ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದು ಬದ್ಧವೈರಿಗಳ ನಡುವೆ ಫೈನಲ್ ಕಾಳಗ; ಪಾಕ್ ಮುಂದೆ ಭಾರತವೇ ಬಲಿಷ್ಠ!

Twitter
Facebook
LinkedIn
WhatsApp
158642717 282386716575919 3422313097990495813 n 5

ಒಮಾನ್‌ನ ಸಲಾಲಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಗುರುವಾರ ನಡೆಯಲಿರುವ ಪುರುಷರ ಜೂನಿಯರ್ ಏಷ್ಯಾಕಪ್ 2023 ಹಾಕಿ ಫೈನಲ್‌ನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ. ಈ ಬದ್ಧ ವೈರಿಗಳ ಕಾಳಗ ರಾತ್ರಿ 9:30ಕ್ಕೆ ಪ್ರಾರಂಭವಾಗಲಿದೆ ಮತ್ತು ಭಾರತದಲ್ಲಿ ನೇರ ಪ್ರಸಾರವಾಗಲಿದೆ.

ಪುರುಷರ ಜೂನಿಯರ್ ಏಷ್ಯಾಕಪ್ 2023 ಹಾಕಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳು ಅಜೇಯರಾಗಿ ಫೈನಲ್​ಗೆ ಎಂಟ್ರಿಕೊಟ್ಟಿವೆ. ಈ ಮೊದಲು ಲೀಗ್ ಹಂತಗಳಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯ 1-1 ರಲ್ಲಿ ಡ್ರಾಗೊಂಡಿತ್ತು. ಆದಾಗ್ಯೂ, ಭಾರತ ತಂಡ, ಪಾಕ್ ತಂಡಕ್ಕಿಂತ ಹೆಚ್ಚಿನ ಗೋಲು ಬಾರಿಸಿರುವುದರಿಂದಾಗಿ ಗುಂಪಿನಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ.

ಹಾಲಿ ಚಾಂಪಿಯನ್ ಭಾರತ ಹಾಕಿ ತಂಡ ಚೈನೀಸ್ ತೈಪೆ ವಿರುದ್ಧ 18-0 ಮತ್ತು ಜಪಾನ್ ವಿರುದ್ಧ 3-1 ಅಂತರದ ಜಯದೊಂದಿಗೆ ತನ್ನ ಅಭಿಯಾನ ಆರಂಭಿಸಿತ್ತು. ಆ ಬಳಿಕ ಭಾರತ ತನ್ನ ಅಂತಿಮ ಗುಂಪಿನ ಪಂದ್ಯದಲ್ಲಿ ಥಾಯ್ಲೆಂಡ್‌ ಅನ್ನು 17-0 ಅಂತರದಿಂದ ಸೋಲಿಸಿತು. ನಂತರ ಸೆಮಿಫೈನಲ್‌ನಲ್ಲಿ ಕೊರಿಯಾ ತಂಡವನ್ನು 9-1 ಗೋಲುಗಳಿಂದ ಮಣಿಸಿದ ಭಾರತ ಇದೀಗ ಫೈನಲ್​ಗೆ ಎಂಟ್ರಿಕೊಟ್ಟಿದೆ.

ಏತನ್ಮಧ್ಯೆ, ಪಾಕಿಸ್ತಾನ ಹಾಕಿ ತಂಡವು ತನ್ನ ಆರಂಭಿಕ ಪಂದ್ಯದಲ್ಲಿ 15-1 ರಿಂದ ಚೈನೀಸ್ ತೈಪೆಯನ್ನು ಸೋಲಿಸಿತ್ತು. ನಂತರದ ಪಂದ್ಯದಲ್ಲಿ ಥಾಯ್ಲೆಂಡ್ ತಂಡವನ್ನು 9-0 ಅಂತರದಿಂದ ಸೋಲಿಸಿದರೆ, ಅಂತಿಮ ಲೀಗ್ ಪಂದ್ಯದಲ್ಲಿ ಜಪಾನ್ ತಂಡವನ್ನು 3-2 ಗೋಲುಗಳಿಂದ ಸೋಲಿಸಿತ್ತು. ಬಳಿಕ ಸೆಮಿಸ್‌ನಲ್ಲಿ ಮಲೇಷ್ಯಾವನ್ನು 6-2 ಗೋಲುಗಳಿಂದ ಸೋಲಿಸಿದ ಪಾಕ್, ಇದೀಗ ಭಾರತದ ವಿರುದ್ಧ ಫೈನಲ್​ನಲ್ಲಿ ಕಾದಾಡಲಿದೆ.

ಪ್ರಸ್ತುತ ಒಂಬತ್ತು ಗೋಲುಗಳೊಂದಿಗೆ ಟೂರ್ನಮೆಂಟ್‌ನ ಜಂಟಿ ಅಗ್ರ ಸ್ಕೋರರ್ ಆಗಿರುವ ಪಾಕಿಸ್ತಾನದ ಅಬ್ದುಲ್ ರೆಹಮಾನ್ ಮತ್ತು ಏಳು ಸ್ಟ್ರೈಕ್‌ಗಳನ್ನು ಹೊಂದಿರುವ ಭಾರತದ ಆಕ್ರಮಣಕಾರಿ ಆಟಗಾರ ಅರಿಜೀತ್ ಸಿಂಗ್ ಹುಂಡಾಲ್ ನಡುವಿನ ಯುದ್ಧಕ್ಕೆ ಫೈನಲ್ ವೇದಿಕೆ ಸಜ್ಜಾಗಿದೆ.

ಭಾರತ ಮತ್ತು ಪಾಕಿಸ್ತಾನ ಈ ಹಿಂದೆ ಮೂರು ಬಾರಿ ಜೂನಿಯರ್ ಏಷ್ಯಾಕಪ್ ಹಾಕಿಯ ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದವು. 1996ರ ಫೈನಲ್‌ನಲ್ಲಿ ಪಾಕಿಸ್ತಾನ ಗೆದ್ದರೆ, 2004ರಲ್ಲಿ ಭಾರತ ಜಯಭೇರಿ ಬಾರಿಸಿತ್ತು.

2015 ರಲ್ಲಿ ಮಲೇಷ್ಯಾದಲ್ಲಿ ನಡೆದ ಕೊನೆಯ ಆವೃತ್ತಿಯಲ್ಲಿ ಭಾರತವು ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ