ಭಾನುವಾರ, ಫೆಬ್ರವರಿ 23, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್ ರದ್ದು ಮಾಡುವ ಪ್ರಸ್ತಾಪ ಇಲ್ಲ ; ಕೆ. ಹೆಚ್ ಮುನಿಯಪ್ಪ

Twitter
Facebook
LinkedIn
WhatsApp
ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್ ರದ್ದು ಮಾಡುವ ಪ್ರಸ್ತಾಪ ಇಲ್ಲ ; ಕೆ. ಹೆಚ್ ಮುನಿಯಪ್ಪ

ಬಿಪಿಎಲ್​​​ ಕಾರ್ಡ್​​ ಹೊಂದಿರುವ ಕುಟುಂಬಸ್ಥರು ವೈಟ್​​ ಬೋರ್ಡ್​ ಕಾರ್ಡ್​ ಹೊಂದಿದ್ದರೆ ರೇಷನ್​ ಕಾರ್ಡ್​ ರದ್ದು ಮಾಡಲಾಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಈ ಬಗ್ಗೆ ನಾವು ಸದ್ಯಕ್ಕೆ ಯಾವುದೇ ತೀರ್ಮಾನ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆಹಾರ ಸಚಿವರು, ರೇಷನ್​ ಕಾರ್ಡ್​​ಗಾಗಿ ಒಂದು ವರ್ಷದಿಂದ ಪೆಂಡಿಂಗ್ ಇರುವ 3 ಲಕ್ಷ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡುತ್ತೇವೆ. ಅರ್ಹ ಫಲಾನುಭವಿಗಳನ್ನು ಪರಿಶೀಲಿಸುವಂತೆ ಸೂಚಿಸುತ್ತೇನೆ ಎಂದು ಹೇಳಿದರು.

ಈ ಹಿಂದೆ 21 ಲಕ್ಷ ಕಾರ್ಡ್‌ಗೆ ಬ್ಯಾಂಕ್ ‌ಅಕೌಂಟ್ ಇರಲಿಲ್ಲ. 14 ಲಕ್ಷ ಬ್ಯಾಂಕ್ ‌ಅಕೌಂಟ್ ಲಿಂಕ್ ಆಗಿದೆ‌, ಇನ್ನು 7 ‌ಲಕ್ಷ ಆಗಬೇಕು. ಕೂಡಲೇ ಉಳಿದ ಲಿಂಕ್ ಮಾಡಲಾಗುತ್ತೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

ಬಿಪಿಎಲ್ ಕಾರ್ಡ್‌ದಾರರಿಗೆ ಕಾರು ಇದ್ದರೆ ಕ್ಯಾನ್ಸೆಲ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಬಿಪಿಎಲ್ ಇದ್ದವರು ಸಣ್ಣ ಕಾರು ಇಟ್ಟುಕೊಂಡಿರುತ್ತಾರೆ. ನನ್ನ ಗಮನಕ್ಕೂ ಈ ವಿಚಾರ ಬಂದಿದೆ. ಈ ವಿಚಾರದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ‌ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮೊದಲು ಬಿಪಿಎಲ್ ಕಾರ್ಡ್ ಅರ್ಹತೆ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಈ ಹಿಂದಿನ ಸರ್ಕಾರದಲ್ಲಿ ವಿಲೇವಾರಿ ಮಾಡದೆ ಉಳಿದುಕೊಂಡಿರುವ ಅರ್ಜಿಯನ್ನು ಮೊದಲು ಪರಿಶೀಲನೆ ನಡೆಸುತ್ತೇವೆ. ಸದ್ಯಕ್ಕೆ ಕಾರು ಇದ್ದರೆ ಬಿಪಿಎಲ್ ರದ್ಧತಿ ಬಗ್ಗೆ ಕ್ರಮ ಆಗುವುದಿಲ್ಲ ಎಂದು ಮುನಿಯಪ್ಪ ತಿಳಿಸಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಹಿನ್ನೆಲೆಯಲ್ಲಿ ರೇಷನ್​ ಕಾರ್ಡ್​​ಗಳಿಗೆ ಭಾರೀ ಬೇಡಿಕೆ ಹೆಚ್ಚಾಗಿದ್ದು, ಸದ್ಯ ಹೊಸ ಕಾರ್ಡ್​​ಗಳನ್ನು ಕೊಡಲು ಆರ್ಥಿಕ ಇಲಾಖೆ ಅನುಮತಿ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಹೊಸ ಅರ್ಜಿಗಳನ್ನು ತೆಗೆದುಕೊಳ್ಳುತ್ತಿಲ್ಲ. ಆದರೆ ಈಗಾಗಲೇ ಸಲ್ಲಿಕೆ ಆಗಿರುವ ಅರ್ಜಿಗಳ ಪರಿಶೀಲನೆಗೆ ಮುಂದಾಗಿದೆ.

ಇನ್ನು, ಈ ಹಿಂದೆ ತಪ್ಪು ಮಾಹಿತಿ ನೀಡಿ ಬಿಪಿಎಲ್​ ಕಾರ್ಡ್​ ಪಡೆದುಕೊಂಡಿರುವ ಮೇಲೆ ಕ್ರಮಕ್ಕೂ ಆಹಾರ ಇಲಾಖೆ ಮುಂದಾಗಿದೆ. ಸುಮಾರು 70 ಸಾವಿರಕ್ಕೂ ಅಧಿಕ ಸರ್ಕಾರಿ ಇಲಾಖೆ ಸಿಬ್ಬಂದಿ ಬಿಪಿಎಲ್ ಕಾರ್ಡ್​ ಪಡೆದುಕೊಂಡಿರುವುದು ಕಂಡು ಬಂದಿದೆ. ಈ ಕಾರ್ಡ್​​ಗಳನ್ನು ರದ್ದು ಮಾಡಲು ಇಲಾಖೆ ಮುಂದಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist