ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿವೈ ವಿಜಯೇಂದ್ರಗೆ ಬೆಂಗಾವಲು ವಾಹನ, ಪೊಲೀಸ್ ಭದ್ರತೆ ಒದಗಿಸಿದ ರಾಜ್ಯ ಸರ್ಕಾರ!

Twitter
Facebook
LinkedIn
WhatsApp
ಬಿವೈ ವಿಜಯೇಂದ್ರಗೆ ಬೆಂಗಾವಲು ವಾಹನ, ಪೊಲೀಸ್ ಭದ್ರತೆ ಒದಗಿಸಿದ ರಾಜ್ಯ ಸರ್ಕಾರ!

ಬೆಂಗಳೂರು ನ.13: ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (BS Yediyurappa) ಪುತ್ರ, ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ (BY Vijayendra) ಬಿಜೆಪಿ ರಾಜ್ಯ ಬಿಜೆಪಿ (BJP) ಘಟಕದ ಅಧ್ಯಕ್ಷರಾಗಿ ನೇಮಕವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅವರಿಗೆ ತಾತ್ಕಾಲಿಕವಾಗಿ ಬೆಂಗಾವಲು ವಾಹನ ಮತ್ತು ಪೊಲೀಸ್​ ಭದ್ರತೆ ನೀಡಿದೆ. ಪದಗ್ರಹಣದ ಬಳಿಕ ಅಧಿಕೃತವಾಗಿ ಸಿಬ್ಬಂದಿ ಸಹಿತ ಬೆಂಗಾವಲು ವಾಹನವನ್ನು ಸರ್ಕಾರ ಒದಗಿಸಲಿದೆ.

ರಾಜ್ಯಾಧ್ಯಕ್ಷರಾಗಿ ನೇಮಕವಾದ ಮೇಲೆ ಶಾಸಕ ಬಿವೈ ವಿಜಯೇಂದ್ರ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಅಧ್ಯಕ್ಷರಾಗಿ ನೇಮಕವಾದ ಬಳಿಕ ಬಿವೈ ವಿಜಯೇಂದ್ರ ಅವರು ಮೊದಲಿಗೆ ಬೂತ ಮಟ್ಟದ ಅಧ್ಯಕ್ಷರನ್ನು ಭೇಟಿಯಾಗಿ ಸಿಹಿ ತಿನ್ನಿಸಿದರು. ಬಳಕಿ ರವಿವಾರ ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಂತರ ಆದಿಚುಂಚನಗಿರಿ ಶ್ರೀಗಳನ್ನು ಭೇಟಿಯಾಗಿ ಆಶಿರ್ವಾದ ಪಡೆದರು.

ಇಂದು (ನ.14) ಬಿವೈ ವಿಜಯೇಂದ್ರ ಅವರು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್​ ಬೊಮ್ಮಾಯಿ, ಎಸ್​ಎಂ ಕೃಷ್ಣ ಅವರನ್ನು ಭೇಟಿಯಾದರು. ಬಳಿಕ ಮಾಜಿ ಪ್ರಧಾನಿ ದೇವೇಗೌಡರ ಅವರನ್ನು ಭೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದರು. ಈ ವೇಳೆ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಉಪಸ್ಥಿತರಿದ್ದರು.

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಕ್ಕೆ ಸಂತೋಷವಾಗಿದೆ: ಪ್ರಜ್ವಲ್​ ರೇವಣ್ಣ

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಕ್ಕೆ ಸಂತೋಷವಾಗಿದೆ. ಒಂದೆಡೆ ಜೆಡಿಎಸ್​ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕವಾಗಿದ್ದು, ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇಮಕವಾಗಿದ್ದಾರೆ. ಇದರಿಂದ ಎರಡು ಪಕ್ಷಗಳಿಗೆ ಮತ್ತಷ್ಟು ಬಲ ಬಂದಿದೆ. ಲೋಕಸಭೆ ಚುನಾವಣೆ ಬಗ್ಗೆ ಹೆಚ್​​ಡಿ ದೇವೇಗೌಡರ ಜೊತೆ ವಿಜಯೇಂದ್ರ ಚರ್ಚೆ ಮಾಡಿದ್ದಾರೆ.

ಹಾಸನದಲ್ಲಿ ಯಾರೇ ಅಭ್ಯರ್ಥಿಯಾದರೂ ನಾನು ಕೆಲಸ ಮಾಡುತ್ತೇನೆ. ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಜನರು ಅಸಮಾಧಾನಗೊಂಡಿದ್ದಾರೆ ಎಂದು ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ