ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Tilak Varma: ಭಾರತ ಏಕದಿನ ತಂಡಕ್ಕೆ ಆಯ್ಕೆ; ಇದು ನನ್ನ ಪಾಲಿಗೆ ದೊಡ್ಡ ಸಂಗತಿ...!

Twitter
Facebook
LinkedIn
WhatsApp
Tilak Varma India

Tilak Varma: ವೆಸ್ಟ್ ಇಂಡೀಸ್ ವಿರುದ್ಧದ ಚೊಚ್ಚಲ ಸರಣಿಯಲ್ಲಿ ತಿಲಕ್ ವರ್ಮಾ (Tilak Varma) ಎಲ್ಲರನ್ನೂ ಮೆಚ್ಚಿಸಿದ್ದಾರೆ.

ವೆಸ್ಟ್ ಇಂಡೀಸ್‌ ಟಿ20 ಸರಣಿಯಲ್ಲಿ ಭಾರತ ತಂಡ ಸೋಲು ಅನುಭವಿಸಿದರೂ ತಿಲಕ್‌ ವರ್ಮಾ ಅವರು ತಮ್ಮ ಬ್ಯಾಟಿಂಗ್‌ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಆಡಿದ್ದ ನಾಲ್ಕು ಇನಿಂಗ್ಸ್‌ಗಳಲ್ಲಿ ತಿಲಕ್‌ ವರ್ಮಾ ಅವರು ಒಂದು ಅರ್ಧಶತಕ ಸೇರಿದಂತೆ 173 ರನ್‌ಗಳನ್ನು ಗಳಿಸಿದ್ದರು. 

ಮುಂಬರುವ ಏಷ್ಯಾ ಕಪ್‌ ಟೂರ್ನಿಯ ಭಾರತ ಏಕದಿನ ತಂಡದಲ್ಲಿ ಚೊಚ್ಚಲ ಅವಕಾಶ ಸಿಕ್ಕಿರುವ ಬಗ್ಗೆ ಐಪಿಎಲ್‌ ಸ್ಟಾರ್ ಹಾಗೂ ಯಂಗ್‌ ಬ್ಯಾಟರ್‌ ತಿಲಕ್‌ ವರ್ಮಾ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಭಾರತ 50 ಓವರ್‌ಗಳ ತಂಡದಲ್ಲಿ ಆಡುವುದು ನನ್ನ ಕನಸು. ಆದರೆ, ಇಷ್ಟು ಬೇಗ ಏಷ್ಯಾ ಕಪ್‌ ಟೂರ್ನಯಲ್ಲಿ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಅವಕಾಶ ಸಿಗಬಹುದೆಂದು ಕನಸಿನಲ್ಲಿಯೂ ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ.

ಸೋಮವಾರ ಏಷ್ಯಾ ಕಪ್‌ ಭಾರತ ತಂಡದಲ್ಲಿ ಅವಕಾಶ ಪಡೆದ ಬಳಿಕ ಮಾತನಾಡಿದ ತಿಲಕ್‌ ವರ್ಮಾ, ” ಏಷ್ಯಾ ಕಪ್‌ ಟೂರ್ನಿಯ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡುತ್ತೇನೆಂದು ನಾನು ಕನಸಿನಲ್ಲಿಯೂ ಊಹಿಸಿಕೊಂಡಿರಲಿಲ್ಲ. ಭಾರತದ ಪರ ಏಕದಿನ ಕ್ರಿಕೆಡ್‌ ಆಡಬೇಕೆಂಬುದು ನನ್ನ ಕನಸಾಗಿತ್ತು. ಹಾಗಾಗಿ ಇದು ನನ್ನ ಪಾಲಿಗೆ ದೊಡ್ಡ ಸಂಗತಿ,” ಎಂದು ಸಂತೋಷ ವ್ಯಕ್ತಪಡಿಸಿದರು.

“ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಬಳಿಕ ಮುಂದಿನ ತಿಂಗಳೇ ಏಕದಿನ ಕ್ರಿಕೆಟ್‌ಗೂ ಪದಾರ್ಪಣೆ ಮಾಡಲು ಕೂಡ ತ್ವರಿತವಾಗಿ ಅವಕಾಶ ಸಿಕ್ಕಿದೆ. ಇದೀಗ ಏಷ್ಯಾ ಕಪ್‌ಗೆ ನನಗೆ ಕರೆ ಬಂದಿದ್ದು, ಈ ಟೂರ್ನಿಗೆ ತಯಾರಿ ನಡೆಸುತ್ತೇನೆ. ಹೌದು ಇದು ನನ್ನ ಕನಸು,” ಎಂದು ಬಿಸಿಸಿಐ ಸೋಶಿಯಲ್‌ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ತಿಲಕ್‌ ತಿಳಿಸಿದ್ದಾರೆ.

“ಒಡಿಐ ಕ್ರಿಕೆಟ್ ಹಾಗೂ ಲಿಸ್ಟ್‌ ‘ಎ’ ಕ್ರಿಕೆಟ್‌ ದೀರ್ಘಾವಧಿ ಆಡಿದ್ದೇನೆ. ಹಾಗಾಗಿ ಭಾರತ ತಂಡದ ಪರ ಒಡಿಐನಲ್ಲಿ ಉತ್ತಮ ಪ್ರದರ್ಶನ ತೋರುತ್ತೇನೆಂಬ ವಿಶ್ವಾಸವಿದೆ. ನನ್ನ ರಾಜ್ಯದ ಪರ ಹಾಗೂ ಹಲವು ತಂಡಗಳ ಪರ ನಾನು ಲಿಸ್ಟ್‌ ‘ಎ’ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ್ದೇನೆ. ಹಾಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಏಕದಿನ ಸ್ವರೂಪದಲ್ಲಿ ಉತ್ತಮ ಪ್ರದರ್ಶನ ತೋರುತ್ತೇನೆಂಬ ಬಗ್ಗೆ ವಿಶ್ವಾಸವಿದೆ,” ಎಂದು ತಿಲಕ್‌ ವರ್ಮಾ ಹೇಳಿದ್ದಾರೆ.

ಕಳೆದ 2022ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಮೊಟ್ಟ ಮೊದಲ ಬಾರಿ ಕಾಣಿಸಿಕೊಂಡಿದ್ದ ತಿಲಕ್‌ ವರ್ಮಾ ತಮ್ಮ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದರು. 2023ರ ಐಪಿಎಲ್‌ ಟೂರ್ನಿಯಲ್ಲಿ ಆಡಿದ್ದ 11 ಪಂದ್ಯಗಳಿಂದ 343 ರನ್‌ಗಳನ್ನು ಸಿಡಿಸಿದ್ದರು. ಇದಕ್ಕೂ ಹಿಂದಿನ ಆವೃತ್ತಿಯಲ್ಲಿ ಅವರು 397 ರನ್‌ಗಳನ್ನು ಗಳಿಸಿದ್ದರು. ಇದರ ಫಲವಾಗಿ ಅವರನ್ನು ವೆಸ್ಟ್ ಇಂಡೀಸ್‌ ವಿರುದ್ದ ಟಿ20 ಸರಣಿಯ ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist