ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿ ಹಾಗೂ ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಮಳೆ ಮುನ್ಸೂಚನೆ ; ಹವಾಮಾನ ಇಲಾಖೆ!

Twitter
Facebook
LinkedIn
WhatsApp
ಕರಾವಳಿ ಹಾಗೂ ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಮಳೆ ಮುನ್ಸೂಚನೆ ; ಹವಾಮಾನ ಇಲಾಖೆ!

ರಾಜ್ಯಾದ್ಯಂತ ಇಂದು (ನ.11) ಕೂಡ ಭಾರಿ ಮಳೆಯಾಗುವ (Karnataka Rain) ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಸೇರಿದಂತೆ ಹಲವೆಡೆ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ವರುಣ ಧರೆಗೆ ಇಳಿಯಲಿದ್ದಾನೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಇನ್ನು ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಇನ್ನು ಚಿತ್ರದುರ್ಗದಲ್ಲಿ ಒಣಹವೆ ಬೀಸಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ