ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಟೋಗೆ ಟ್ರಕ್‌ ಡಿಕ್ಕಿಯಾಗಿ ಅಪ್ಪಚ್ಚಿ; ಸ್ಥಳದಲ್ಲೇ 9 ಮಂದಿ ದುರ್ಮರಣ...!

Twitter
Facebook
LinkedIn
WhatsApp
ಆಟೋಗೆ ಟ್ರಕ್‌ ಡಿಕ್ಕಿಯಾಗಿ ಅಪ್ಪಚ್ಚಿ; ಸ್ಥಳದಲ್ಲೇ 9 ಮಂದಿ ದುರ್ಮರಣ...!

ಬಿಹಾರದಲ್ಲಿ ಬುಧವಾರ ಬೆಳಗಿನ ಜಾವ ಭೀಕರ ಅಪಘಾತ (Bihar Accident) ಸಂಭವಿಸಿದ್ದು, 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 5 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಹಾರದ ಲಾಖಿಸರಾಯ್‌ (Lakhisarai District) ಜಿಲ್ಲೆಯಲ್ಲಿ ಸಿಎನ್‌ಜಿ ಆಟೋ ಹಾಗೂ ಟ್ರಕ್‌ ಡಿಕ್ಕಿಯಾಗಿದ್ದು, ಆಟೋದಲ್ಲಿದ್ದ ೫ ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡಿರುವವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ರಾಮಗಢ ಪೊಲೀಸ್‌ ಠಾಣೆ ವ್ಯಾಪ್ತಿಯ ಜುಲೋನಾ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 30ರ ಬಳಿ ಅಪಘಾತ ಸಂಭವಿಸಿದೆ. “ನನ್ನ ಸಂಬಂಧಿಯಾದ ಮನೋಜ್‌ ಕುಮಾರ್‌ ಆಟೋ ಚಾಲಕನಾಗಿದ್ದು, ಆತ ಹಲ್ಸಿಯಿಂದ ಲಾಖಿಸರಾಯ್‌ಗೆ ಕೆಲ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ. ಜುಲೋನಾ ಗ್ರಾಮದ ಬಳಿ ವೇಗವಾಗಿ ಚಲಿಸುತ್ತಿದ್ದ ಟ್ರಕ್‌ ಆಟೋಗೆ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಆಟೋ ನಜ್ಜುಗುಜ್ಜಾಗಿದ್ದು, 9 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ” ಎಂದು ಆಟೋ ಚಾಲಕನ ಸಂಬಂಧಿ ಅನಿಲ್‌ ಮಿಸ್ರಿ ಎಂಬುವರು ಮಾಹಿತಿ ನೀಡಿದ್ದಾರೆ.

ಗಾಯಗೊಂಡಿರುವ 5 ಜನರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಪಟನಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಡೆಪ್ಯುಟಿ ಸೂಪರಿಂಟೆಂಡೆಂಟ್‌ ಅಮಿತ್‌ ಕುಮಾರ್‌ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಪಘಾತದ ಬಳಿಕ ಟ್ರಕ್‌ ಚಾಲಕನು ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ