ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕ್ಯಾಂಟರ್ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವು

Twitter
Facebook
LinkedIn
WhatsApp
ACCIDENT

ವಿಜಯಪುರ, ಆ.24: ನಗರದ ಹೊರವಲಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪರಿಚಿತ ಕ್ಯಾಂಟರ್ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ(Accident). ತಲೆ ಮೇಲೆ ಕ್ಯಾಂಟರ್ ಹರಿದ ಪರಿಣಾಮ ತಲೆಗಳು ಛಿದ್ರವಾಗಿವೆ. ಸವಾರರ ಹೆಸರು, ವಿಳಾಸ ಪತ್ತೆಗೆ ವಿಜಯಪುರ ಸಂಚಾರಿ ಠಾಣೆ ಪೊಲೀಸರು ಮುಂದಾಗಿದ್ದಾರೆ.

ಬಾಲಕ ಏಡಿ ಹಿಡಿಯಲು ಹೋಗಿ ನೀರು ಪಾಲು:

ಮಡಿಕೇರಿ: ನೃತ್ಯದ ಮೂಲಕ ಭಾರತ ದೇಶವನ್ನು ಪ್ರತಿನಿಧಿಸುವ ಕನಸು ಕಂಡಿದ್ದ ಬಾಲಕನೋರ್ವ ಬುಧವಾರ ನಾಲೆಯಲ್ಲಿ ಏಡಿ ಹಿಡಿಯಲು ಹೋಗಿ ನೀರು ಪಾಲದ ಘಟನೆ ಕೊಡಗು (Kodagu) ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯದ (Harangi Reservoir) ನಾಲೆ ಬಳಿ ನಡೆದಿದೆ. ಅನಿತ್ ನಾಲೆಗೆ ಬಿದ್ದು ಮೃತಪಟ್ಟ ದುರ್ದೈವಿಯಾಗಿದ್ದಾನೆ.

ನಿನ್ನೆ ಬೆಳಗ್ಗೆ 8:30ರ ಸುಮಾರಿಗೆ ಬ್ಯಾಡಗೂಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಕೇಂದ್ರದ ಬಳಿಯಿಂದ ಸ್ನೇಹಿತರೊಂದಿಗೆ ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಹಾರಂಗಿ ನಾಲೆಯಲ್ಲಿ ಏಡಿಯೊಂದು ಅನಿತ್‌ಗೆ ಗೋಚರಿಸಿದೆ. ಈ ವೇಳೆ ಅನಿತ್ ತನ್ನ ಗೆಳೆಯರಿಗೆ ಏಡಿ ಹಿಡಿದುಕೊಂಡು ಬರುವೆ, ಸ್ವಲ್ಪ ಸಮಯ ಕಾಯಿರಿ ಎಂದು ನಾಲೆ ಸಮೀಪವೇ ಬಟ್ಟೆ, ಶಾಲಾ ಬ್ಯಾಗ್ ಇಟ್ಟು ಹೋಗಿದ್ದಾನೆ. ಆದರೆ ಆಕಸ್ಮಿಕವಾಗಿ ಕಾಲು ಜಾರಿ ನಾಲೆಯಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಅನಿತ್ ಸ್ನೇಹಿತರು ಆತನನ್ನು ರಕ್ಷಣೆ ಮಾಡಲು ಮುಂದಾದರೂ ಯಾವುದೇ ಪ್ರಯೋಜನವಾಗಿಲ್ಲ.

ನಂತರ ಶಾಲಾ ಬಾಲಕರು ಹಾಗೂ ಗ್ರಾಮಸ್ಥರು ನಾಲೆಯಲ್ಲಿ ಅನಿತ್ ಕಣ್ಮರೆಯಾಗಿರುವ ವಿಷಯ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿತ್‌ನ ಹುಡುಕಾಟಕ್ಕಾಗಿ ಹಾರಂಗಿ ಜಲಾಶಯದಿಂದ ನಾಲೆಗೆ ಬಿಟ್ಟಿರುವ ನೀರನ್ನು ಸ್ಥಗಿತಗೊಳಿಸಿದ್ದಾರೆ. ಅಗ್ನಿ ಶಾಮಕ ದಳದವರು ಬಾಲಕನಿಗಾಗಿ ಶೋಧ ಕಾರ್ಯ ನಡೆಸಿ ಬಾಲಕನ ಮೃತದೇಹವನ್ನು ಹೊರತೆಗೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ನಿಯಂತ್ರಣ ತಪ್ಪಿ ಅಂಗಡಿಗಳಿಗೆ ಗುದ್ದಿದ ಕಾರು – ಚಾಲಕ ಸಾವು:

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಐದು ಪಲ್ಟಿಯಾಗಿ ಅಂಗಡಿಗಳಿಗೆ ಗುದ್ದಿದ ಘಟನೆ ತಾಲೂಕಿನ ಕಸ್ಬೆ ಕ್ಯಾಂಪ್ ಬಳಿ ನಡೆದಿದೆ. ಅಪಘಾತದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಮೃತನನ್ನು ಸಲೀಂ (34) ಎಂದು ಗುರುತಿಸಲಾಗಿದೆ. ಸಿಂಧನೂರಿನಿಂದ ರಾಯಚೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ರಸ್ತೆಯ ತಿರುವಿನಲ್ಲಿ ಕಾರು ಅತಿಯಾದ ವೇಗದಲ್ಲಿ ಚಲಾಯಿಸಿರುವುದು ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ವೇಗದ ಪರಿಣಾಮ ಅಪಘಾತದ ಬಳಿಕ ಕಾರು ರಸ್ತೆ ಪಕ್ಕದ ಅಂಗಡಿಗಳಿಗೂ ಗುದ್ದಿದೆ.

ಈ ಸಂಬಂಧ ರಾಯಚೂರು ಗ್ರಾಮೀಣ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ದೇಹವನ್ನು ರಿಮ್ಸ್ ಆಸ್ಪತ್ರೆಗೆ ಶವಪರೀಕ್ಷೆಗೆ ಕಳುಹಿಸಲಾಗಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ