ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಬಿಟ್ಟು ಮತ್ತೆ ಬಿಜೆಪಿ ಸೇರಿದ್ದ ಜಗದೀಶ್ ಶೆಟ್ಟರ್ ಗೆ ಟಿಕೆಟ್ ಡೌಟ್; ಬಾಕಿ ಉಳಿದ ಕ್ಷೇತ್ರ ಎಷ್ಟು?

Twitter
Facebook
LinkedIn
WhatsApp
ಕಾಂಗ್ರೆಸ್ ಬಿಟ್ಟು ಮತ್ತೆ ಬಿಜೆಪಿ ಸೇರಿದ್ದ ಜಗದೀಶ್ ಶೆಟ್ಟರ್ ಗೆ ಟಿಕೆಟ್ ಡೌಟ್; ಬಾಕಿ ಉಳಿದ ಕ್ಷೇತ್ರ ಎಷ್ಟು?

ಲೋಕಸಭೆ ಚುನಾವಣೆಗೆ ಬಿಜೆಪಿ  ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು ಕರ್ನಾಟಕದ 20 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟಗೊಂಡಿದೆ. ಧಾರವಾಡದಲ್ಲಿ ಹಾಲಿ ಸಂಸದ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಮತ್ತೆ ಮಣೆ ಹಾಕಲಾಗಿದೆ. ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸುವುದಾಗಿ ಬಿಜೆಪಿ ಘೋಷಿಸಿದೆ. ಇದರೊಂದಿಗೆ, ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್​ಗೆ (Jagadish Shettar) ಮತ್ತೆ ಹಿನ್ನಡೆಯಾದಂತಾಗಿದೆ.

ಲೋಕಸಭಾ ಚುನಾವಣೆಗೆ ಕರ್ನಾಟಕದ 20 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಒಟ್ಟು 28 ಕ್ಷೇತ್ರಗಳಲ್ಲಿ ಮೂರು ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ 25 ಕ್ಷೇತ್ರಗಳಲ್ಲಿ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಹೀಗಾಗಿ ಇನ್ನೂ ಐದು ಕ್ಷೇತ್ರ ಟಿಕೆಟ್ ಕಾಯ್ದಿರಿಸಿದೆ.  ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ಮೇಲೆ ಶೆಟ್ಟರ್ ಕಣ್ಣಿಟ್ಟಿದ್ದರು. ಒಂದು ವೇಳೆ ಧಾರವಾಡದಿಂದ ಸಿಗದಿದ್ದರೆ ಹಾವೆರಿ ಕ್ಷೇತ್ರ ಟಿಕೆಟ್ ನೀಡುವಂತೆ ಮನವಿಯನ್ನೂ ಮಾಡಿದ್ದರು. ಈಗ ಇತ್ತ ಧಾರವಾಡವೂ ಇಲ್ಲ, ಅತ್ತ ಹಾವೇರಿಯೂ‌ ಇಲ್ಲ ಎಂಬಂತಾಗಿದೆ ಅವರ ಪರಿಸ್ಥಿತಿ. ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡುತ್ತೇವೆ ಎಂಬ ಬಿಜೆಪಿ ನಾಯಕರ ಭರವಸೆ ಮೇರೆಗೆ ಶೆಟ್ಟರ್ ಘರ್ ವಾಪ್ಸಿ ಆಗಿದ್ದರು. ಪಟ್ಟಿ ಬಿಡುಗಡೆಯಾಗುವ ಕೊನೆಯ ಕ್ಷಣದ ವರೆಗೂ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದರು.

ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದ್ದರಿಂದ ಮುನಿಸಿಕೊಂಡು ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಆದ್ರೆ, ಇತ್ತೀಚೆಗೆ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ವಾಪಸ್ ಬಿಜೆಪಿ ಸೇರ್ಪಡೆಯಾಗಿದ್ದರು. ಬಿಜೆಪಿ ಸೇರ್ಪಡೆಗೂ ಮುನ್ನವೇ ಅವರು ಬೆಳಗಾವಿ ಅಥವಾ ಹುಬ್ಬಳ್ಳಿ-ಧಾರವಾಡ, ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನಿಡಬೇಕೆಂದು ಬೇಡಿಕೆ ಇಟ್ಟಿದ್ದರು. ಇದಕ್ಕೆ ಬಿಜೆಪಿ ನಾಯಕರು ಸಹ ಯಾವುದಾದರೂ ಒಂದು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವುದಾಗಿ ಭರವಸೆ ನೀಡಿ ಪಕ್ಷಕ್ಕೆ ಬರಮಾಡಿಕೊಂಡಿದ್ದರು.

ಕಳೆದ ವರ್ಷ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ದೊರೆಯದ ಕಾರಣ ಅಸಮಾಧಾನಗೊಂಡಿದ್ದ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ನಂತರ ಕಾಂಗ್ರೆಸ್ ಟಿಕೆಟ್​ನಿಂದ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಮಹೇಶ್ ಟೆಂಗಿನಾಯಿ ವಿರುದ್ಧ ಸೋಲನುಭವಿಸಿದ್ದರು. ನಂತರ ಅವರನ್ನು ಕಾಂಗ್ರೆಸ್ ಪಕ್ಷವು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿತ್ತು. ಈ ಎಲ್ಲ ಬೆಳವಣಿಗೆಗಳ ನಂತರ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಶೆಟ್ಟರ್ ಮತ್ತೆ ಬಿಜೆಪಿಯತ್ತ ವಾಲಿದ್ದರು. ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡೇ ಅವರು ಈ ನಿರ್ಧಾರಕ್ಕೆ ಬಂದಿದ್ದರು. ಆದರೆ, ಶೆಟ್ಟರ್ ಘರ್ ವಾಪ್ಸಿಗೆ ಮಹೇಶ್​ ಟೆಂಗಿನಕಾಯಿ, ಪ್ರಲ್ಹಾದ್ ಜೋಶಿ ವಿರೋಧವಿದೆ ಎನ್ನಲಾಗಿತ್ತು.

ಆದ್ರೆ, ಇದೀಗ ಧಾರವಾಡ ಟಿಕೆಟ್ ಪ್ರಹ್ಲಾದ್ ಜೋಶಿಗೆ ಅವರಿಗೆ ನೀಡಿದ್ದರೆ, ಹಾವೇರಿ ಟಿಕೆಟ್ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನೀಡಲಾಗಿದೆ. ಇದೀಗ ಉಳಿದಿರುವುದು ಬೆಳಗಾವಿ ಮಾತ್ರ. ಆದರೆ, ಬಿಜೆಪಿ ಹೈಕಮಾಂಡ್ ಬೆಳಗಾವಿ ಟಿಕೆಟ್ ಘೋಷಣೆ ಮಾಡದೇ ಕಾದುನೋಡುವ ತಂತ್ರಕ್ಕೆ ಮೊರೆ ಹೋಗಿದೆ. ಈ ಹಿನ್ನೆಲೆಯಲ್ಲಿ 2ನೇ ಪಟ್ಟಿಯಲ್ಲಿ ಬೆಳಗಾವಿ ಇಲ್ಲದಿರುವುದರಿಂದ ಜಗದೀಶ್ ಶೆಟ್ಟರ್​ಗೆ ಆತಂಕಗೊಂಡು ಪೂರ್ವ ನಿಗದಿತ ರಾಯಚೂರು ಪ್ರವಾಸವನ್ನು ಮೊಟುಕುಗೊಳಿಸಿ ವಾಪಸ್ ಹುಬ್ಬಳ್ಳಿಗೆ ದೌಡಾಯಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ