ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉದ್ಯಮಿಗೆ ಟಿಕೆಟ್ ವಂಚನೆ ; ಚೈತ್ರಾ ಕುಂದಾಪುರಗೆ ಸೆ. 23 ರವರೆಗೆ ಸಿಸಿಬಿ ಕಸ್ಟಡಿಗೆ..!

Twitter
Facebook
LinkedIn
WhatsApp
ಉದ್ಯಮಿಗೆ ಟಿಕೆಟ್ ವಂಚನೆ ; ಚೈತ್ರಾ ಕುಂದಾಪುರಗೆ ಸೆ. 23 ರವರೆಗೆ ಸಿಸಿಬಿ ಕಸ್ಟಡಿಗೆ..!

ಬೆಂಗಳೂರು: ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಕೇಸ್​ಗೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರ ಕುಂದಾಪುರ  ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್‌ನನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ ಆದೇಶ ಹೊರಡಿಸಿದೆ. 14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ ನ್ಯಾಯಾಧೀಶರಿಗೆ ಸಿಸಿಬಿ ಮನವಿ ಮಾಡಿದ್ದರು.

ಜಡ್ಜ್ ಎದುರು ಚೈತ್ರಾ ಕುಂದಾಪುರ ಕಣ್ಣೀರು

ಕೋರ್ಟ್​ನಲ್ಲಿ ಜಡ್ಜ್ ಎದುರು ಚೈತ್ರಾ ಕುಂದಾಪುರ ಕಣ್ಣೀರು ಹಾಕಿದ್ದು, ಬಂಧನ ಪ್ರಕ್ರಿಯೆ ಬಗ್ಗೆ ನ್ಯಾಯಾಧೀಶರು ಪ್ರಶ್ನಿಸಿದ್ದಾರೆ. ಮೊದಲು ಉಡುಪಿ ಪೊಲೀಸರು ಬಂಧಿಸಿದರು. ಉಡುಪಿ ಪೊಲೀಸರು ಸ್ವಲ್ಪ ಕಿರಿಕಿರಿ ಮಾಡಿದರೆಂದು. ಸಿಸಿಬಿ ಪೊಲೀಸರು ಕೈ ಎಲೆದಾಡಿ ನೋವು ಮಾಡಿದ್ದಾರೆ. ನನ್ನ ತಾಯಿ ಜತೆ ಮಾತನಾಡಲು ಅವಕಾಶ ಮಾಡಿಕೊಟ್ಟಿಲ್ಲ. ನನ್ನ ಮೇಲೆ ಯಾವ ಕೇಸ್ ಇದೆ ಎಂದು ನನಗೆ ಗೊತ್ತಿಲ್ಲ ಎಂದು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ನಲ್ಲಿ ಚೈತ್ರಾ ಹೇಳಿದ್ದಾರೆ.

ಬಂಧನ ಕುರಿತು ಕುಟುಂಬದವರಿಗೆ ಮಾಹಿತಿ ನೀಡಲಾಗಿದೆಯೇ ಎಂದು ತನಿಖಾಧಿಕಾರಿ ರೀನಾ ಸುವರ್ಣಾಗೆ ನ್ಯಾಯಾಧೀಶರು ಪ್ರಶ್ನೆ ಮಾಡಿದ್ದು, ಈ ವೇಳೆ ಕುಟುಂಬದವರಿಗೆ ಮಾಹಿತಿ ಇಲ್ಲವೆಂದು ಚೈತ್ರಾ ಹೇಳಿದ್ದಾರೆ. ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ನನ್ನ ವಿರುದ್ಧದ ದಾಖಲಿಸಿರುವ ದೂರಿನ ಸೆಕ್ಷನ್ ಮಾತ್ರ ಹೇಳಿದ್ದಾರೆ. ಯಾವ ದೂರು, ಯಾರು ದೂರು ನೀಡಿದರು ಎಂದು ಮಾಹಿತಿ ನೀಡಿಲ್ಲ ಎಂದಿದ್ದಾರೆ.ಆರೋಪಿಗಳ ಜತೆ ವಕೀಲರು ಅರ್ಧ ಗಂಟೆ ಮಾತನಾಡಲು ಅವಕಾಶ ನೀಡುವಂತೆ ಮನವಿ ಮಾಡಿದ್ದು, ಕೋರ್ಟ್ ಆವರಣದಲ್ಲೇ ಆರೋಪಿಗಳಿಗೆ ವಕೀಲರೊಂದಿಗೆ ಮಾತನಾಡಲು ನ್ಯಾಯಾಲಯ ಅವಕಾಶ ನೀಡಿದೆ.

ಆರೋಪಿಗಳಿಗೆ ಯಾವುದೇ ನೋಟಿಸ್ ನೀಡದೆ ಬಂಧಿಸಿದ್ದಾರೆ ಎಂದು ವಿಚಾರಣೆ ವೇಳೆ ಕೋರ್ಟ್‌ಗೆ ಆರೋಪಿಗಳ ಪರ ವಕೀಲರು ಹೇಳಿದ್ದಾರೆ. ಸಿಆರ್‌ಪಿಸಿ 41ರಡಿ ನೋಟಿಸ್ ನೀಡಬೇಕಿತ್ತು. ಸಿಸಿಬಿ ಪೊಲೀಸರು ನಿಯಮ ಉಲ್ಲಂಘಿಸಿದ್ದಾರೆ ಎಂದಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದರೆ ಎಂದು ಪ್ರಾಸಿಕ್ಯೂಷನ್ ಪರ ವಕೀಲರು ಹೇಳಿದ್ದಾರೆ.

ಮೂರನೇ ಆರೋಪಿ ನಾಪತ್ತೆ

ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಸ್ವಾಮಿ ಮಠದ ಶ್ರೀ, ಎಫ್​​ಐಆರ್​ ದಾಖಲಾಗುತ್ತಿದ್ದಂತೆ ನಾಪತ್ತೆ ಆಗಿದ್ದಾರೆ. ನಿನ್ನೆ ಸಂಜೆವರೆಗೂ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಪ್ರಕರಣ ಬಳಿಕ ಮೈಸೂರಿನತ್ತ ಹೊರಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಹಿರೇಹಡಗಲಿಯಲ್ಲಿರುವ ಹಾಲಸ್ವಾಮಿ ಮಠ ಖಾಲಿ ಖಾಲಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist