ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ!

Twitter
Facebook
LinkedIn
WhatsApp
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ!

ಅಕ್ಟೋಬರ್ 24ರವರೆಗೆ ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು ಹಾಗೂ ಮೈಸೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ವಿರಾಜಪೇಟೆ, ಮಂಗಳೂರು ವಿಮಾನ ನಿಲ್ದಾಣ, ಜಯಪುರ, ಪಣಂಬೂರು, ಉಡುಪಿ, ಟಿ ನರಸೀಪುರ, ಹುಣಸೂರು, ಮಾಣಿ, ಮಂಗಳೂರು, ಬೆಳ್ತಂಗಡಿ, ಧರ್ಮಸ್ಥಳ, ಯಲ್ಲಾಪುರ, ಕದ್ರಾ, ಗೋಕರ್ಣ, ಸಿದ್ದಾಪುರ, ಶೃಂಗೇರಿ, ಮೈಸೂರು, ಮುಲ್ಕಿ, ಪುತ್ತೂರು, ಕಿರವತ್ತಿ, ಕೋಟ, ಕೊಲ್ಲೂರು, ಕಡೂರು, ತರೀಕೆರೆ, ಕಮ್ಮರಡಿ, ಹಾರಂಗಿ, ಅರಕಲಗೂಡು, ಹಾಸನ, ಬೆಳ್ಳೂರು, ಕುಣಿಗಲ್​ನಲ್ಲಿ ಮಳೆಯಾಗಿದೆ. ಸಾಲಿಗ್ರಾಮ, ಕೆಆರ್​ಪೇಟೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ.

ನೈಋತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು, ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕಲಬುರ್ಗಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ವಿಜಯಪುರದಲ್ಲಿ 18.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಿತ್ರದುರ್ಗ, ಹಾಸನ, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ