ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಥ್ರೆಡ್‌ಗೆ ಸ್ಟಾರ್‌ ಕ್ರಿಕೆಟಿಗರಿಂದ ಫುಲ್‌ ಸಪೋರ್ಟ್‌ – ಎಲೋನ್‌ ಮಸ್ಕ್‌ಗೆ ಟಾಂಗ್‌ ಕೊಟ್ಟ ಅಶ್ವಿನ್‌

Twitter
Facebook
LinkedIn
WhatsApp
allwyn 080723 ksgd 1

ಮುಂಬೈ/ವಾಷಿಂಗ್ಟನ್‌: ಟೀಂ ಇಂಡಿಯಾ ಸ್ಟಾರ್‌ ಕ್ರಿಕೆಟಿಗರು (Cricketer) ಇತ್ತೀಚೆಗಷ್ಟೇ ಅನಾವರಣಗೊಂಡ ʻಥ್ರೆಡ್ಸ್‌ʼ ಮೈಕ್ರೋಬ್ಲಾಗಿಂಗ್‌ ಅಪ್ಲಿಕೇಷನ್‌ ʻಥ್ರೆಡ್ಸ್‌ʼ (Threads App) ಬಳಕೆಗೆ ಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

 

ಫೇಸ್‌ಬುಕ್ ಮಾತೃಸಂಸ್ಥೆ ಮೆಟಾ, ಟ್ವಿಟ್ಟರ್‌ಗೆ ಪ್ರಬಲ ಪೈಪೋಟಿ ನೀಡಲು ಕಳೆದ ಎರಡು ದಿನಗಳ ಹಿಂದೆಯಷ್ಟೇ ಹೊಸ ಮೈಕ್ರೋಬ್ಲಾಗಿಂಗ್‌ ಅಪ್ಲಿಕೇಶನ್ ‘ಥ್ರೆಡ್ಸ್’ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದೀಗ ಬಳಕೆದಾರರು ಈ ಹೊಸ ಅಪ್ಲಿಕೇಶನ್ ಅನ್ನು ಪ್ಲೇಸ್ಟೋರ್ ಅಥವಾ ಆಪಲ್ ಸ್ಟೋರ್‌ನಲ್ಲಿ ಉಚಿತವಾಗಿ ಡೌನ್‌ಲೋಡ್ ಮಾಡಿಕೊಂಡು ಲಾಗಿನ್‌ ಆಗುತ್ತಿದ್ದು, ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಥ್ರೆಡ್ಸ್ಅನ್ನು ಭಾರತ ಸೇರಿದಂತೆ ಜಾಗತಿಕವಾಗಿ ಅಧಿಕೃತವಾಗಿ ಅನಾವರಣ ಮಾಡಲಾಗಿದೆ. ಇದನ್ನು ಬಿಡುಗಡೆ ಮಾಡಿದ 4 ಗಂಟೆಗಳಲ್ಲಿ 50 ಲಕ್ಷ ಬಳಕೆದಾರರು ಸೈನ್ ಅಪ್ ಮಾಡಿದ್ದರು. ಇದೀಗ ಟೀಂ ಇಂಡಿಯಾದ ಸ್ಟಾರ್‌ ಆಟಗಾರರ ಟ್ವಿಟ್ಟರ್‌ ಬದಲಿಗೆ ಥ್ರೆಡ್ಸ್‌ಗೆ ಬೆಂಬಲ ಸೂಚಿಸಿದ್ದಾರೆ. ಈ ನಡುವೆ ಟೀಂ ಇಂಡಿಯಾ ಸ್ಪಿನ್‌ ಮಾಂತ್ರಿಕ ರವಿಚಂದ್ರನ್‌ ಅಶ್ವಿನ್‌, ಟ್ವಿಟ್ಟರ್‌ ಮುಖ್ಯಸ್ಥ ಎಲೋನ್‌ ಮಸ್ಕ್‌ಗೆ (Elon Musk) ಟಾಂಗ್‌ ಕೊಟ್ಟಿದ್ದಾರೆ.

ಥ್ರೆಡ್ಸ್‌ಗೆ ಲಾಗಿನ್‌ ಆಗಿರುವ ಅಶ್ವಿನ್‌ ಎಲಾನ್‌ ಮಸ್ಕ್‌ ಸೇರಿಕೊಂಡಿದ್ದಾರಾ..? ಅವರಿನ್ನು ಸೇರಿಕೊಂಡಿಲ್ಲದಿದ್ದರೆ ಬೇಗನೆ ಸೇರುವುದು ಒಳ್ಳೆಯದು ಎಂದು ವ್ಯಂಗ್ಯ ಮಾಡಿದ್ದಾರೆ. 

allwyn 080723 ksgd 2

ಮತ್ತೊಂದೆಡೆ ಭೀಕರ ಕಾರು ಅಪಘಾತದಿಂದ ಚೇತರಿಸಿಕೊಳ್ಳುತ್ತಿರುವ ರಿಷಭ್‌ ಪಂತ್‌ ಸಹ ʻಥ್ರೆಡ್ಸ್‌ʼ ಬಳಕೆದಾರರ ಸಮೂಹಕ್ಕೆ ಸೇರಿಕೊಂಡು ಬೆಂಬಲ ಸೂಚಿಸಿದ್ದಾರೆ. ಜೊತೆಗೆ ಥ್ರೆಡ್ಸ್‌ ಸೇರಿರುವ ಎಲ್ಲರಿಗೂ ಸ್ವಾಗತ. ಪ್ರತಿಯೊಬ್ಬರು ಸಾಧ್ಯವಾದಷ್ಟು ಬೆಂಬಲಿಗರನ್ನು ಗಳಿಸಿ. ನಾವು ಇದನ್ನು ಇನ್ನಷ್ಟು ದೊಡ್ಡದಾಗಿ ಬೆಳೆಸಲು ಪ್ರಯತ್ನಿಸೋಣ ಎಂದು ಥ್ರೆಡ್ಸ್‌ ಪೋಸ್ಟ್‌ ಮೂಲಕ ಕರೆ ಕೊಟ್ಟಿದ್ದಾರೆ.

ಟ್ವಿಟ್ಟರ್‌ಗಿಂತ ಥ್ರೆಡ್ಸ್‌ ಭಿನ್ನ ಹೇಗೆ?
ಥ್ರೆಡ್ಸ್‌ ಖಾತೆ ತೆರೆಯಬೇಕಾದರೆ ಇನ್ಸ್ಟಾಗ್ರಾಮ್‌ (Instagram) ಖಾತೆ ಬೇಕಾಗುತ್ತದೆ. ಥ್ರೆಡ್ಸ್‌ ಆಪ್‌ ಡೌನ್‌ಲೋಡ್‌ ಮಾಡಿದ ಕೂಡಲೇ ಇನ್‌ಸ್ಟಾದಿಂದ ಬಯೋ ಸೇರಿದಂತೆ ಫಾಲೋವರ್ಸ್‌ಗಳನ್ನು Import ಮಾಡಬೇಕಾ ಅಂತಾ ಕೇಳುತ್ತದೆ. ಬಳಕೆದಾರರು ಅನುಮತಿ ನೀಡಿದರೆ ಇನ್‌ಸ್ಟಾ ಬಯೋ ನಿಮ್ಮ ಪ್ರೊಫೈಲಿನಲ್ಲಿ ಬಂದಿರುತ್ತದೆ. ಇನ್‌ಸ್ಟಾ ಸ್ನೇಹಿತರ ಪೈಕಿ ಯಾರು ಥ್ರೆಡ್ಸ್‌ಗೆ ಜಾಯಿನ್‌ ಆಗಿದ್ದಾರೋ ಅವರನ್ನು ಇಲ್ಲಿ ಫಾಲೋ ಮಾಡಬಹುದು.

ಥ್ರೆಡ್ಸ್‌ನಲ್ಲಿ ಎಲ್ಲಾ ಬಳಕೆದಾರರು 5 ನಿಮಿಷ ಉದ್ಧದ ವೀಡಿಯೋಗಳನ್ನು ಪೋಸ್ಟ್‌ ಮಾಡಬಹುದು. ನೀಲಿ ಬ್ಯಾಡ್ಜ್‌ ಇಲ್ಲದ ಟ್ವಿಟ್ಟರ್‌ ಬಳಕೆದಾರರು ಗರಿಷ್ಠ 2 ನಿಮಿಷ 20 ಸೆಕೆಂಡ್‌ ಉದ್ದದ ವೀಡಿಯೋ ಪೋಸ್ಟ್‌ ಮಾಡಲು ಅನುಮತಿ ನೀಡುತ್ತದೆ.

ಡ್ಸ್‌ನಲ್ಲಿ ಗರಿಷ್ಠ 500 ಪದಗಳನ್ನು ಬಳಸಿ ಪೋಸ್ಟ್‌ ಮಾಡಬಹುದು. ಟ್ವಿಟ್ಟರ್‌ನಲ್ಲಿ 280 ಪದಗಳಿಗೆ ಮಿತಿಯನ್ನು ನಿಗದಿ ಮಾಡಲಾಗಿದೆ. ಇನ್‌ಸ್ಟಾದಲ್ಲಿರುವ ಅಧಿಕೃತ ಖಾತೆಗಳಿಗೆ ನೀಲಿ ಬ್ಯಾಡ್ಜ್‌ ಇರುವಂತೆ ಇಲ್ಲೂ ಅದೇ ಖಾತೆಗಳಿಗೆ ನೀಲಿ ಬ್ಯಾಡ್ಜ್‌ ಅಟೋಮ್ಯಾಟಿಕ್‌ ಆಗಿ ಬಂದಿರುತ್ತದೆ. ಟ್ವಿಟ್ಟರ್‌ನಲ್ಲಿ ನೀಲಿ ಟಿಕ್‌ ಮಾರ್ಕ್‌ ಬೇಕಾದರೆ ದುಡ್ಡು ಪಾವತಿಸಬೇಕಾಗುತ್ತದೆ.

ಸದ್ಯಕ್ಕೆ ಥ್ರೆಡ್ಸ್‌ನಲ್ಲಿ ಯಾವುದೇ ಜಾಹೀರಾತು ಪ್ರಕಟವಾಗುವುದಿಲ್ಲ. ಇನ್‌ಸ್ಟಾದಲ್ಲಿ ಯಾವೆಲ್ಲ ವಿಷಯಗಳಿಗೆ ಸೆನ್ಸರ್‌ ಮಾಡಲಾಗುತ್ತದೋ ಆ ಎಲ್ಲಾ ವಿಷಯಗಳನ್ನು ಇಲ್ಲೂ ಸೆನ್ಸರ್‌ ಮಾಡಲಾಗುತ್ತದೆ.

ಥ್ರೆಡ್ಸ್‌ಗೆ ಒಮ್ಮೆ ಸೇರ್ಪಡೆಯಾದರೆ ಆ ಖಾತೆಯನ್ನು ಡಿಲೀಟ್‌ ಮಾಡಲು ಸಾಧ್ಯವಿಲ್ಲ. ಥ್ರೆಡ್ಸ್‌ ಖಾತೆ ಡಿಲೀಟ್‌ ಮಾಡಬೇಕಾದರೆ ಇನ್‌ಸ್ಟಾ ಖಾತೆಯನ್ನೇ ಡಿಲೀಟ್‌ ಮಾಡಬೇಕಾಗುತ್ತದೆ. ಬಳಕೆದಾರರು ಯಾವಾಗ ಬೇಕಾದರೂ ಥ್ರೆಡ್ಸ್‌ ಖಾತೆಯನ್ನು ನಿಷ್ಕ್ರಿಯ ಮಾಡಬಹುದು. ಆದರೆ ಇನ್‌ಸ್ಟಾದ ಖಾತೆ ಡಿಲೀಟ್‌ ಮಾಡಿದರೆ ಮಾತ್ರ ಥ್ರೆಡ್ಸ್‌ ಖಾತೆಯನ್ನು ಶಾಶ್ವತವಾಗಿ ಡಿಲೀಟ್‌ ಮಾಡಲು ಸಾಧ್ಯ ಎಂದು ಪ್ರೈವೆಸಿ ಪಾಲಿಸಿಯಲ್ಲಿ ತಿಳಿಸಲಾಗಿದೆ.

ಟ್ವಿಟ್ಟರ್‌ನಲ್ಲಿ ಬಳಕೆದಾರರು ಬೇರೆ ಟ್ವೀಟ್‌ ಲೈಕ್‌ ಮಾಡಿದರೆ ಅದು ಪ್ರತ್ಯೇಕ ಟ್ಯಾಬ್‌ನಲ್ಲಿ ಕಾಣುತ್ತದೆ. ಆದರೆ ಥ್ರೆಡ್ಸ್‌ನಲ್ಲಿ ಲೈಕ್‌ ಮಾಡಿದ್ದನ್ನು ನೋಡಲು ಸಾಧ್ಯವಿಲ್ಲ. ಥ್ರೆಡ್ಸ್‌ ಪ್ರೊಫೈಲ್‌ ಫೋಟೋದ ಮೇಲ್ಭಾಗದಲ್ಲಿ ಇನ್‌ಸ್ಟಾಖಾತೆ ಕಾಣುತ್ತದೆ. ಇನ್‌ಸ್ಟಾ ಪ್ರೊಫೈಲ್‌ ಫೋಟೋದ ಕೆಳಭಾಗದಲ್ಲಿ ಥ್ರೆಡ್ಸ್‌ ಲಿಂಕ್‌ ಕಾಣುತ್ತದೆ. ಜೊತೆಗೆ ಥ್ರೆಡ್ಸ್‌ನಲ್ಲಿ ಫಾಲೋವರ್ಸ್‌ಗಳೊಂದಿಗೆ ಚಾಟ್‌ ಮಾಡುವ ಆಯ್ಕೆ ಇಲ್ಲ. ಬಳಕೆದಾರರ ಪ್ರೋಫೈಲ್‌ಗೆ ಹೋದ್ರೆ ಅದರಲ್ಲಿ ಇನ್ಸ್ಟಾಗ್ರಾಮ್‌ ಖಾತೆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿದರೆ, ನೇರವಾಗಿ ಇನ್ಸ್ಟಾ ತೆರೆದುಕೊಳ್ಳುತ್ತದೆ. ಅಲ್ಲೇ ಚಾಟ್‌ ಆಯ್ಕೆಯನ್ನು ಬಳಸಬೇಕಾಗುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ