ಸೋಮವಾರ, ಮೇ 20, 2024
ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟ್ರಕ್ ಕಾರು ನಡುವೆ ಭೀಕರ ಅಪಘಾತ… 6 ಮಂದಿ ಸ್ಥಳದಲ್ಲೇ ಮೃತ್ಯು, ಓರ್ವ ಗಂಭೀರ

Twitter
Facebook
LinkedIn
WhatsApp
1 1

ಮಧ್ಯಪ್ರದೇಶ: ಟ್ರಿಕ್ ಹಾಗೂ ಎಸ್‌ಯುವಿ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಸಾಗರ್ ಬಳಿ ಸಂಭವಿಸಿದೆ.

ಸನೋಧಾ ಪೊಲೀಸ್ ಠಾಣೆ ವ್ಯಾಪ್ತಿಯ ಸಾಗರ್-ಜಬಲ್‌ಪುರ ರಸ್ತೆಯ ಬಮೋರಿ ದೂದರ್ ಬಳಿ ಈ ಘಟನೆ ನಡೆದಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಒಪಿ) ಅಶೋಕ ಚೌರಾಸಿಯಾ ತಿಳಿಸಿದ್ದಾರೆ.

ಪೊಲೀಸರ ಮಾಹಿತಿಯಂತೆ ಎಸ್‌ಯುವಿಯಲ್ಲಿ ಪ್ರಯಾಣಿಸುತ್ತಿದ್ದ ಏಳು ಜನರಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.

ಮೃತರ ಗುರುತು ಪತ್ತೆಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನದಲ್ಲಿ 150 ವರ್ಷದಷ್ಟು ಹಳೆಯ ಹಿಂದೂ ದೇವಾಲಯ ನೆಲಸಮ – ಬೆಳಗ್ಗೆ ಎದ್ದು ನೋಡಿದ ಹಿಂದೂಗಳಿಗೆ ಶಾಕ್!

ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಕರಾಚಿಯ (Karachi) ಸೋಲ್ಜರ್ ಬಜಾರ್‌ನಲ್ಲಿದ್ದ 150 ವರ್ಷಗಳಷ್ಟು ಹಳೆಯದಾದ ಮಾರಿ ಮಾತಾ ಹಿಂದೂ ದೇವಾಲಯವನ್ನು (Hindu Temple) ನೆಲಸಮಗೊಳಿಸಲಾಗಿದೆ.

ಶುಕ್ರವಾರ ತಡರಾತ್ರಿ ಈ ಪ್ರದೇಶದಲ್ಲಿ ವಿದ್ಯುತ್ ಇಲ್ಲದ ಸಂದರ್ಭದಲ್ಲಿ ನೆಲಸಮ ಕಾರ್ಯಾಚರಣೆ ನಡೆದಿದೆ. ಬುಲ್ಡೋಜರ್‌ ಬಳಸಿ ರಾತ್ರಿಯೆಲ್ಲಾ ಕಾರ್ಯಾಚರಣೆ ನಡೆಸಿ ಹೊರಗಿನ ಗೋಡೆಗಳು ಮತ್ತು ಮುಖ್ಯ ಗೇಟ್ ಅನ್ನು ಹಾಗೆಯೇ ಬಿಟ್ಟು, ಒಳಗಿನ ದೇವಾಲಯದ ಸಂಪೂರ್ಣ ರಚನೆಯನ್ನು ಕೆಡವಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ. 

ಮಾರಿ ಮಾತಾ ದೇವಸ್ಥಾನವು ಮುಖಿ ಚೋಹಿತ್ರಮ್ ರಸ್ತೆಯಲ್ಲಿದೆ. ಸೋಲ್ಜರ್ ಬಜಾರ್ ಪೊಲೀಸ್ ಠಾಣೆಗೆ ಬಹಳ ಹತ್ತಿರದಲ್ಲಿದೆ. ಬುಲ್ಡೋಜರ್‌ನಿಂದ ದೇವಸ್ಥಾನ ಕೆಡವುತ್ತಿದ್ದ ವ್ಯಕ್ತಿಗಳಿಗೆ ಪೊಲೀಸರು ವ್ಯಾನ್‌ಗಳಲ್ಲಿ ಬಂದು ರಕ್ಷಣೆ ನೀಡಿದ್ದರು ಎಂದು ಸ್ಥಳೀಯ ಪತ್ರಿಕೆ ಡಾನ್‌ ವರದಿ ಮಾಡಿದೆ.

ಸ್ಥಳೀಯರಾದ ಶ್ರೀರಾಮ್ ನಾಥ್ ಮಿಶ್ರ ಮಹಾರಾಜ್ ಪ್ರತಿಕ್ರಿಯಿಸಿ, ಈ ದೇವಾಲಯವನ್ನು ಇದನ್ನು 150 ವರ್ಷಗಳ ಹಿಂದೆ ನಿರ್ಮಿಸಲಾಗಿದೆ. ಅದರ ಅಂಗಳದಲ್ಲಿ ಹೂತಿಟ್ಟಿರುವ ಹಳೆಯ ನಿಧಿಗಳ ಬಗ್ಗೆ ನಾವು ಕಥೆಗಳನ್ನು ಕೇಳಿದ್ದೇವೆ. ಕೆಲವು ಸಮಯದಿಂದ ಅದರ ಮೇಲೆ ಕಣ್ಣಿಟ್ಟಿದ್ದವು ಈ ಕೆಲಸ ಮಾಡಿರಬಹುದು ಎಂದು ದೂರಿದ್ದಾರೆ.

ಮಂದಿರವು ಕರಾಚಿಯ ಮದ್ರಾಸಿ ಹಿಂದೂ ಸಮುದಾಯದ ನಿರ್ವಹಣೆಯಲ್ಲಿತ್ತು. ಇದು ಅತ್ಯಂತ ಹಳೆಯ ದೇವಾಲಯವಾಗಿದ್ದರಿಂದ ಸ್ವಲ್ಪ ಶಿಥಿಲಾವಸ್ತೆಗೊಂಡಿತ್ತು. ದೇವಾಲಯ ನವೀಕರಣಕ್ಕಾಗಿ ಅಲ್ಲಿದ್ದ ಹಿಂದೂ ದೇವರ ವಿಗ್ರಹಗಳನ್ನು ತಾತ್ಕಾಲಿಕವಾಗಿ ಬೇರೆಡೆ ಸ್ಥಳಾಂತರಿಸಲಾಗಿತ್ತು. ಆದರೆ ನಿನ್ನೆ ರಾತ್ರಿ ಮಾರಿ ಮಾತಾ ದೇವಾಲಯವನ್ನು ಕೆಡವಲಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇಮ್ರಾನ್ ಹಶ್ಮಿ ಮತ್ತು ರೇಖಾ ಎಕೆಎ ನಾಗಿನ್ ಬಾಯಿ ಎಂಬಿಬ್ಬರು ವ್ಯಕ್ತಿಗಳು ಈ ಸ್ಥಳವನ್ನು ತೊರೆಯುವಂತೆ ನಮ್ಮನ್ನು ಒತ್ತಾಯಿಸುತ್ತಿದ್ದಾರೆ. ಈ ದೇವಸ್ಥಾನದ ಸ್ಥಳವನ್ನು ಬೇರೆಯವರಿಗೆ ಮಾರಾಟ ಮಾಡಲು ಇವರಿಬ್ಬರು ಯೋಜಿಸಿದ್ದರು. ಆ ಜಾಗದಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸುವ ಪ್ಲಾನ್‌ ಇತ್ತು ಎಂದು ಮದ್ರಾಸಿ ಹಿಂದೂ ಗುಂಪಿನ ಸದಸ್ಯರೊಬ್ಬರು ಆರೋಪಿಸಿದ್ದಾರೆ.

ಪಾಕಿಸ್ತಾನ-ಹಿಂದೂ ಕೌನ್ಸಿಲ್, ಮುಖ್ಯಮಂತ್ರಿ ಸೈಯದ್ ಮುರಾದ್ ಅಲಿ ಶಾ ಮತ್ತು ಸಿಂಧ್ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್‌ಗೆ ಮದ್ರಾಸಿ ಹಿಂದೂ ಸಮುದಾಯ ದೂರು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ