ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂದಿನ ವಾರ ದ್ವಿತೀಯ ಪಿಯುಸಿ ಪಲಿತಾಂಶ ಪ್ರಕಟ ಸಾಧ್ಯತೆ..!

Twitter
Facebook
LinkedIn
WhatsApp
ಮುಂದಿನ ವಾರ ದ್ವಿತೀಯ ಪಿಯುಸಿ ಪಲಿತಾಂಶ ಪ್ರಕಟ ಸಾಧ್ಯತೆ..!

ಬೆಂಗಳೂರು(ಏ.02):  ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಏಪ್ರಿಲ್‌ ಎರಡನೇ ವಾರದಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ಮಾರ್ಚ್‌ 1ರಿಂದ 22ರವರೆಗೆ ರಾಜ್ಯದ 1120ಕ್ಕೂ ಹೆಚ್ಚು ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸಿದ್ದು, ಸುಮಾರು 7 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. ಮಾ.25ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು. ಮಂಡಳಿಯ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಬಹುತೇಕ ಮೌಲ್ಯಮಾಪನ ಕಾರ್ಯ ಅಂತಿಮ ಘಟ್ಟಕ್ಕೆ ತಲುಪಿದೆ. ಇನ್ನೊಂದು ವಾರದೊಳಗೆ ಮೌಲ್ಯಮಾಪನ ಪೂರ್ಣ ಮುಗಿದು ಅಂಕಗಳನ್ನು ಕಂಪ್ಯೂಟರೀಕರಣಗೊಳಿಸುವ ಕಾರ್ಯವೂ ಪೂರ್ಣಗೊಳ್ಳಲಿದೆ. ಹಾಗಾಗಿ ಎಲ್ಲ ಅಂದುಕೊಂಡಂತೆ ನಡೆದರೆ ಏಪ್ರಿಲ್‌ ಎರಡನೇ ವಾರ ಫಲಿತಾಂಶ ಪ್ರಕಟಿಸಲು ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ. ಏ.10 ಅಥವಾ ಆಸುಪಾಸಿನ ದಿನದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

 

ಇನ್ನು, ಮಾ.28ಕ್ಕೆ ಮುಕ್ತಾಯವಾದ 5, 8 ಮತ್ತು 9ನೇ ತರಗತಿ ಮಕ್ಕಳ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ಕೂಡ ತಾಲೂಕು ಹಂತದಲ್ಲಿ ನಡೆಯುತ್ತಿದ್ದು, ಅಂತಿಮ ಹಂತಕ್ಕೆ ಬಂದಿದೆ. ಈ ಮಕ್ಕಳ ಫಲಿತಾಂಶವನ್ನು ಕೂಡ ಏ.8ರಿಂದ 10ರೊಳಗೆ ಪ್ರಕಟಿಸಲು ಮಂಡಳಿ ಮುಂದಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಇಂದು RCB vs LSG ಪಂದ್ಯ: ಈ ಸ್ಥಳಗಳಲ್ಲಿ ವಾಹನ ನಿಲುಗಡೆ ನಿಷೇಧ

ಟಾಟಾ ಸರಣಿಯ ರಾಯಲ್​ ಚಾಲೆಂಜರ್ಸ್​​ ಬೆಂಗಳೂರು (RCB) vs ಲಕ್ನೋ ಸೂಪರ್​ ಜೈಂಟ್ಸ್​ (LSG) ಪಂದ್ಯ ಇಂದು (ಏ.02) ಬೆಂಗಳೂರಿನ (Bengaluru) ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Ground) ನಡೆಯಲಿದೆ. ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಪಂದ್ಯ ಹಿನ್ನೆಲೆಯಲ್ಲಿ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಡೆಯವರೆಗೆ ರಸ್ತೆ ಬಳಕೆದಾರರ ಅನುಕೂಲ ಮಾಡಿಕೊಡುವ ಸಲುವಾಗಿ ಸಂಚಾರ ವ್ಯವಸ್ಥೆಯಲ್ಲಿ (Traffic advisory) ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್​ ಇಲಾಖೆ ತಿಳಿಸಿದೆ.

ಪಂದ್ಯ ನಡೆಯುವ ಹಿನ್ನೆಲೆಯಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ನಿಲಯಗಡೆಯನ್ನು ನಿಷೇಧಿಸಲಾಗಿದೆ. ಆದರೆ ಕ್ರಿಕೆಟ್​ ಪ್ರೇಮಿಗಳ ಅನುಕೂಲಕ್ಕಾಗಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ಕೆಲವು ಸ್ಥಳಗಳನ್ನು ಗುರುತಿಸಲಾಗಿದೆ.

ರಾತ್ರಿ 7:30ಕ್ಕೆ RCB vs LSG ಪಂದ್ಯ ಆರಂಭವಾಗಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮಧ್ಯಾಹ್ನ 3 ಗಂಟೆಯಿಂದಲೆ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆ ನಿಷೇಧಿಸಲಾಗಿದೆ. ವಾಹನ ನಿಲುಗಡೆ ನಿಷೇಧವಿರುವ ಸ್ಥಳಗಳು ಹೀಗಿದೆ..

ಕ್ವೀನ್ಸ್​ ರಸ್ತೆ, ಎಂಜಿ ರಸ್ತೆ, ಕಬ್ಬನ್​ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್​ ಸ್ಟ್ರೀಟ್​ ರಸ್ತೆ, ಸೆಂಟ್​ ಮಾರ್ಕ್ಸ್​ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್​ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್​​ ಮಲ್ಯ ರಸ್ತೆ, ಕಿಂಗ್ಸ್​ ರಸ್ತೆ ಮತ್ತು ನೃಪತುಂಗ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

ವಾಹನ ನಿಲುಗಡೆ ಸ್ಥಳಗಳು

ಇನ್ನು ಕ್ರಿಕೇಟ್​ ಪ್ರೇಮಿಗಳ ವಾಹನ ನಿಲುಗಡೆಗಾಗಿ ಬೆಂಗಳೂರು ಸಂಚಾರ ಪೊಲೀಸ್​ ಅಧಿಕಾರಿಗಳು ಕೆಲವು ಸ್ಥಳಗಳನ್ನು ಗುರುತಿಸಿದ್ದಾರೆ. ವಾಹನ ನಿಲುಗಡೆ ಸ್ಥಳಗಳು…

ಸೆಂಟ್​ ಜೋಸೆಫ್​​ ಇಂಡಿಯನ್ ಸ್ಕೂಲ್​ ನೈದಾನ, ಯು.ಬಿ ಸಿಟಿ ಪಾರ್ಕಿಂಗ್​ ಸ್ಥಳ, ಬಿಎಂಟಿಸಿ ಬಸ್​ ನಿಲ್ದಾಣದ ಮೊದಲನೆ ಮಹಡಿ ಮತ್ತು ಓಲ್ಡ್​ ಕೆಜಿಐಡಿ ಬಿಲ್ಡಿಂಗ್​, ಕಿಂಗ್ಸ್​ ರಸ್ತೆ (ಕಬ್ಬನ್​ಪಾರ್ಕ್​ ಒಳಭಾಗ) ದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.

ಇಂದಿನ ಪಂದ್ಯದ ಬಗ್ಗೆ ಮಾಹಿತಿ

ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯಲ್ಲಿಂದು (ಏಪ್ರಿಲ್ 2) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೇಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಐಪಿಎಲ್ 2024 ರಲ್ಲಿ ಇದು ಆರ್‌ಸಿಬಿಯ ನಾಲ್ಕನೇ ಪಂದ್ಯವಾಗಿದ್ದು, ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.

ಆಡಿರುವ ಮೂರು ಪಂದ್ಯಗಳಿಂದ ಎರಡು ಅಂಕ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಲಕ್ನೋ ಎರಡು ಪಂದ್ಯದಿಂದ 2 ಅಂಕಗಳನ್ನು ಹೊಂದಿ ಆರನೇ ಸ್ಥಾನದಲ್ಲಿದೆ. ಪಾಯಿಂಟ್ಸ್ ಟೇಬಲ್​ನಲ್ಲಿ ಮೇಲೇಳಲು ಆರ್​ಸಿಬಿ ಈ ಪಂದ್ಯ ಗೆಲ್ಲಲೇ ಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ