ಮಂಗಳವಾರ, ಡಿಸೆಂಬರ್ 5, 2023
ಇಂದಿರಾ ಗಾಂಧಿ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಇಂದು ಮಿಜೋರಾಂ ನೂತನ ಸಿಎಂ ಸ್ಥಾನಕ್ಕೆ ಸಜ್ಜು..!-ಚೆನ್ನೈನಲ್ಲಿ ಭಾರಿ ಮಳೆ ; 5 ಮಂದಿ ಸಾವು - ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!-ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!-ಉದ್ಯಮಿಗೆ ವಂಚನೆ ಆರೋಪ ಪ್ರಕರಣ ; ಚೈತ್ರಾ ಸಹಿತ ಇಬ್ಬರಿಗೆ ಜಾಮೀನು ಮಂಜೂರು..!-ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ನಿಂದ ಹರೀಶ್ ಕುಮಾರ್ ಅಥವಾ ರಮನಾಥ ರೈ ನಳಿನ್ ವಿರುದ್ಧ ಅಭ್ಯರ್ಥಿ ?-ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ-Gold Rate : ದುಬಾರಿಯತ್ತ ಬಂಗಾರದ ಬೆಲೆ ; ಇಂದಿನ ಚಿನ್ನದ ದರ ಹೇಗಿದೆ?-8 ಬಾರಿ ಮೈಸೂರು ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು; ಕಾಡಾನೆ ಸೆರೆ ಹಿಡಿಯುವ ವೇಳೆ ದುರ್ಘಟನೆ..!-ದಿವ್ಯಾಂಗರು, ಅಂಗವಿಕಲರ ಕಲ್ಯಾಣದ ಮಹತ್ವದ ವಿಷಯದ ಕುರಿತಂತೆ ಸರ್ಕಾರದ ಗಮನ ಸೆಳೆದ ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್-ಪ್ರತಾಪ್ ಸಿಂಹರವರು ಸತತ ಎರಡು ಬಾರಿ ಗೆದ್ದಂತಹ ಮೈಸೂರು ಲೋಕಸಭಾ ಕ್ಷೇತ್ರ ಈ ಬಾರಿ ಜೆಡಿಎಸ್ ತೆಕ್ಕೆಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಿ.ಕೆ ಶಿವಕುಮಾರ್ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ; ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಚರ್ಚೆ!

Twitter
Facebook
LinkedIn
WhatsApp
ಡಿ.ಕೆ ಶಿವಕುಮಾರ್ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ; ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಚರ್ಚೆ!

ಬೆಂಗಳೂರು: ಬಿಜೆಪಿ ಸಂಸದ ಹಾಗೂ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಡಿಕೆಶಿ ಗೃಹ ಕಚೇರಿಗೆ ತೆರಳಿ ಖುದ್ದು ಅವರನ್ನು ಭೇಟಿಯಾಗಿ, ಕೆಲಕಾಲ ಚರ್ಚೆ ನಡೆಸಿದ್ದಾರೆ. ಈ ವಿಚಾರವನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದು, ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ ಅವರು ಇಂದು ನನ್ನನ್ನು ಗೃಹ ಕಚೇರಿಯಲ್ಲಿ ಭೇಟಿಯಾಗಿ ಹಲವು ವಿಷಯಗಳ‌ ಕುರಿತು ಚರ್ಚಿಸಿದರು ಎಂದು ಬರೆದುಕೊಂಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಅವರೂ ಟ್ವೀಟ್‌ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರದ ಮೂಲಸೌಕರ್ಯಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ.

K-RIDE ಮತ್ತು BMRCL ಎರಡರ MDಗಳ ಪ್ರಮುಖ ಹುದ್ದೆಗಳು ಕಳೆದ 5-6 ತಿಂಗಳುಗಳಿಂದ ಖಾಲಿ ಉಳಿದಿದ್ದು, ಇದಕ್ಕೆ ಪೂರ್ಣಾವಧಿ ಎಂಡಿಗಳನ್ನು ನೇಮಕ ಮಾಡುವಂತೆ ಮನವಿ ಮಾಡಿದ್ದೇನೆ. ಎರಡೂ ಮನವಿಗಳಿಗೆ ತಕ್ಷಣ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

2019ರಲ್ಲಿ ನಾನು ಬನಶಂಕರಿ ಮೆಟ್ರೋ ಸ್ಟೇಷನ್ ಮತ್ತು ಬನಶಂಕರಿ BMTC ಬಸ್ ಟರ್ಮಿನಲ್ ನಡುವೆ ಸ್ಕೈವಾಕ್ ಅನ್ನು ಪ್ರಸ್ತಾಪಿಸಿದ್ದೆ. ಈ ಯೋಜನೆಯನ್ನು ತ್ವರಿತಗೊಳಿಸುವಂತೆ ಮನವಿ ಮಾಡಿದ್ದೇನೆ. ನಮ್ಮ ಮೆಟ್ರೋ ಮೂರನೇ ಹಂತವನ್ನು ಈ ಹಿಂದೆ ರಾಜ್ಯ ಸರ್ಕಾರವು ಅನುಮೋದಿಸಿದೆ. ಆದರೆ, ಪರಿಷ್ಕೃತ ಡಿಪಿಆರ್ ಈಗ ಸಲ್ಲಿಕೆಗೆ ಬಾಕಿ ಇದ್ದು, ಇದರ ಬಗ್ಗೆಯೂ ಚರ್ಚಿಸಿದ್ದಾರೆ.

ಬೆಂಗಳೂರಿನಲ್ಲಿ ಸುರಂಗ ರಸ್ತೆಗಳನ್ನು ನಿರ್ಮಿಸುವ ಪ್ರಸ್ತಾಪವನ್ನು ನಾವು ಚರ್ಚಿಸಿದೆವು. ಹೆಚ್ಚಿನ ರಸ್ತೆಗಳನ್ನು ನಿರ್ಮಿಸುವ ಮೂಲಕ ಸಂಚಾರ ದಟ್ಟಣೆಯನ್ನು ಎಂದಿಗೂ ಪರಿಹರಿಸಲಾಗುವುದಿಲ್ಲ. ಆದ್ದರಿಂದ ಸುರಂಗ ರಸ್ತೆಗಳ ಬದಲಿಗೆ ಸಾಮೂಹಿಕ ಕ್ಷಿಪ್ರ ಸಾರಿಗೆ ರೈಲು ವ್ಯವಸ್ಥೆಗಳ ಕಲ್ಪನೆಯನ್ನು ಪ್ರೋತ್ಸಾಹಿಸಬೇಕು ಎಂದು ಡಿಕೆಶಿಗೆ ತೇಜಸ್ವಿ ಸಲಹೆ ನೀಡಿದ್ದಾರೆ.

ಸಂಚಾರ ದಟ್ಟಣೆ ನಿವಾರಣೆಗೆ ಹೆಚ್ಚಿನ ರಸ್ತೆಗಳು ಪರಿಹಾರವಲ್ಲ. ಬೆಂಗಳೂರಿನ ಹೆಚ್ಚಿನ ಜನಸಂಖ್ಯೆಗೆ ಅನುಕೂಲವಾಗುವಂತೆ ಸುರಂಗ ರಸ್ತೆಗಳ ಬದಲಿಗೆ ಸಮೂಹ ಕ್ಷಿಪ್ರ ಸಾರಿಗೆ ವ್ಯವಸ್ಥೆಗಳಲ್ಲಿ ಸಾರ್ವಜನಿಕ ಹಣವನ್ನು ಹೂಡಿಕೆ ಮಾಡುವಂತೆ ಒತ್ತಾಯಿಸಿದ್ದಾರೆ.

ಡಿಸಿಎಂ ನನ್ನ ಸಲಹೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿ ಕ್ರಮದ ಭರವಸೆ ನೀಡಿರುವುದು ಸಂತಸ ತಂದಿದೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ