ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ ವರ್ಷದೊಳಗೆ ಭಾರೀ ಬದಲಾವಣೆ ಆಗಲಿದ್ದು ನನಗೆ ಮತ್ತೊಮ್ಮೆ ಅವಕಾಶ ಸಿಗಲಿದೆ; ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ

Twitter
Facebook
LinkedIn
WhatsApp
ರಾಜ್ಯದಲ್ಲಿ ವರ್ಷದೊಳಗೆ ಭಾರೀ ಬದಲಾವಣೆ ಆಗಲಿದ್ದು ನನಗೆ ಮತ್ತೊಮ್ಮೆ ಅವಕಾಶ ಸಿಗಲಿದೆ; ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ

ಮುಂದಿನ ಒಂದು ವರ್ಷದಲ್ಲಿ ಕರ್ನಾಟಕ ರಾಜಕೀಯದಲ್ಲಿ (Karnataka Politics) ಸಾಕಷ್ಟು ಬದಲಾವಣೆ ಆಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​​​ಡಿ ಕುಮಾರಸ್ವಾಮಿ (HD Kumaraswamy) ಗುರುವಾರ ಹೇಳಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ (Prajwal Revanna) ಪರ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ದೇವರ ಇಚ್ಛೆಯಿಂದ ನಿಮ್ಮ ಸೇವೆ ಮಾಡಲು ನನಗೆ ಇನ್ನೊಂದು ಅವಕಾಶ ಸಿಗುತ್ತದೆ. ನಾನು ಮೂರು ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ನಿಮ್ಮ ಆಶೀರ್ವಾದದಿಂದಲೇ ನನಗೆ ಮೂರನೇ ಜನ್ಮ ಸಿಕ್ಕಿದೆ. ಈ ಜನ್ಮದಲ್ಲಿ ಇನ್ನೊಂದು ವರ್ಷದೊಳಗೆ ನಿಮ್ಮ ಸೇವೆಗೆ ಅವಕಾಶ ಸಿಗಲಿದೆ ಎಂದಿದ್ದಾರೆ. ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ಬಗ್ಗೆ ಮಾರ್ಮಿಕವಾಗಿ ಈ ರೀತಿ ಸುಳಿವು ನೀಡಿದ್ದಾರೆಯೇ ಎಂಬ ಗುಸುಗುಸು ಇದೀಗ ಆರಂಭವಾಗಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದಕ್ಕೆ ನಮಗೆ ಹೊಟ್ಟೆಕಿಚ್ಚು ಇಲ್ಲ. ಆದರೆ, ಈಗಿನ ಬೆಳವಣಿಗೆಗಳನ್ನು ನೋಡಿದರೆ ರಾಜ್ಯ ಎಲ್ಲಿಗೆ ಹೋಗುತ್ತದೋ ಎಂಬ ಆತಂಕ ಕಾಡುತ್ತಿದೆ. ಉಚಿತ ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ಪಕ್ಷವೇನೂ ಅದರ ಹಣ ಖರ್ಚು ಮಾಡುತ್ತಿಲ್ಲ. ಬದಲಾಗಿ ಜನರ ಹಣದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

1.05 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಈ ಪೈಕಿ 58,000 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ವ್ಯಯಿಸುತ್ತಿದ್ದಾರೆ. ರಾಜ್ಯದಲ್ಲಿ 6.87 ಲಕ್ಷ ಕೋಟಿ ಸಾಲವಿದೆ. ಅದನ್ನು ಮರುಪಾವತಿ ಮಾಡುವವರು ಯಾರು? ಇಂದು ಕಾಂಗ್ರೆಸ್ ಸರ್ಕಾರ ಇದೆ, ನಾಳೆ ಹೋಗುತ್ತಾರೆ. ಜನರು ಅದನ್ನು ಮರುಪಾವತಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಆದಿಚುಂಚನಗಿರಿ ಮಠದ ವಿಚಾರವಾಗಿ ಕಾಂಗ್ರೆಸ್ ಮಾಡಿರುವ ಟೀಕೆಗಳಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕೆಆರ್ ಪೇಟೆ ಕೃಷ್ಣ ಸೇರಿದಂತೆ ವಿಶ್ವ ಒಕ್ಕಲಿಗರ ಸಂಘದ ಅನೇಕರು ಬೇರೆ ಮಠಕ್ಕೆ ಹುಡುಕಾಟ ನಡೆಸಿದ್ದಾರೆ. ಹೀಗಾಗಿ, ನಾನು ಬೆಂಬಲವನ್ನು ನೀಡಿದ್ದೇನೆ. ಇದು ತಪ್ಪೇ ಎಂದು ಪ್ರಶ್ನಿಸಿದರು.

ಈ ಮಧ್ಯೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಬಂಡಾಯವನ್ನು ಶಮನಗೊಳಿಸುವಲ್ಲಿ ಬಿಜೆಪಿ ಹೈಕಮಾಂಡ್ ಯಶಸ್ವಿಯಾಗಿದ್ದು, ಅವರು ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಆರಂಭಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ