ನೆರವಿಗಾಗಿ ಬ್ಯಾಂಕ್ ಸ್ಥಾಪಿಸಲು ಅವಕಾಶವಿದೆ.ಛಾಯಾ ಗ್ರಾಹಕರಿಗೂ ರಾಜ್ಯೋತ್ಸವ ಪ್ರಶಸ್ತಿ ದೊರಕಲಿ:ನಿಕೇತ್ ರಾಜ್ ಮೌರ್ಯ
ತುಮಕೂರು: ಅನ್ಯ ಕ್ಷೇತ್ರಗಳಿಗೆ ಪ್ರಶಸ್ತಿ ನೀಡುವಂತೆ ರಾಜ್ಯದ ಅತ್ಯುತ್ತಮ ಫೋಟೋ ಮತ್ತು ವಿಡಿಯೋ ಗ್ರಾಫರ್‌ಗಳಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಮೀಸಲಿಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುವುದಾಗಿ ತುಮಕೂರು ಲೋಕಸಭಾ ಟಿಕೆಟ್ ಆಕಾಂಕ್ಷಿ ಹಾಗೂ ಕೆಪಿಸಿಸಿ ವಕ್ತಾರ ನಿಕೇತ್ ರಾಜ್‌ಮೌರ್ಯ ಅವರು ಭರವಸೆ ನೀಡಿದರು.
ನಗರದ ಸದಾಶಿವ ನಗರ ಕುಣಿಗಲ್ ರಸ್ತೆಯ ಹೆಚ್.ಎನ್.ಆರ್. ಅರ್ಕೇಡ್‌ನಲ್ಲಿ ತುಮಕೂರು ಜಿಲ್ಲಾ ಫೋಟೋ ಮತ್ತು ವಿಡಿಯೋಗ್ರಾಫರ್ಸ್ ಸಂಘದ ವತಿಯಿಂದ ಆಯೋಜಿಸಿದ್ದ ಹಿಂದಿನ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಅಭಿನಂದನೆ ಹಾಗೂ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೂರಾರು ವರ್ಷಗಳ ನೆನಪನ್ನು ಶಾಶ್ವತವಾಗಿಸುವ ಛಾಯಾಗ್ರಾಹಕರು, ತಂತ್ರಜ್ಞಾನ ಕ್ರಾಂತಿಯ ಫಲವಾಗಿ ಬಂದ ಮೊಬೈಲ್‌ನಿಂದಾಗಿ ದೊಡ್ಡ ಪೈಪೋಟಿ ಯನ್ನು ಎದುರಿಸುತ್ತಿದ್ದಾರೆ. ಮದುವೆ ಇನ್ನಿತರ ಶುಭ ಕಾರ್ಯಗಳಲ್ಲಿ ಪುರೋಹಿತರಿಗಿಂತ ಹೆಚ್ಚು ಪ್ರಾಮುಖ್ಯತೆ ಪಡೆಯುತ್ತಿದ್ದ ಫೋಟೋ, ವಿಡಿಯೋಗ್ರಾಫರ್‌ಗಳ ಸ್ಥಿತಿ ಇಂದು ಸಂಕಷ್ಟದಲ್ಲಿದೆ. ಛಾಯಾಗ್ರಾಹಕರ ಅನುಕೂಲಕ್ಕಾಗಿ ಬ್ಯಾಂಕ್ ಸ್ಥಾಪಿಸಲು ಅವಕಾಶವಿದೆ. ಸಹಕಾರ ಸಚಿವರೂ ನಮ್ಮವರೇ ಇರುವುದರಿಂದ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ ಎಂದು ಅವರು ನುಡಿದಿದ್ದಾರೆ.