ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿ ಸೇರಿದಂತೆ ಹಲವೆಡೆ ಮುಂದಿನ 4 ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ!

Twitter
Facebook
LinkedIn
WhatsApp
ಕರಾವಳಿ ಸೇರಿದಂತೆ ಹಲವೆಡೆ ಮುಂದಿನ 4 ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ!

ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಪಣಂಬೂರು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 16.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ಬಾರಿ ಮುಂಗಾರಿನಲ್ಲಿ ಮಳೆ ತುಂಬಾ ಕಡಿಮೆಯಾಗಿದೆ, ಹಲವು ಜಿಲ್ಲೆಗಳು ಬರದಿಂದ ಕಂಗೆಟ್ಟಿವೆ, ಹಿಂಗಾರು ಮಳೆಯಾದರೂ ಉತ್ತಮವಾಗಿ ಬಂದಲ್ಲಿ, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕೊಂಚ ಕಡಿಮೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಪ್ರತಿಷ್ಠಿತ ಮಾಲ್​ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ, ವಿಡಿಯೋ ವೈರಲ್

ಬೆಂಗಳೂರು, (ಅಕ್ಟೋಬರ್ 30): ಬೆಂಗಳೂರಿನ ಪ್ರತಿಷ್ಠಿತ ಮಾಲ್ ನಲ್ಲಿ ವ್ಯಕ್ತಿಯೋರ್ವ ಯುವತಿಯೋರ್ವಳಗೆ ಲೈಂಗಿಕ ಕಿರುಕುಳ(Sexual harassment) ನೀಡಿರುವ ವಿಡಿಯೋ ವೈರಲ್ ಆಗಿದೆ. ನಿನ್ನೆ (ಅಕ್ಟೋಬರ್ 29) ಸಂಜೆ ಆರುವರೆ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದ್ದು, ವೈರಲ್ ಆಗಿರುವ ವಿಡಿಯೋನಲ್ಲಿ ವ್ಯಕ್ತಿಯೋರ್ವ ಬೇಕಂತಲೇ ಯುವತಿಯ ಹಿಂಭಾಗಕ್ಕೆ ಮುಟ್ಟುವ ಮೂಲಕ ಅಸಹ್ಯವಾಗಿ ನಡೆದುಕೊಂಡಿದ್ದಾನೆ. ಈ ಘಟನೆ ನಿಶ್ಚಿತವಾಗಿ ಎಲ್ಲಿ ನಡೆದಿದೆ ಎಂದು ಪತ್ತೆಯಾಗಿಲ್ಲ. ಆದ್ರೆ, ಮೇಲ್ನೋಟಕ್ಕೆ ಬೆಂಗಳೂರಿನ ಲುಲು ಮಾಲ್ ನಲ್ಲಿ ನಡೆದಿದೆ ಎನ್ನಲಾಗುತ್ತಿದೆ.

yesh_fitspiration ಎನ್ನುವ ಇನ್ಸ್ಟಾಗ್ರಾಮ್​ ಖಾತೆಯಿಂದ ಈ ವಿಡಿಯೋ ಅಪ್ಲೋಡ್ ಆಗಿದ್ದು, ಈ ಘಟನೆ ನಿನ್ನೆ (ಅಕ್ಟೋಬರ್ 29) ಸಂಜೆ 6.30ರ ಸುಮಾರಿಗೆ ಬೆಂಗಳೂರಿನ ಲುಲು ಮಾಲ್​ನಲ್ಲಿ ನಡೆದಿದೆ. ಗದ್ದಲ ಇರುವ ಕಡೆ ಈ ವ್ಯಕ್ತಿ ಮಹಿಳೆಯರು ಹಾಗೂ ಯುವತಿಯರ ಹಿಂದೆ ಓಡಾಡುತ್ತಿದ್ದ. ಇದನ್ನು ಗಮನಿಸಿ ಆತನನ್ನು ಫಾಲೋ ಮಾಡಿದೆ. ಬಳಿಕ ಈ ಘಟನೆ ಬಗ್ಗೆ ಸೆಕ್ಯೂರಿಟಿ ಗಾರ್ಡ್ ಹಾಗೂ ಮಾಲ್ ಮ್ಯಾನೇಜ್​ಮೆಂಟ್​ ಗಮನಕ್ಕೆ ತಂದಿದ್ದೇನೆ. ನಂತರ ಆತನನ್ನು ಸೆಕ್ಯೂರಿಟಿ ಗಾರ್ಡ್ ಹುಡುಕಾಡಿದ್ದಾರೆ. ಆದ್ರೆ, ಆ ವ್ಯಕ್ತಿ ಅಲ್ಲಿಂದ ನಾಪತ್ತೆಯಾಗಿದ್ದ ಎಂದು ಬರೆದುಕೊಂಡಿದ್ದಾರೆ.

ಇನ್ನು ಈ ವಿಡಿಯೋ ವೈರಲ್ ಆಗಿರುವ ಬಗ್ಗೆ ಮಾಗಡಿ ರೋಡ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೃತ್ಯದ ವಗ್ಗೆ ಇದುವರೆಗೂ ಯಾರು ಲಿಖಿತ ದೂರು ನೀಡಿಲ್ಲ. ಹೀಗಾಗಿ ಪೊಲೀಸರು ವಿಡಿಯೋ ಆಧರಿಸಿ ತನಿಖೆ ನಡೆಸಿದ್ದಾರೆ. ವಿಡಿಯೋ ಎಲ್ಲಿಯದ್ದು ಎಂಬುವುದು ಪಕ್ಕಾ ಆದ ಬಳಿಕ ಪ್ರಕರಣ ದಾಖಲು ಮಾಡಿಕೊಳ್ಳಲು ಪೊಲೀಸರು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

ವಯಸ್ಸಾದ ವ್ಯಕ್ತಿಯೋರ್ವ ಬೇಕಂತಲೇ ಯುವತಿಯ ಹಿಂಭಾಗಕ್ಕೆ ಹೋಗಿ ಡಿಕ್ಕಿ ಹೊಡೆದಿದ್ದಾನೆ. ಅಲ್ಲದೇ ಆಕೆಯ ಹಿಂಭಾಗವನ್ನು ಮುಟ್ಟಿರುವುದು ವಿಡಿಯೋನಲ್ಲಿ ಸೆರೆಯಾಗಿದ್ದು, ಇದೀಗ ವಿಡಿಯೋ ಫುಲ್ ವರೈಲ್ ಆಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ