ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ (Anti Conversion Bill) ರದ್ದು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಸ್ವಾಮೀಜಿಯೊಬ್ಬರ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಪ್ರತಿಭಟನೆಗೆ ತೆರಳುತ್ತಿದ್ದ ಸ್ವಾಮೀಜಿ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
Twitter
Facebook
LinkedIn
WhatsApp
ಮೃತರನ್ನು ಸ್ವಾಮೀಜಿಯ ಸೇವಕರು ಎನ್ನಲಾಗಿದ್ದು ಅವರ ಗುರುತು ಪತ್ತೆಯಾಗಿಲ್ಲ. ಘಟನೆಯಲ್ಲಿ ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿಯಲ್ಲಿ (Belagavi) ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ (Bajrang Dal) ನಡೆಸುತ್ತಿದ್ದ ಮತಾಂತರ ನಿಷೇಧ ಕಾಯ್ದೆ ರದ್ದು ವಿರೋಧಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರ ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ.