ನನಗೆ ವಿರೋಧ ಮಾಡಿದವರಿಗೆ ಟಿಕೆಟ್ ಪಡೆಯಲು ಆಗಿಲ್ಲ ; ಶೋಭಾ ಕರಂದ್ಲಾಜೆ ಪರೋಕ್ಷವಾಗಿ ಟಾಂಗ್ ನೀಡಿದ್ದು ಯಾರಿಗೆ?
ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ವಪಕ್ಷೀಯರಿಂದಲೇ ಗೋಬ್ಯಾಕ್ ಶೋಭಕ್ಕಾ ಅಭಿಯಾನ ನಡೆದ ನಂತರ ಬೆಂಗಳೂರು ಉತ್ತರಕ್ಕೆ ಶೋಭಾ ಕರಂದ್ಲಾಜೆ ಹೆಸರು ಕೇಳಿ ಬಂದಿತ್ತು. ಇತ್ತ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದಲೂ ಶೋಭಾಗೆ ಗೋ ಬ್ಯಾಕ್ ಬಿಸಿ ತಟ್ಟಿದೆ. ಅದಾಗ್ಯೂ ಶೋಭಾ ಕರಂದ್ಲಾಹಜೆ ಅವರು ಬಿಎಸ್ ಯಡಿಯೂರಪ್ಪ ಅವರ ಮೂಲಕ ಬೆಂಗಳೂರಿನಿಂದ ಲೋಕಸಭೆ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂಬಂಧ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಶೋಭಾ ಕರಂದ್ಲಾಜೆ, ಟಿಕೆಟ್ ಸಿಗುವ ದೆಹಲಿ ನಾಯಕರ ಮೇಲೆ ನನಗೆ ವಿಶ್ವಾಸ ಇತ್ತು. ಅವರು ಯಾವ ಜವಬ್ದಾರಿ ನನಗೆ ವಹಿಸಿದ್ರು, ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಯಾವುದೇ ರಾಜ್ಯದ ಚುನಾವಣೆ ಆಗಲಿ, ಯಾವುದೇ ಇಲಾಖೆ ಆಗಲಿ ಅಲ್ಲೆಲ್ಲ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೆ. ಈ ಕಾರಣಕ್ಕೆ ನನ್ನ ನಾಯಕತ್ವವನ್ನು ಗುರುತಿಸಿ ಟಿಕೆಟ್ ಕೊಟ್ಟಿದ್ದಾರೆ ಎಂದರು.
ಉಡುಪಿ ಚಿಕ್ಕಮಗಳೂರಲ್ಲಿ ಬಹಳ ದೊಡ್ಡ ಅಭಿವೃದ್ಧಿ ಕೆಲಸ ಆಗಿದೆ ಎಂದ ಶೋಭಾ ಕರಂದ್ಲಾಜೆ, ಆದರೆ ಅದನ್ನು ಪರಿಗಣಿಸದೆ ಕೆಲವರು ವಿರೋಧ ಮಾಡಿದ್ದರು. ಕೇವಲ ಪ್ರಾಯೋಜಿತ ಗುಂಪು ತಮಗೆ ಟಿಕೆಟ್ ಬೇಕೆಂಬ ಕಾರಣಕ್ಕೆ ಏನೇನೋ ಮಾಡಿತ್ತು. ಆದರೆ ಅವರು ಅದರಲ್ಲಿ ಯಶಸ್ವಿಯಾಗಿಲ್ಲ, ಅವರಿಂದಲೂ ಟಿಕೆಟ್ ತಗೊಂಡು ಬರೋಕೆ ಆಗಿಲ್ಲ. ನಮ್ಮ ಪಕ್ಷದಲ್ಲಿ ಈ ರೀತಿ ಪಕ್ಷ ವಿರೋಧಿ ಚಟುವಟಿಕೆ ಮಾಡುವವರಿಗೆ, ಗಲಭೆ ಎಬ್ಬಿಸುವವರಿಗೆ, ದೂಷಣೆ ಮಾಡುವವರಿಗೆ, ಅವಮಾನ ಮಾಡುವವರಿಗೆ ಪಕ್ಷದಲ್ಲಿ ಟಿಕೆಟ್ ಕೊಡಲ್ಲ ಮತ್ತು ಪಕ್ಷ ಪರಿಗಣಿಸಲ್ಲ ಅನ್ನೋದು ನನ್ನ ಉದಾಹರಣೆಯ ಮೂಲಕ ಸಾಬೀತಾಗಿದೆ ಎಂದು ಸಿಟಿ ರವಿ ಹೆಸರೇಳದೆಯೇ ಟಾಂಗ್ ನೀಡಿದರು.
ಇನ್ನಾದರೂ ಪಕ್ಷ ವಿರೋಧಿ ಚಟುವಟಿಕೆ ಮಾಡುವವರು ಪಾಠ ಕಲಿಯಲಿ, ಬಿಜೆಪಿ ಒಂದು ಶಿಸ್ತಿನ ಪಕ್ಷ ಎಂದು ಹೆಸರು ಹೇಳದೆಯೇ ಸಿಟಿ ರವಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ ಶೋಭಾ ಕರಂದ್ಲಾಜೆ, ಇದರಿಂದ ನನಗೆ ನಿಜಕ್ಕೂ ಆನಂದವಾಗಿದೆ, ನಾನು ಬೆಂಗಳೂರಲ್ಲಿ ಶಾಸಕರಾಗಿ ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ನಾನು ಸದಾನಂದಗೌಡರ ಮನೆಗೆ ಹೋಗಿ ಬಂದಿದ್ದೇನೆ. ಎಲ್ಲರ ಆಶೀರ್ವಾದ ನನ್ನ ಮೇಲಿದೆ. ಇಲ್ಲಿ ವಿರೋಧ ಇಲ್ಲ ಎಂದು ಹೇಳಿದರು.
ದೇವೇಗೌಡ, ಮೋದಿ ಸಾಧನೆಗಳ ಮೇಲೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಸಿಎನ್ ಮಂಜುನಾಥ್
ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದಿರುವ ಏಕೈಕ ಸಂಸದ ಡಿಕೆ ಸುರೇಶ್ (DK Suresh) ಅವರ ಗೆಲುವಿಗೆ ಬ್ರೇಕ್ ಹಾಕಲು ಬಿಜೆಪಿ ಹೈಕಮಾಂಡ್ ಬೆಂಗಳೂರು ಗ್ರಾಮಾಂತರಕ್ಕೆ ಅಳೆದು ತೂಗಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಜೆಡಿಎಸ್ ಕುಟುಂಬದ ಸದಸ್ಯರೂ ಆಗಿರುವ ಬಿಜೆಪಿ ಪಕ್ಷ ಸೇರಲಿರುವ ಡಾ.ಸಿ.ಎನ್. ಮಂಜುನಾಥ್ (Dr. C.N. Manjunath) ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಇಂದು ನಡೆದ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಹೆಚ್ಡಿ ದೇವೇಗೌಡ, ಕುಮಾರಸ್ವಾಮಿ ಹಾಗೂ ನರೇಂದ್ರ ಮೋದಿ ಸಾಧನೆಗಳ ಮೇಲೆ ಚುನಾವಣೆ ನಡೆಯಲಿ ಎಂದು ಹೇಳಿದರು
ನಾನು ಸುಧೀರ್ಘವಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದಿದ್ದೇನೆ. ನನಗೆ ಸಿಕ್ಕ ಅವಕಾಶದಲ್ಲಿ ಒಂದು ಸರ್ಕಾರಿ ವ್ಯವಸ್ಥೆಯಲ್ಲಿ ಪಂಚತಾರಾ ವ್ಯವಸ್ಥೆ ತಂದಿದ್ದೆವು. ನಾನು ಕೇವಲ ಹೃದ್ರೋಗ ತಜ್ಞನಾಗಿ ಕೆಲಸ ಮಾಡಿಲ್ಲ. ಒಬ್ಬ ವ್ಯವಸ್ಥಾಪಕನಾಗಿ, ಒಬ್ಬ ಇಂಜಿನಿಯರ್ ಆಗಿ, ಒಬ್ಬ ಆಡಳಿತಾಧಿಕಾರಿಯಾಗಿ, ಒಬ್ಬ ಸಾಂತ್ವನ ಹೇಳುವ ಕೌನ್ಸಿಲರ್ ಆಗಿ ಕೆಲಸ ಮಾಡಿದ್ದೇನೆ ಎಂದರು.
ನಾನು ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಚುನಾವಣೆಗೆ ಬರುತ್ತಿದ್ದೇನೆ. ನಿಮ್ಮ ಸಹಕಾರ ಇರಲಿ. ಯಾರನ್ನೂ ಸಹ ನಾವು ವೈಯಕ್ತಿಕವಾಗಿ ಟೀಕೆ ಮಾಡುವುದಿಲ್ಲ. ದೇವೇಗೌಡ, ಕುಮಾರಸ್ವಾಮಿ, ನರೇಂದ್ರ ಮೋದಿ ಅವರು ಮಾಡಿರುವ ಸಾಧನೆಗಳ ಮೇಲೆ ಚುನಾವಣೆ ಆಗಲಿ ಅನ್ನೋದು ನನ್ನ ಆಸೆ ಎಂದರು.
ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಅಂತರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಸಿಗುವ ಕೆಲಸ ಆಗುತ್ತಿದೆ. ಭಾರತ ವಿಶ್ವದಲ್ಲಿ ಬಲಶಾಲಿಯಾಗಬೇಕು. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು. ಈ ಚುನಾವಣೆಯನ್ನು ನಾವು ಗಂಭೀರವಾಗಿ ಪರಿಗಣಿಸಬೇಕು. ಸಾಧನೆ ಮಾತನಾಡಬೇಕು, ಮಾತು ಸಾಧನೆ ಆಗಬಾರದು ಎಂದರು.
ನರೇಂದ್ರ ಮೋದಿ ಸರ್ಕಾರ ಹೆಚ್ಚು ಸಾಧಕರಿಗೆ ಪರಿಣಿತರಿಗೆ ಪ್ರೋತ್ಸಾಹ ಕೊಡುತ್ತಿದ್ದಾರೆ. ಇವತ್ತು ನಾನು ಲೋಕಸಭಾ ಚುನಾವಣಾ ಎದುರಿಸುತ್ತಿದ್ದೇನೆ. ಅಧಿಕೃತವಾಗಿ ಇನ್ನು ಎರಡು ದಿನಗಳಲ್ಲಿ ಪಕ್ಷ ಸೇರುತ್ತೇನೆ. ಯಡಿಯೂರಪ್ಪನವರ ಜೊತೆ ಚರ್ಚೆ ಮಾಡಿದ್ದೇವೆ. ಲೋಕಸಭಾ ಚುನಾವಣೆ ಅಂದರೇನೇ ರಾಜಕೀಯ. ಆದರೆ ನಾನು ರಾಜಕೀಯ ಮಾಡಲ್ಲ ಎಂದರು
ನಾನು ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಚುನಾವಣೆಗೆ ಬರುತ್ತಿದ್ದೇನೆ. ನಿಮ್ಮ ಸಹಕಾರ ಇರಲಿ. ಯಾರನ್ನೂ ಸಹ ನಾವು ವೈಯಕ್ತಿಕವಾಗಿ ಟೀಕೆ ಮಾಡುವುದಿಲ್ಲ. ದೇವೇಗೌಡ, ಕುಮಾರಸ್ವಾಮಿ, ನರೇಂದ್ರ ಮೋದಿ ಅವರು ಮಾಡಿರುವ ಸಾಧನೆಗಳ ಮೇಲೆ ಚುನಾವಣೆ ಆಗಲಿ ಅನ್ನೋದು ನನ್ನ ಆಸೆ ಎಂದರು.