ಹೊತ್ತಿ ಉರಿದ ಟ್ರಕ್; ನಾಲ್ವರು ಸಜೀವ ದಹನ
ಮಹಾರಾಷ್ಟ್ರ: ನಡು ರಸ್ತೆಯಲ್ಲಿ ಟ್ರಕ್ ವೊಂದು ಹೊತ್ತಿ ಉರಿದ ಪರಿಣಾಮ ನಾಲ್ವರು ಸಜೀವ ದಹನವಾಗಿರುವ ಘಟನೆ ಪುಣೆಯ ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಸೋಮವಾರ ರಾತ್ರಿ(ಅ.16 ರಂದು) ನಡೆದಿದೆ.
ಸೋಮವಾರ ರಾತ್ರಿ ಸುಮಾರು 9 ಗಂಟೆಗೆ ನವಲೆ ಸೇತುವೆಯ ಸಮೀಪದಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನದ ಬಳಿ ಈ ಘಟನೆ ಸಂಭವಿಸಿದೆ ಎಂದು ಸಿನ್ಹಗಡ್ ರೋಡ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಅಭಯ್ ಮಹಾಜನ್ ತಿಳಿಸಿದ್ದಾರೆ.
ವೇಗವಾಗಿ ಬಂದ ಟ್ರಕ್ ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ಪರಿಣಾಮ ನಾಲ್ವರು ಸಜೀವ ದಹನಗೊಂಡಿದ್ದು, ಇನ್ನಿಬ್ಬರಿಗೆ ಸುಟ್ಟಗಾಯಗಳಾಗಿವೆ ಎಂದು ವರದಿ ತಿಳಿಸಿದೆ.
ಘಟನೆ ನಡೆದ ಕೂಡಲೇ ಸ್ಥಳೀಯರು ಪೊಲೀಸರು ಹಾಗೂ ಅಗ್ನಿಶಾಮಕದಳದವರಿಗೆ ಮಾಹಿತಿ ನೀಡಿದ್ದಾರೆ. ಅವರು ಬರುವ ಮುನ್ನ ಸ್ಥಳೀಯರು ಟ್ರಕ್ ನಲ್ಲಿದ್ದ ಜನರನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ ಆದರೆ ಬೆಂಕಿ ವಿಪರೀತವಾಗಿದ್ದರಿಂದ ಅದು ಸಾಧ್ಯವಾಗಲಿಲ್ಲ ಎಂದು ವರದಿ ತಿಳಿಸಿದೆ.
ಮಂಡ್ಯ, ಮೈಸೂರಿನಲ್ಲಿ ಅಪಘಾತ: ಒಟ್ಟು ಮೂವರು ಸಾವು
ಮಂಡ್ಯ/ಮೈಸೂರು, (ಅಕ್ಟೋಬರ್ 17): ಎರಡು ಬೈಕ್ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರು-ಗೌಡಹಳ್ಳಿ ಗೇಟ್ ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಗೌಡಹಳ್ಳಿ ನಿವಾಸಿ ಶ್ರೀಧರ್ ಹಾಗೂ ಆತನ ಸ್ನೇಹಿತ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತಿಬ್ಬರಿಗೆ ಗಾಯಗಳಾಗಿವೆ. ರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸದಿರುವುದೇ ಈ ಅಪಘಾತಕ್ಕೆ ಕಾರಣ ಎಂದಯ ಗ್ರಾಮಸ್ಥರು ಆರೋಪಿಸಿದ್ದು, ಕೂಡಲೇ ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಟಾ ಏಸ್ ಬೈಕ್ ಮುಖಾಮುಖಿ ಡಿಕ್ಕಿ ಬೈಕ್ ಸವಾರ ಸಾವು
ಮೈಸೂರು: ಹುಣಸೂರು ತಾಲೂಕಿನ ಕೆ.ಆರ್.ನಗರ ಮುಖ್ಯರಸ್ತೆಯ ಬಿಳಿಗೆರೆ ಬಳಿ ಟಾಟಾ ಏಸ್ ಮತ್ತು ಬೈಕ್ ಮಧ್ಯೆ ಡಿಕ್ಕಿಯಾಗಿದ್ದು, ಬೈಕ್ ಸವಾರ ಮೃತಪಟ್ಟಿದ್ದಾನೆ. ಹೇಮಂತ್(26) ಮೃತ ದುರ್ವೈವಿ. ಬೈಕ್ ಕೆ.ಆರ್.ನಗರದಿಂದ ಹುಣಸೂರಿಗೆ ಬರುತ್ತಿದ್ದರೆ, ಟಾಟಾ ಏಸ್ ಹುಣಸೂರಿನಿಂದ ಕಳ್ಳಿಕೊಪ್ಪಲು ಕಡೆಗೆ ಹೋಗುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ.