ಮಂಗಳವಾರ, ಡಿಸೆಂಬರ್ 5, 2023
ಇಂದಿರಾ ಗಾಂಧಿ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಇಂದು ಮಿಜೋರಾಂ ನೂತನ ಸಿಎಂ ಸ್ಥಾನಕ್ಕೆ ಸಜ್ಜು..!-ಚೆನ್ನೈನಲ್ಲಿ ಭಾರಿ ಮಳೆ ; 5 ಮಂದಿ ಸಾವು - ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!-ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!-ಉದ್ಯಮಿಗೆ ವಂಚನೆ ಆರೋಪ ಪ್ರಕರಣ ; ಚೈತ್ರಾ ಸಹಿತ ಇಬ್ಬರಿಗೆ ಜಾಮೀನು ಮಂಜೂರು..!-ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ನಿಂದ ಹರೀಶ್ ಕುಮಾರ್ ಅಥವಾ ರಮನಾಥ ರೈ ನಳಿನ್ ವಿರುದ್ಧ ಅಭ್ಯರ್ಥಿ ?-ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ-Gold Rate : ದುಬಾರಿಯತ್ತ ಬಂಗಾರದ ಬೆಲೆ ; ಇಂದಿನ ಚಿನ್ನದ ದರ ಹೇಗಿದೆ?-8 ಬಾರಿ ಮೈಸೂರು ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು; ಕಾಡಾನೆ ಸೆರೆ ಹಿಡಿಯುವ ವೇಳೆ ದುರ್ಘಟನೆ..!-ದಿವ್ಯಾಂಗರು, ಅಂಗವಿಕಲರ ಕಲ್ಯಾಣದ ಮಹತ್ವದ ವಿಷಯದ ಕುರಿತಂತೆ ಸರ್ಕಾರದ ಗಮನ ಸೆಳೆದ ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್-ಪ್ರತಾಪ್ ಸಿಂಹರವರು ಸತತ ಎರಡು ಬಾರಿ ಗೆದ್ದಂತಹ ಮೈಸೂರು ಲೋಕಸಭಾ ಕ್ಷೇತ್ರ ಈ ಬಾರಿ ಜೆಡಿಎಸ್ ತೆಕ್ಕೆಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!

Twitter
Facebook
LinkedIn
WhatsApp
ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!

ತಿರುವನಂತಪುರಂ: ರಾತ್ರಿ ವೇಳೆ ಭಾರೀ ಮಳೆಯ ನಡುವೆ ಜಿಪಿಎಸ್ ಎಡವಟ್ಟಿನಿಂದ ಕಾರೊಂದು (Car) ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ (Kerala) ಎರ್ನಾಕುಲಂನಲ್ಲಿ (Ernakulam) ನಡೆದಿದೆ.

ಮೃತರನ್ನು ಡಾ.ಅದ್ವೈತ್ (29) ಹಾಗೂ ಡಾ.ಅಜ್ಮಲ್ ಆಸಿಫ್ (29) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇತರ ಮೂವರು ಹೊರಬಂದು ತಮ್ಮ ಜೀವ ಉಳಿಸಿಕೊಂಡಿದ್ದಾರೆ. ಈ ಘಟನೆ ಭಾನುವಾರ ರಾತ್ರಿ ಸುಮಾರು 11:30ರ ವೇಳೆಗೆ ನಡೆದಿದೆ ಎಂದು ತಿಳಿದು ಬಂದಿದೆ. 

ಡಾ.ಅದ್ವೈತ್ ಅವರ ಹುಟ್ಟುಹಬ್ಬದ ಸಲುವಾಗಿ ಶಾಪಿಂಗ್‍ಗೆ ಕೊಚ್ಚಿಗೆ ಹೋಗಿದ್ದರು. ಶಾಪಿಂಗ್ ಮುಗಿಸಿ ಕೊಚ್ಚಿಯಿಂದ ಕೊಡುಂಗಲ್ಲೂರಿಗೆ ಹಿಂತಿರುಗುತ್ತಿದ್ದರು. ಈ ವೇಳೆ ಭಾರೀ ಮಳೆಯಾಗುತ್ತಿತ್ತು. ದಾರಿಯ ಪರಿಚಯ ಇರದ ಕಾರಣ ಜಿಪಿಎಸ್ ನೆರವು ಪಡೆದುಕೊಂಡಿದ್ದಾರೆ. ಈ ವೇಳೆ ನೀರು ತುಂಬಿದ ರಸ್ತೆಯಲ್ಲಿ ಕಾರು ಸಂಚರಿಸಿದೆ. ಈ ವೇಳೆ ದಾರಿಯನ್ನು ನೇರವಾಗಿಯೇ ಜಿಪಿಎಸ್ ಮ್ಯಾಪ್‍ನಲ್ಲಿ ತೋರಿಸಿದೆ. ಇದರಿಂದ ಅದೇ ಮಾರ್ಗದಲ್ಲಿ ಸಂಚರಿಸಿದ್ದಾರೆ. ಈ ವೇಳೆ ಕಾರು ನದಿಯಲ್ಲಿ ಮುಳುಗಿದೆ.

ಬದುಕುಳಿದವರಲ್ಲಿ ಒಬ್ಬರಾದ ಡಾ.ಗಾಜಿಕ್ ತಬ್ಸೀರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಈ ಮಾಹಿತಿ ಹಂಚಿಕೊಂಡಿದ್ದಾರೆ. ಅದರ ಹೊರತಾಗಿಯೂ ನಾನು ಚಾಲನೆ ಮಾಡದ ಕಾರಣ, ಇದು ಅಪ್ಲಿಕೇಶನ್‍ನ ತಾಂತ್ರಿಕ ದೋಷವೋ ಅಥವಾ ಮಾನವ ದೋಷವೋ ಎಂದು ನಾನು ಖಚಿತಪಡಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ