ಮೂರನೇ ಬಾರಿಗೆ ಚಂದ್ರನ ಅಂಗಳಕ್ಕೆ ನೌಕೆ; ಹೊಸ ದಿಕ್ಕಿನತ್ತ ಭಾರತ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಗಗನನೌಕೆ ಶುಕ್ರವಾರ ಮಧ್ಯಾಹ್ನ 2:35ಕ್ಕೆ ಉಡಾವಣೆಗೊಂಡಿದೆ.
ಚಂದ್ರಯಾನ-3 ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿAದ ಲಾಂಚ್ ವೆಹಿಕಲ್ ಮಾರ್ಕ್-111 ಮೂಲಕ ಉಡಾವಣೆ ಮಾಡಲಾಯಿತು. ಅತ್ಯಂತ ಸೂಕ್ಷ್ಮ ತಂತ್ರಜ್ಞಾನ ಬಳಸಿ ಚಂದ್ರನ ದಕ್ಷಿಣ ಧ್ರುವದ ಮೇಲೆ ಗಗನನೌಕೆಯನ್ನು ಇಳಿಸಲಾಗುವುದು.
ಚಂದ್ರಯಾನ-2 ವೈಫಲ್ಯವನ್ನು ಗಮನದಲ್ಲಿಟ್ಟುಕೊಂಡು ಚಂದ್ರಯಾನ-3 ಯಶಸ್ಸಿಗೆ ಇಸ್ರೋ ಅಡಿಯಿಟ್ಟಿದೆ. ಜು.14 ರ ಮಧ್ಯಾಹ್ನ 2:35ಕ್ಕೆ ಚಂದ್ರಯಾನ-3 ಅನ್ನು ಎಲ್‌ವಿಎಂ3 ಮೂಲಕ ಉಡಾವಣೆಗೆ ಇಸ್ರೋ ವಿಜ್ಞಾನಿಗಳು ಸಜ್ಜಾಗಿದ್ದರು. ಚಂದ್ರಯಾನ-3 ಯೋಜನೆ ಚಂದ್ರಯಾನ-2ರ ಮುಂದುವರಿದ ಭಾಗವಾಗಿದ್ದು, ಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ-3 ಗಗನನೌಕೆ ಇಳಿಸಲಾಗುವುದು. ಪ್ರೊಪಲ್ಷನ್ ಮಾಡ್ಯೂಲ್, ಲ್ಯಾಂಡರ್ ಮತ್ತು ರೋವರ್ ಕಾನ್ಫಿಗರೇಶನ್ ಅನ್ನು ಚಂದ್ರನ ಕಕ್ಷೆಯಲ್ಲಿ 100 ಕಿಮೀವರೆಗೆ ಸಾಗಿಸುತ್ತದೆ.
ಚಂದ್ರಯಾನ-3 ಗಗನನೌಕೆಯನ್ನು ಇಳಿಸಲು ಚಂದ್ರನ ಮೇಲ್ಮೈನಲ್ಲಿ ಜಾಗವನ್ನು ಗುರುತಿಸಲಾಗಿದೆ. ಚಂದ್ರನ ದಕ್ಷಿಣ ಧ್ರುವದ ಬಳಿಯ 4 ಕಿಮೀ ಉದ್ದ ಹಾಗೂ 2 ಕಿಮೀ ಅಗಲದ ಪ್ರದೇಶದಲ್ಲಿ ಗಗನನೌಕೆಯನ್ನು ಇಳಿಸಲಾಗುವುದು ಎಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ತಿಳಿಸಿದ್ದಾರೆ.
ಚಂದ್ರಯಾನ-1 ಮತ್ತು 2ರಲ್ಲಿ ಇದ್ದಂತೆ ಚಂದ್ರಯಾನ-3ರಲ್ಲಿ ಆರ್ಬಿಟರ್ ಇರುವುದಿಲ್ಲ. ಲ್ಯಾಂಡರ್ ಮತ್ತು ರೋವರ್ ಹೊತ್ತ ಗಗನನೌಕೆಯು ಆಗಸ್ಟ್ 23 ರ ಸುಮಾರಿಗೆ ಚಂದ್ರನ ಕಕ್ಷೆಗೆ ತಲುಪಲಿದೆ. ನಂತರ 15 ದಿನಗಳಲ್ಲಿ ನೌಕೆ ಚಂದ್ರನಲ್ಲಿ ಇಳಿಯಲಿದೆ. ಲ್ಯಾಂಡರ್ ಮತ್ತು ರೋವರ್ ಚಂದ್ರನ ಮೇಲ್ಮೈಯಲ್ಲಿ ಕಾರ್ಯನಿರ್ವಹಿಸಲು ಮತ್ತು ಡೇಟಾವನ್ನು ಸಂಗ್ರಹಿಸಲು ಉದ್ದೇಶಿಸಲಾಗಿದೆ. ನೌಕೆ ಚಂದ್ರನಲ್ಲಿ ಇಳಿದಾಗ ಲ್ಯಾಂಡರ್‌ನಿಂದ ರೋವರ್ ಬೇರ್ಪಟ್ಟು ಪ್ರಯೋಗ ನಡೆಸಿ, ಡೇಟಾವನ್ನು ಸಂಗ್ರಹಿಸಲು ಚಂದ್ರನ ಮೇಲ್ಮೈಯಲ್ಲಿ ಸಂಚರಿಸುತ್ತದೆ. ಚಂದ್ರನನ್ನು ಆವರಿಸಿರುವ ಶಿಲಾ ಪದರದ ಮೇಲಿನ ಗಟ್ಟಿಗೊಂಡಿಲ್ಲದ ಘನಪದಾರ್ಥ ಅಧ್ಯಯನ ನಡೆಸುವ ಲೂನಾರ್ ರಿಗೊಲಿತ್, ಅಲ್ಲಿ ಭೂಕಂಪನ ಅಧ್ಯಯನ ಮಾಡುವ ಲೂನಾರ್ ಸೆಸಿಮಿಸಿಟಿ, ಹೊರ ಆವರಣದಲ್ಲಿನ ಪ್ಲಾಸ್ಮಾ, ಬಾಹ್ಯಾಕಾಶ ನೌಕೆ ಇಳಿದ ಪ್ರದೇಶದಲ್ಲಿನ ಧಾತುರೂಪದ ಸಂಯೋಜನೆ ಮುಂತಾದವುಗಳ ಅಧ್ಯಯನ ನಡೆಸಲಾಗುವುದು.
ಚಂದ್ರಯಾನ-3 ಭಾರತದ ಭರವಸೆ, ಕನಸುಗಳನ್ನ ಹೊತ್ತೊಯ್ಯಲಿದೆ – ಪ್ರಧಾನಿ ಶುಭಹಾರೈಕೆ
ನವದೆಹಲಿ: ಚಂದ್ರನ (Mission Moon) ಮೇಲೆ ಗಗನನೌಕೆ ಇಳಿಸಿ ಅಧ್ಯಯನ ಮಾಡುವ ಉದ್ದೇಶದ ಚಂದ್ರಯಾನ-3 (Chandrayaan-3) ಕಾರ್ಯಕ್ರಮಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಚಂದ್ರಯಾನ-3 ಉಡಾವಣೆ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಭಹಾರೈಸಿದ್ದಾರೆ.
ಚಂದ್ರಯಾನ-3 ಕುರಿತು ಟ್ವೀಟ್ ಮಾಡಿರುವ ಮೋದಿ, ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2023 ರ ಜುಲೈ 14 ಯಾವಾಗಲೂ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಿದೆ. ಚಂದ್ರಯಾನ-3 ನಮ್ಮ ಮೂರನೇ ಚಂದ್ರಯಾನ. ಅದರ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಈ ಗಮನಾರ್ಹ ಮಿಷನ್ ನಮ್ಮ ರಾಷ್ಟ್ರದ ಭರವಸೆ ಮತ್ತು ಕನಸುಗಳನ್ನು ಹೊತ್ತೊಯ್ಯುತ್ತದೆ ಎಂದು ಬರೆದುಕೊಂಡಿದ್ದಾರೆ.
ಆಂಧ್ರಪ್ರದೇಶದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಲ್ಯಾಂಡರ್, ರೋವರ್ ಹೊತ್ತ ರಾಕೆಟ್ ಇಂದು (ಶುಕ್ರವಾರ) ಮಧ್ಯಾಹ್ನ 2:35 ಕ್ಕೆ ನಭಕ್ಕೆ ಹಾರಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ವಿಜ್ಞಾನಿಗಳು ಮತ್ತು ತಂತ್ರಜ್ಞರ ತಂಡ ಸಿದ್ಧತೆ ಪೂರ್ಣಗೊಳಿಸಿದೆ.
14th July 2023 will always be etched in golden letters as far as India’s space sector is concerned. Chandrayaan-3, our third lunar mission, will embark on its journey. This remarkable mission will carry the hopes and dreams of our nation. pic.twitter.com/EYTcDphaES
— Narendra Modi (@narendramodi) July 14, 2023