ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಮೈತ್ರಿ ಮತ್ತು ಕಾಂಗ್ರೆಸ್ ಚುನಾವಣೆ ಪೈಪೋಟಿ ನಡುವೆ ಟೈಮ್ಸ್ ನೌ-ಇಟಿಜಿ ಸಮೀಕ್ಷೆ ರಿಲೀಸ್ ; ಕರ್ನಾಟಕದಲ್ಲಿ ಯಾವ ಪಕ್ಷ ಗೆಲುವು?

Twitter
Facebook
LinkedIn
WhatsApp
ಬಿಜೆಪಿ ಮೈತ್ರಿ ಮತ್ತು ಕಾಂಗ್ರೆಸ್ ಚುನಾವಣೆ ಪೈಪೋಟಿ ನಡುವೆ ಟೈಮ್ಸ್ ನೌ-ಇಟಿಜಿ ಸಮೀಕ್ಷೆ ರಿಲೀಸ್ ; ಕರ್ನಾಟಕದಲ್ಲಿ ಯಾವ ಪಕ್ಷ ಗೆಲುವು?

ಮುಂಬರುವ ಲೋಕಸಭೆ ಚುನಾವಣೆಯ ಕುರಿತು ಟೈಮ್ಸ್ ನೌ-ಇಟಿಜಿ ಸಮೀಕ್ಷೆಯ ನಡೆಸಿದ್ದು, ಕರ್ನಾಟಕದಲ್ಲಿ 2019ಕ್ಕೆ ಹೋಲಿಸಿದರೆ ಕಾಂಗ್ರೆಸ್‌ ಪಕ್ಷಕ್ಕೆ 2024ರಲ್ಲಿ ಮತ ಹಾಗೂ ಗೆಲ್ಲುವು ಸ್ಥಾನಗಳು ಹೆಚ್ಚಾದರೂ ಕೂಡ ಬಿಜೆಪಿ ಭರ್ಜರಿ ಮೇಲುಗೈ ಸಾಧಿಸಲಿದೆ ಎಂದು ಅಂದಾಜಿಸಲಾಗಿದೆ.

ಶುಕ್ರವಾರ ಸಂಜೆ ಟೈಮ್ಸ್‌ ನೌ ಇಟಿಜಿ ಸಮೀಕ್ಷೆ ಹೊರಬಿದ್ದಿದೆ. ಕರ್ನಾಟಕದ 28 ಸ್ಥಾನಗಳ ಪೈಕಿ ಎನ್‌ಡಿಎ ಮೈತ್ರಿಕೂಟ (ಬಿಜೆಪಿ ಹಾಗೂ ಜೆಡಿಎಸ್‌) 22-24 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ. ಇನ್ನು ಐಎನ್‌ಡಿಐಎ (ಕಾಂಗ್ರೆಸ್‌) 4-6 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಎಂದು ಸಮೀಕ್ಷೆ ಹೇಳಿದೆ.

ಕಾಂಗ್ರೆಸ್‌ ಮತ ಶೇ. 10 ರಷ್ಟು ಹೆಚ್ಚಳ

ಇನ್ನು ಕಳೆದ ಬಾರಿಯ ಲೋಕಸಭೆ ಚುನಾವಣೆಗೆ ಹೋಲಿಸಿದರೆ (2019ಕ್ಕೆ) ಈ ಬಾರಿ ಕಾಂಗ್ರೆಸ್‌ ವೋಟಿನ ಪ್ರಮಾಣ ಶೇ. 10 ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಸಮೀಕ್ಷೆ ತಿಳಿಸಿದೆ.

ಬಿಜೆಪಿ ಸ್ಥಾನ ಇಳಿಕೆ!

ಇನ್ನು 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ 25 ಸ್ಥಾನವನ್ನು ಸ್ವತಂತ್ರವಾಗಿ ಯಾವುದೇ ಮೈತ್ರಿ ಇಲ್ಲದೆ ಗೆದ್ದುಕೊಂಡಿತ್ತು. ಆದರೆ, ಈ ಬಾರಿ ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಂಡರು ಕೂಡ 22 ರಿಂದ 24 ಸ್ಥಾನ ಗೆಲ್ಲಲಿದೆ ಎಂದು ಸಮೀಕ್ಷೆ ತಿಳಿಸಿದೆ. ಈ ಮೂಲಕ ಕಳೆದ ಬಾರಿ ಚುನಾವಣೆಗಿಂತ ಈ ಬಾರಿ ಬಿಜೆಪಿ ಸ್ಥಾನ ತಗ್ಗುಬಹುದು ಎಂದು ಹೇಳಲಾಗುತ್ತಿದೆ.

ಕಳೆದ ಚುನಾವಣೆಯಲ್ಲಿ (2019) ಯಾರಿಗೆ ಎಷ್ಟು ಸ್ಥಾನ?

  • ಬಿಜೆಪಿ – 25
  • ಕಾಂಗ್ರೆಸ್‌ – 1
  • ಜೆಡಿಎಸ್‌ – 1
  • ಸ್ವತಂತ್ರ ಅಭ್ಯರ್ಥಿ – 1 (ಮಂಡ್ಯ)

ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಎಷ್ಟು ಸ್ಥಾನ?

  • ಎನ್‌ಡಿಎ – 20-24 ಸ್ಥಾನಗಳು
  • ಟಿಎಂಸಿ 17-21 ಸ್ಥಾನಗಳು
  • ಇಂಡಿಯಾ ಮೈತ್ರಿಕೂಟ 0-2 ಸ್ಥಾನಗಳು

ದೇಶದಲ್ಲಿ ಲೋಕಸಭಾ ಚುನಾವಣೆ (Lok Sabha Election) ನಡೆದರೆ ಬಿಜೆಪಿ (BJP) ನೇತೃತ್ವದ ಎನ್‌ಡಿಎಗೆ (NDA) 358-398 ಸ್ಥಾನ ಸಿಗಲಿದೆ ಟೈಮ್ಸ್‌ನೌ ವಾಹಿನಿ ನಡೆಸಿದ ಸಮೀಕ್ಷೆ ತಿಳಿಸಿದೆ.

INDIA ಒಕ್ಕೂಟಕ್ಕೆ 110-130, ವೈಎಸ್‌ಆರ್‌ಸಿಪಿ 21-22, ಬಿಜೆಡಿ 10-11, ಇತರರು 11-15 ಸ್ಥಾನ ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ