೆ.

ಶನಿವಾರ ಮೈಸೂರಿನಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಕುಮಾರಸ್ವಾಮಿ ಎಂದಿಗೂ ತಾವು ಮಾಡಿರುವ ಆರೋಪಗಳನ್ನು ಸಾಬೀತು ಮಾಡಿಲ್ಲ. ದ್ವೇಷ ಮತ್ತು ಅಸೂಯೆಯ ರಾಜಕಾರಣ ಮಾಡುತ್ತಿದ್ದಾರೆ. 38 ಸ್ಥಾನದಲ್ಲಿದ್ದ ಜೆಡಿಎಸ್ ಈಗ 19 ಸ್ಥಾನಕ್ಕೆ ಇಳಿದಿದ್ದಾರೆ. ಅವರು ಮಾಡುವ ಸುಳ್ಳು ಆರೋಪಗಳಿಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ” ಎಂದು ಹೇಳಿದ್ದರು.
ಕುಮಾರಸ್ವಾಮಿ ಅವರ ಪೆನ್‌ಡ್ರೈವ್ ಹೇಳಿಕೆ ಬಳಿಕ ವಿಧಾನಸಭೆ ಅಧಿವೇಶನ ನಡೆಯಿತು. ಅದರ ಬಗ್ಗೆ ಅವರು ಪ್ರಸ್ತಾಪ ಮಾಡಲಿಲ್ಲ. ಪೆನ್‌ಡ್ರೈವ್ ಬಹಿರಂಗಗೊಳಿಸಬೇಡಿ ಎಂದು ಮನವಿ ಮಾಡಿದವರು ಯಾರು? ಎಂಬ ಮಾಹಿತಿ ನೀಡಲಿ” ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದರು. “ಕುಮಾರಸ್ವಾಮಿ ಮತ್ತು ಬಿಜೆಪಿಯವರು ಸಮ್ಮಿಶ್ರ ಸರ್ಕಾರ ಮಾಡಿ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿದ್ದರು. ಅದು ಆಗಲಿಲ್ಲ. ಆದ್ದರಿಂದ ಕುಮಾರಸ್ವಾಮಿ ಅವರಿಗೆ ಹೊಟ್ಟೆ ಕಿಚ್ಚು, ಹೊಟ್ಟೆ ಉರಿ, ಅಸೂಯೆ, ದ್ವೇಷ ಬಂದಿದೆ” ಎಂದು ಸಿದ್ದರಾಮಯ್ಯ ತಿಳಿಸಿದ್ದರು. “ಸರ್ಕಾರ ರಾಜ್ಯದಲ್ಲಿ ದ್ವೇಷ ರಾಜಕಾರಣ ಮಾಡದೇ ಶಾಂತಿಯುವ ವಾತಾವರಣವನ್ನು ನಿರ್ಮಾಣ ಮಾಡುತ್ತಿದೆ. ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರವನ್ನು ನೀಡಲಾಗುತ್ತದೆ” ಎಂದು ಸಿದ್ದರಾಮಯ್ಯ ಹೇಳಿದ್ದರು.

ಎಚ್. ಡಿ. ಕುಮಾರಸ್ವಾಮಿ, “ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ; 71 ಪೊಲೀಸ್‌ ಇನಸ್ಪೆಕ್ಟರ್‌ʼಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ ‘ಸುಲಿಗೆಪುತ್ರ’ನ ಕೆಚ್ಚು! ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ. ಏನಂತೀರಿ?” ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು. “ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್‌ & ರನ್‌ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ” ಎಂದು ತಿಳಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist