ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇಂದು 2024 ರ ಐಪಿಎಲ್ ಉದ್ಘಾಟನೆ ; RCB ಮತ್ತು CSK ಮುಖಾಮುಖಿ..!

Twitter
Facebook
LinkedIn
WhatsApp
ಇಂದು 2024 ರ ಐಪಿಎಲ್ ಉದ್ಘಾಟನೆ ; RCB ಮತ್ತು CSK ಮುಖಾಮುಖಿ..!

ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ ಟೂರ್ನಿಗೆ ಇಂದು ಚಾಲನೆ ಸಿಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು  (CSK vs RCB) ತಂಡ ಮುಖಾಮುಖಿ ಆಗಲಿದೆ. ಇದರ ಜೊತೆಗೆ ಇಂದು ಸಂಜೆ 6.30ಕ್ಕೆ ಉದ್ಘಾಟನಾ ಸಮಾರಂಭ ಕೂಡ ಆಯೋಜಿಸಲಾಗಿದೆ. ಪಂದ್ಯದ ಟಿಕೆಟ್ ಸಂಪೂರ್ಣ ಸೋಲ್ಡ್​ ಔಟ್ ಆಗಿದ್ದು, ರಣರೋಚಕ ಕದನ ನಿರೀಕ್ಷಿಸಲಾಗಿದೆ.

ರುತುರಾಜ್ ಗಾಯಕ್ವಾಡ್ ಅವರ ತಂಡವು ಡೆವೊನ್ ಕಾನ್ವೇ ಅವರ ಅನುಪಸ್ಥಿತಿಯಲ್ಲಿದ್ದು, ಆರಂಭಿಕ ಸ್ಲಾಟ್​ಗೆ ಯಾರು ಆಯ್ಕೆ ಆಗುತ್ತಾರೆ ನೋಡಬೇಕು. ಇದರ ಹೊರತಾಗಿ ಎರಡೂ ತಂಡಗಳು ಶಕ್ತಿಯುತ ಬ್ಯಾಟಿಂಗ್ ಲೈನ್-ಅಪ್​ಗಳನ್ನು ಹೊಂದಿವೆ. ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ , ಶಿವಂ ದುಬೆ, ಎಂಎಸ್ ಧೋನಿ, ರವೀಂದ್ರ ಜಡೇಜಾ ಮತ್ತು ಅಜಿಂಕ್ಯ ರಹಾನೆ ಅವರಂತಹವರು ಸಿಎಸ್​ಕೆಯ ಬ್ಯಾಟಿಂಗ್ ಬಲವಾಗಿದ್ದಾರೆ. ಆರ್‌ಸಿಬಿ ವಿರಾಟ್ ಕೊಹ್ಲಿ, ನಾಯಕ ಫಾಫ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಕಳೆದ ಋತುವಿನಲ್ಲಿ ನೆಚ್ಚಿಕೊಂಡಿತ್ತು. ಆದರೆ, ಈ ಬಾರಿ ರಜತ್ ಪಾಟಿದಾರ್ ಮತ್ತು ಕ್ಯಾಮರೂನ್ ಗ್ರೀನ್ ಸೇರ್ಪಡೆಗೊಂಡ ಕಾರಣ ಆರಂಭಿಕರ ಒತ್ತಡ ಕೊಂಚ ಕಡಿಮೆ ಆಗಲಿದೆ.

ಕಳೆದ ಋತುವಿನಲ್ಲಿ ಪತಿರಾನ ಡೆತ್ ಬೌಲಿಂಗ್ ಸಿಎಸ್​ಕೆಯ ಯಶಸ್ಸಿನ ಹಿಂದಿನ ಪ್ರಮುಖ ಕಾರಣಗಳಲ್ಲಿ ಒಂದಾಗಿತ್ತು. ಆದರೆ, ಈ ಬಾರಿ ಅವರು ಮಂಡಿರಜ್ಜು ಗಾಯದಿಂದಾಗಿ ಆರಂಭಿಕ ಕೆಲವು ಪಂದ್ಯಗಳನ್ನು ಕಳೆದುಕೊಂಡಿದ್ದಾರೆ. ಇನ್ನು ಎಲ್ಲರ ಕಣ್ಣು ಚೊಚ್ಚಲ ಐಪಿಎಲ್ ಆಡಲು ಸಿದ್ದರಾಗಿರುವ ರಚಿನ್ ರವೀಂದ್ರ ಮೇಲಿದೆ. ಕಿವೀ ಅಗ್ರ ಕ್ರಮಾಂಕದ ಬ್ಯಾಟರ್ ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ 64.22 ರ ಸರಾಸರಿಯಲ್ಲಿ 578 ರನ್ ಗಳಿಸಿದ ಸಾಧನೆ ಮಾಡಿದ್ದರು.

ಮೇಲ್ನೋಟಕ್ಕೆ ಎರಡೂ ತಂಡದ ಬ್ಯಾಟಿಂಗ್ ಬಲಿಷ್ಠವಾಗಿದೆ. ಆದರೆ, ಬೌಲಿಂಗ್​ನಲ್ಲಿ ಕೊಂಚ ದುರ್ಬಲವಾದಂತೆ ಕಾಣುತ್ತಿದೆ. ಚೆಪಾಕ್ ಪಿಚ್ ಸ್ಪಿನ್ನರ್‌ಗಳಿಗೆ ಸ್ವರ್ಗ ಎಂದು ಪರಿಗಣಿಸಲಾಗಿದೆ. ಈ ಮೈದಾನದಲ್ಲಿ ಸ್ಪಿನ್ನರ್‌ಗಳಿಗೆ ಸಾಕಷ್ಟು ನೆರವು ಸಿಗುತ್ತದೆ. ಹೀಗಾಗಿ ಈ ಪಿಚ್​ನಲ್ಲಿ ಬ್ಯಾಟ್ಸ್‌ಮನ್‌ಗಳು ಬಹಳ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡಬೇಕು. ಒಮ್ಮೆ ಇಲ್ಲಿ ನೆಲೆಯೂರಿದರೆ ದೊಡ್ಡ ಇನ್ನಿಂಗ್ಸ್ ಆಡಬಹುದು. ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಕಮ್ಮಿ.

ಉಭಯ ತಂಡಗಳು:

CSK: ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್ (ನಾಯಕ), ಮೊಯಿನ್ ಅಲಿ, ರಚಿನ್ ರವೀಂದ್ರ, ದೀಪಕ್ ಚಹಾರ್, ತುಷಾರ್ ದೇಶಪಾಂಡೆ, ಶಿವಂ ದುಬೆ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಅಜಯ್ ಮಂಡಲ್, ರಾಜವರ್ಧನ್ ಹಂಗೇಕರ್, ಮುಖೇಶ್ ಚೌಧರಿ, ಶೇಖ್ ರಶೀದ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ಶಾರ್ದೂಲ್ ಠಾಕೂರ್, ಸಮೀರ್ ರಿಜ್ವಿ, ಡೇರಿಲ್ ಮಿಚೆಲ್, ಅವನೀಶ್ ರಾವ್ ಅರಾವಳಿ.

RCB: ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಮಹಿಪಾಲ್ ಲೊಮ್ರೋರ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ವೆಸ್, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್‌ಕುಮಾರ್ ವೈಶಾಕ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಆಕಾಶ್ ದೀಪ್, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೂನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್, ಲಾಕಿ ಫರ್ಗುಸನ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist