ತುಳುವನ್ನು ಪರಿಚ್ಛೇದಕ್ಕೆ ಸೇರಿಸಬೇಕು. ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಮಾಡಬೇಕು ಎಂದು ಪರಿಷತ್ತಿನಲ್ಲಿ ಆಗ್ರಹಿಸಿದ ಎಂಎಲ್ಸಿ ಹರೀಶ್ ಕುಮಾರ್
Twitter
Facebook
LinkedIn
WhatsApp
ಬೆಂಗಳೂರು: ತುಳುವನ್ನು ಸಂವಿಧಾನದ ಪರಿಚ್ಛೇದದಲ್ಲಿ ಸೇರಿಸಬೇಕು ಹಾಗೂ ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಮಾಡಬೇಕು ಎಂದು ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ವಿಧಾನ ಪರಿಷತ್ತಿನಲ್ಲಿ ಆಗ್ರಹಿಸಿದ್ದಾರೆ.
ವಿಧಾನ ಪರಿಷತ್ತಿನ ಕಲಾಪದಲ್ಲಿ ಅವರು ಈ ವಿಷಯದ ಕುರಿತಂತೆ ಚರ್ಚೆಯಲ್ಲಿ ಭಾಗವಹಿಸಿ ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ತುಳುವನ್ನು ಘೋಷಿಸುವಂತೆ ಸರ್ಕಾರವನ್ನು ಅಗ್ರಹಿಸಿದರು.
ತುಳು ಬಹಳ ಸುಂದರವಾದ ಭಾಷೆ. ಈ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಇದನ್ನು ಆಧಾರವಾಗಿಟ್ಟುಕೊಂಡು ನಾವು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಅಂಗೀಕರಿಸಬೇಕು ಎಂದು ಮನವಿ ಮಾಡಿದರು.