ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗಂಡನಿಗೆ ಬುದ್ಧಿ ಕಲಿಸಲು ಮಕ್ಕಳನ್ನು ಬಸ್ ಸ್ಟಾಂಡ್ ನಲ್ಲಿ ಬಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ನಾಟಕ ಆಡಿದ ಮಹಿಳೆ!

Twitter
Facebook
LinkedIn
WhatsApp
ಗಂಡನಿಗೆ ಬುದ್ಧಿ ಕಲಿಸಲು ಮಕ್ಕಳನ್ನು ಬಸ್ ಸ್ಟಾಂಡ್ ನಲ್ಲಿ ಬಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ನಾಟಕ ಆಡಿದ ಮಹಿಳೆ!

ಕಾರವಾರ: ಗಂಡ-ಹೆಂಡತಿ ಜಗಳ ಉಂಡು ಮಲಗೋ ತನಕ ಎಂಬ ಗಾದೆಯೊಂದಿದೆ. ಆದರೆ ಗಂಡ-ಹೆಂಡತಿ ಜಗಳ ಮುಂದುವರಿದರೆ ಏನಾಗುತ್ತೆ ಅನ್ನೋದಕ್ಕೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ (Kumta) ತಾಲೂಕಿನ ಸಾಂತಗಲ್ ಗ್ರಾಮದ ನಿವೇದಿತಾ ನಾಗರಾಜ ಭಂಡಾರಿ ಎಂಬ ಗೃಹಿಣಿ ಮಾಡಿದ ಪಜೀತಿ ಯಾರಿಗೂ ಬೇಡ.

ಕಳೆದೆರಡು ದಿನಗಳ ಹಿಂದೆ ಗೃಹಿಣಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ ಎಂಬ ವರದಿಗೆ ಟ್ವಿಸ್ಟ್ ಸಿಕ್ಕಿದೆ. ಕುಮಟಾದ ಸಾಂತಗಲ್ ಗ್ರಾಮದ ನಿವೇದಿತಾ ನಾಗರಾಜ ಭಂಡಾರಿ ಮಕ್ಕಳನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು, ಕುಮಟಾದ ಹೆಡ್‌ಬಂದರ್ ಸಮುದ್ರದ ಬಳಿ ತಾನು ತಂದಿದ್ದ ಸ್ಕೂಟಿಯಲ್ಲಿ ಮಾಂಗಲ್ಯ, ಕಾಲುಂಗುರ, ಮೊಬೈಲ್ ಇಟ್ಟು ಸಮುದ್ರಕ್ಕೆ ಹಾರಿದಂತೆ ನಾಟಕವಾಡಿದ್ದಾಳೆ.

ಸಮುದ್ರದಲ್ಲಿ ಆಕೆಯ ವೇಲ್ ಬಿದ್ದು ತೇಲುತ್ತಿದ್ದುದ್ದನ್ನು ಕಂಡು ಲೈಫ್ ಗಾರ್ಡಗಳು, ಪೊಲೀಸರು ಸಮುದ್ರ ಜಾಲಾಡಿದ್ದಾರೆ. ಆದರೆ ಆಕೆಯ ಶವ ಮಾತ್ರ ಸಿಕ್ಕಿರಲಿಲ್ಲ. ಹೀಗಾಗಿ ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡ ಪಿಎಸ್‌ಐ ನವೀನ್ ನೇತೃತ್ವದ ತಂಡ ಸಮುದ್ರ ಜಾಲಾಡುವ ಜೊತೆ ಬೇರೆ ರೀತಿಯಲ್ಲೂ ತನಿಖೆ ಕೈಗೊಂಡಿದ್ದರು. 

ಕೊನೆಗೆ ಆಟೋ ಚಾಲಕರೊಬ್ಬರ ಮೂಲಕ ಆಕೆ ಬೇರೆಡೆ ಅಡಗಿರುವ ಕುರಿತು ಮಾಹಿತಿ ಕಲೆಹಾಕಿ ಬಲೆ ಬೀಸಿದಾಗ ಸಾವಿನ ನಾಟಕವಾಡಿರುವುದು ಪತ್ತೆಯಾಗಿದೆ. ಆಕೆಯನ್ನು ವಿಚಾರಣೆ ನಡೆಸಿದಾಗ ತಾನು ಗಂಡನ ಮೇಲೆ ಕೋಪಕ್ಕೆ ಹೀಗೆ ಮಾಡಿದ್ದೇನೆ. ಪ್ರತಿ ದಿನ ಕುಡಿದು ನನ್ನೊಂದಿಗೆ ಜಗಳವಾಡುತಿದ್ದ, ಹೊಡೆಯುತಿದ್ದ. ಹೀಗಾಗಿ ಆತನಿಗೆ ಬುದ್ಧಿ ಕಲಿಸಲು ಹೀಗೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ.

ಸದ್ಯ ಆತ್ಮಹತ್ಯೆ ಪ್ರಕರಣವೇನೋ ಸುಖಾಂತ್ಯ ಕಂಡಿದೆ. ಆದರೆ ಗಂಡ-ಹೆಂಡತಿ ಜಗಳದಿಂದ ಪೊಲೀಸರು, ದಿನವಿಡೀ ರಕ್ಷಣಾ ಕಾರ್ಯದಲ್ಲಿ ತೊಡಗಿದ ಲೈಫ್ ಗಾರ್ಡ್‌ಗಳ ಸಮಯ ವ್ಯರ್ಥ ಮಾಡಿದ್ದು ಮಾತ್ರ ವಿಪರ್ಯಾಸವಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ