ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟ್ರಾನ್ಸ್‌ಫಾರ್ಮರ್ ಸ್ಫೋಟ, 15ಕ್ಕೂ ಹೆಚ್ಚು ಸಾವು, ಹಲವರಿಗೆ ಗಾಯ

Twitter
Facebook
LinkedIn
WhatsApp
inbound1476974211635198000 4

ಚಮೇಲಿಯ, ಜು.19: ವಿದ್ಯುತ್​ ಪ್ರವಹಿಸಿ 15ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಘಟನೆ ಉತ್ತರಾಖಂಡ್​ನ (Uttarakhand) ಚಮೇಲಿಯ ಅಲಕಾನಂದ ನದಿ ಬಳಿ ನಡೆದಿದೆ. ನಮಾಮಿ ಗಂಗೆ ಯೋಜನೆಯ ಕಾಮಗಾರಿ ವೇಳೆ ಈ ದುರಂತ ನಡೆದಿದೆ ಎಂದು ಹೇಳಲಾಗಿದೆ. ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡಿದೆ, ಹಲವರು ಜನರು ಇಲ್ಲಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಮೋಲಿ ಎಸ್ಪಿ ಪರಮೇಂದ್ರ ದೋವಲ್ ಮಾತನಾಡಿ, ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಉತ್ತರಾಖಂಡದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಲಕಾನಂದದ ನೀರಿನ ಮಟ್ಟ ಏರಿಕೆಯಾಗಿದೆ. ಅಲಕಾನಂದದ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಪೌರಿ ಜಿಲ್ಲೆಯ ಶ್ರೀನಗರದಲ್ಲಿರುವ ಜಿವಿಕೆ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನಿಂದ ಸುಮಾರು 3,000 ಕ್ಯೂಸೆಕ್ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇನ್ನೂ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರವು ಪೌರಿ, ತೆಹ್ರಿ, ಹರಿದ್ವಾರ ಮತ್ತು ಡೆಹ್ರಾಡೂನ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳಿಗೆ ನೀರು ಬಿಡುವುದರಿಂದ ಆಯಾ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಹರಿದ್ವಾರ, ಋಷಿಕೇಶ ಮತ್ತು ಇತರ ಸ್ಥಳಗಳಲ್ಲಿ, ಜನರು ನದಿ ದಡದಿಂದ ಹೋಗದಂತೆ ಮತ್ತು ಅವರ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುವಂತೆ ತಿಳಿಸಲಾಯಿತು.

ಹಾವು ಕಚ್ಚಿಸಿ ಉದ್ಯಮಿಯ ಕೊಲೆ – ಸಹಜ ಸಾವೆಂದು ಬಿಂಬಿಸಿದ ಹಾವಾಡಿಗ ಅರೆಸ್ಟ್

ಡೆಹ್ರಾಡೂನ್: ಉದ್ಯಮಿಯೊಬ್ಬರನ್ನು (Businessman) ನಾಗರ ಹಾವಿನಿಂದ ಕಚ್ಚಿಸಿ ಕೊಲೆಗೈದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಉತ್ತರಾಖಂಡ (Uttarakhand) ಪೊಲೀಸರು (Police) ಬಂಧಿಸಿದ್ದಾರೆ. ಅಲ್ಲದೇ ಇನ್ನೂ ನಾಲ್ಕು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಉತ್ತರ ಪ್ರದೇಶದ (Uttar Pradesh) ಹಾವಾಡಿಗ ರಮೇಶ್‍ನಾಥ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಡಾಲಿ ಆರ್ಯ ಹಾಗೂ ಆಕೆಯ ಸ್ನೇಹಿತ ದೀಪ್ ಕಂಡ್ಪಾಲ್ ಎಂಬುವವರು ಆರೋಪಿಗಳಾಗಿದ್ದು ಇವರಿಗೆ ಕುಟುಂಬಸ್ಥರು ಸಹಕರಿಸಿದ್ದಾರೆ. ಈಗ ಉಳಿದ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜು.15 ರಂದು ತೀನ್‍ಪಾನಿ ಪ್ರದೇಶದ ಬಳಿ ಅಂಕಿತ್ ಚೌಹಾಣ್ (30) ಎಂಬಾತನ ಶವ ಕಾರಿನೊಳಗೆ ಪತ್ತೆಯಾಗಿತ್ತು. ಆತನ ದೇಹವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಹಾವಿನ ವಿಷ ಸೇರಿ ಮೃತಪಟ್ಟಿದ್ದು ತಿಳಿದು ಬಂದಿತ್ತು. ಬಳಿಕ ಆತನ ಮೊಬೈಲ್ ಪರಿಶೀಲಿಸಿದಾಗ ಡಾಲಿ ಎಂಬ ಮಹಿಳೆಯೊಂದಿಗೆ ಸಂಪರ್ಕದಲ್ಲಿರುವುದು ಪತ್ತೆಯಾಗಿತ್ತು.

ಬಳಿಕ ಮಹಿಳೆಯ ಕರೆಯ ವಿವರಗಳನ್ನು ಆಧರಿಸಿ ಆಕೆಯ ಫೋನ್‍ನ್ನು ಟ್ರ್ಯಾಕ್ ಮಾಡಲಾಗಿದೆ. ಈ ವೇಳೆ ಮಹಿಳೆ ಹಾವಾಡಿಗನೊಂದಿಗೆ ಸಂಪರ್ಕಿಸಿರುವುದು ತಿಳಿದು ಬಂದಿದೆ. ಅಲ್ಲದೇ ಆರಂಭದಲ್ಲಿ ಕಾರಿನಲ್ಲಿ ವಿಷಾನಿಲ ಹೊರ ಸೂಸುವಿಕೆಯಿಂದ ಈ ಸಾವು ಸಂಭವಿಸಿದೆ ಎಂದು ಊಹಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯ ನಂತರ ತನಿಖೆಯ ದಾರಿ ಬದಲಾಯಿತು ಎಂದು ಹಿರಿಯ ಪೆÇಲೀಸ್ ವರಿಷ್ಠಾಧಿಕಾರಿ (ಎಸ್‍ಎಸ್‍ಪಿ) ನೈನಿತಾಲ್ ಪಂಕಜ್ ಭಟ್ ತಿಳಿಸಿದ್ದಾರೆ.

ಡಾಲಿಗೆ ಅಂಕಿತ್ ಮದ್ಯಪಾನದ ಅಮಲಿನಲ್ಲಿ ನಿಂದಿಸುತ್ತಿದ್ದ ಇದಕ್ಕಾಗಿ ಕೊಲೆಗೈಯಲಾಗಿದೆ. ಅಲ್ಲದೇ ಆತ ಅಮಲಿನಲ್ಲಿದ್ದಾಗ ಈ ಕೃತ್ಯ ಎಸಗಿದ್ದಾಗಿ ಬಂಧಿತ ಆರೋಪಿ ಹೇಳಿದ್ದಾನೆ. ಉಳಿದ ಆರೋಪಿಗಳ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಅವರ ಪತ್ತೆಗೆ ಬಲೆ ಬೀಸಲಾಗಿದೆ. ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲಿಸರು ತಿಳಿಸಿದ್ದಾರೆ.

ಈ ಸಂಬಂಧ ಹಲ್ದ್ವಾನಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302 (ಕೊಲೆ ಆರೋಪ) ಅಡಿಯಲ್ಲಿ ಐವರು ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ