ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರೈಲ್ವೇ ಹಳಿ ಮೇಲೆ ಕಬ್ಬಿಣದ ರಾಡ್ ಹಾಗೂ ಮರದ ದಿಮ್ಮಿ ಇಟ್ಟು ಹಳಿ ತಪ್ಪಿಸಲು ಯತ್ನ ; ಮೂವರ ಬಂಧನ..!

Twitter
Facebook
LinkedIn
WhatsApp
ರೈಲ್ವೇ ಹಳಿ ಮೇಲೆ ಕಬ್ಬಿಣದ ರಾಡ್ ಹಾಗೂ ಮರದ ದಿಮ್ಮಿ ಇಟ್ಟು ಹಳಿ ತಪ್ಪಿಸಲು ಯತ್ನ ; ಮೂವರ ಬಂಧನ..!
ಮೈಸೂರು: ಮೈಸೂರಿನಲ್ಲಿ (Mysore news) ರೈಲು ಹಳಿ ತಪ್ಪಿಸಲು (derail effort) ದುಷ್ಕರ್ಮಿಗಳು ಯತ್ನಿಸಿದ್ದು, ಭಾರಿ ರೈಲು ದುರಂತವೊಂದು ತಪ್ಪಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ.

ರೈಲ್ವೇ ಹಳಿ ಮೇಲೆ ಕಬ್ಬಿಣದ ರಾಡ್ ಹಾಗೂ ಮರದ ದಿಮ್ಮಿ ಇಟ್ಟು ಹಳಿ ತಪ್ಪಿಸಲು ಇವರು ಸ್ಕೆಚ್ ಹಾಕಿದ್ದರು. ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ನವಂಬರ್ 12ರಂದು ಚಾಮರಾಜನಗರದಿಂದ ಮೈಸೂರಿಗೆ ಬರುತ್ತಿದ್ದ ರೈಲನ್ನು ಹಳಿ ತಪ್ಪಿಸಲು ಯತ್ನಿಸಲಾಗಿತ್ತು.

ಸೋಮಯ್ ಮರಾಂಡಿ, ಭಜನು ಮುರ್ಮು ಹಾಗೂ ದಸಮತ್ ಮರಾಂಡಿ ಎಂಬ ಮೂವರನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಓಡಿಶಾ ಮೂಲದ ಈ ಮೂವರು ವಿಚಾರಣೆ ವೇಳೆ ತಪ್ಪು ಒಪ್ಪಿಕೊಂಡಿದ್ದಾರೆ.

ನಂಜನಗೂಡು ಮತ್ತು ಕಡಕೋಳದ ನಡುವಿನ ರೈಲ್ವೆ ಹಳಿಯ ಮೇಲೆ ರಾಡ್ ಹಾಗೂ ಮರದ ದಿಮ್ಮಿ ಇಟ್ಟು ಹಳಿ ತಪ್ಪಿಸಲು ಯತ್ನಿಸಿದ್ದರು. ಕಬ್ಬಿಣದ ರಾಡ್ ಹಾಗೂ ಮರದ ದಿಮ್ಮಿ ಇಟ್ಟಿದ್ದ ಅಕ್ಕಪಕ್ಕದಲ್ಲೇ ಈ ಆರೋಪಿಗಳು ಓಡಾಡುತ್ತಿದ್ದರು. ಸದ್ಯ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ.

ಆಸ್ತಿಗಾಗಿ ಪತ್ನಿಯನ್ನೇ ಕೊಂದ ಗಂಡ

ಮಂಡ್ಯ: ಪತ್ನಿ ಮಲಗಿದ್ದ ವೇಳೆ ಮುಖಕ್ಕೆ ದಿಂಬು ಇಟ್ಟು, ಬೆಡ್‌ ಶೀಟ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆ (Murder Case) ಮಂಡ್ಯದ (Mandya News) ವಿ.ವಿ. ನಗರ ಬಡಾವಣೆಯಲ್ಲಿ ಘಟನೆ (Man kills wife) ನಡೆದಿದೆ. ಎಸ್.ಶೃತಿ(32) ಕೊಲೆಯಾದ ಗೃಹಿಣಿ. ಟಿ.ಎನ್.ಸೋಮಶೇಖರ್(41) ಎಂಬಾತನೇ ಕೊಲೆ ಮಾಡಿದ ಪತಿರಾಯ.

ದಿಂಬು ಮತ್ತು ಬೆಡ್‌ ಶೀಟ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ ಗಂಡ ಇದೊಂದು ಸಹಜ ಸಾವೆಂದು ಬಿಂಬಿಸಲು ಸಾಕಷ್ಟು ಪ್ರಯತ್ನಪಟ್ಟಿದ್ದ. ಆದರೆ ಆತನ ಹಿನ್ನೆಲೆ, ಆತ ನೀಡುತ್ತಿದ್ದ ಕಿರುಕುಳಗಳ ಹಿನ್ನೆಲೆಯಲ್ಲಿ ಆತನ ವಿಚಾರಣೆ ನಡೆಸಿದಾಗ ಸತ್ಯ ಹೊರಬಿದ್ದಿದೆ.

ಶ್ರುತಿಯ ಹೆಸರಿನಲ್ಲಿ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಇದೆ ಎನ್ನಲಾಗಿದೆ. ಅದರಲ್ಲಿ ಒಂದು ಭಾಗವನ್ನು ಮಾರಾಟ ಮಾಡಲು ಶ್ರುತಿ ಮುಂದಾಗಿದ್ದರು. ಆದರೆ, ಪತಿ ಸೋಮಶೇಖರ್‌ ಇದನ್ನು ವಿರೋಧಿಸಿದ್ದ. ಹಾಗಂತ ಅವನು ಒಳ್ಳೆಯ ಕಾರಣಕ್ಕಾಗಿ ಹೀಗೆ ಮಾಡಿದ್ದಲ್ಲ. ಅವನಿಗೆ ಇದ್ದದ್ದು ಎಲ್ಲ ಆಸ್ತಿಯನ್ನು ತನ್ನದಾಗಿಸಿಕೊಳ್ಳುವ ಉದ್ದೇಶ ಎನ್ನಲಾಗಿದೆ. ಇದೀಗ ಪತ್ನಿಯನ್ನು ಕೊಂದಾದರೂ ಸರಿ ಭೂಮಿ ಮತ್ತು ಆಸ್ತಿಯನ್ನು ಕಬಳಿಸಲು ಮುಂದಾಗಿದ್ದಾನೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist