ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಸಾವು!
ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ (Electrocution) ಮೂವರು ಯುವಕರು ಮೃತಪಟ್ಟ (Death) ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತ ಯುವಕರು. ಇನ್ನು ಘಟನೆಯಲ್ಲಿ ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವರಿಗೆ ಗಂಭೀರ ಗಾಯಗಳಾಗಿವೆ.
ನೀಲಗಿರಿ ತೋಪಿಗೆ ಬ್ಯಾನರ್ ಕಟ್ಟಿ ಮೇಲೆತ್ತುವಾಗ ವಿದ್ಯುತ್ ತಗುಲಿ ಸೂರಣಗಿ ಗ್ರಾಮದ ಮೂವರು ಯುವಕರು ಧಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಹುಟ್ಟುಹಬ್ಬದ ಬ್ಯಾನರ್ ಕಟ್ಟಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ. ವಿದ್ಯುತ್ ತಗಲುತ್ತಿದ್ದಂತೆ ಕೂಗಾಟ ಚಿರಾಟ ಕೇಳಿ ಬಂದಿದ್ದು ಘಟನೆಯ ಲೈವ್ ವಿಡಿಯೋ ದೃಶ್ಯ ನೋಡಿದ್ರೆ ಎದೆಝಲ್ ಎನ್ನುವಂತಿದೆ.
ಮೈಸೂರು: ಉಪ ತಹಸೀಲ್ದಾರ್ ಕಿರುಕುಳ ಆರೋಪ, ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ
ಉಪ ತಹಸೀಲ್ದಾರ್ (Deputy Tehsildar) ಕಿರುಕುಳ ತಾಳಲಾರದೆ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಪರಮೇಶ್ ಆತ್ಮಹತ್ಯೆಗೆ ಶರಣಾದ ಕಂಪ್ಯೂಟರ್ ಆಪರೇಟರ್. ವಿಕಲಚೇತನಾಗಿದ್ದ ಪರಮೇಶ್ ನಂಜನಗೂಡು (Nanjangudu) ತಾಲೂಕಿನ ಹುಲ್ಲಹಳ್ಳಿಯ ನಾಡ ಕಚೇರಿಯಲ್ಲಿ ಪರಮೇಶ್ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಇವರಿಗೆ ಉಪ ತಹಶೀಲ್ದಾರ್ ಶಿವಕುಮಾರ್ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇವರ ಕಿರುಕುಳ ತಾಳಲಾರದೆ ಪರಮೇಶ್ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದರು.
ಕೂಡಲೇ ಪರಮೇಶ್ ಅವರನ್ನು ಮೈಸೂರಿನ ಕೆ.ರ್.ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪರಮೇಶ್ ಮೃತಪಟ್ಟಿದ್ದಾರೆ. ನನ್ನ ಸಾವಿಗೆ ಉಪ ತಹಸೀಲ್ದಾರ್ ಶಿವಕುಮಾರ್ ಕಾರಣ ಎಂದು ಪರಮೇಶ್ ಡೆತ್ ನೋಟ್ನಲ್ಲಿ ಬರೆದಿದ್ದಾರೆ. ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.