ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಲೋಕಸಭೆಯಲ್ಲಿ ಕಲಾಪ ವೇಳೆ ಒಳನುಗ್ಗಿ ಅಶ್ರುವಾಯು ಸಿಡಿಸಿದ ಇಬ್ಬರು ವ್ಯಕ್ತಿಗಳು ವಶಕ್ಕೆ..!

Twitter
Facebook
LinkedIn
WhatsApp
ಲೋಕಸಭೆಯಲ್ಲಿ ಕಲಾಪ ವೇಳೆ ಒಳನುಗ್ಗಿ ಅಶ್ರುವಾಯು ಸಿಡಿಸಿದ ಇಬ್ಬರು ವ್ಯಕ್ತಿಗಳು ವಶಕ್ಕೆ..!

ದೆಹಲಿ ಡಿಸೆಂಬರ್ 13: ಇಬ್ಬರು ವ್ಯಕ್ತಿಗಳು ಲೋಕಸಭೆ ಪ್ರವೇಶಿಸಿ (Security breach at Lok Sabha) ಅಶ್ರುವಾಯು ಸಿಡಿಸಿದ ಘಟನೆ ಇಂದು ಲೋಕಸಭೆಯಲ್ಲಿ (Loksabha) ನಡೆದಿದೆ. ಇಬ್ಬರು ಯುವಕರು ಗ್ಯಾಲರಿಯಿಂದ ಜಿಗಿದರು. ಅವರು ಅನಿಲ ಹೊರಸೂಸುವಂಥಾ ಏನೋ ವಸ್ತು ಎಸೆದರು, ಅವರನ್ನು ಸಂಸದರು ಹಿಡಿದರು.ಆಮೇಲೆ, ಅವರನ್ನು ಭದ್ರತಾ ಸಿಬ್ಬಂದಿಗಳು ಹೊರಗೆ ಕರೆತಂದರು. ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ಇದು ಖಂಡಿತವಾಗಿಯೂ ಭದ್ರತಾ ಲೋಪವಾಗಿದೆ ಎಂದುಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಅಂದಹಾಗೆ ಲೋಕಸಭೆಯ ಒಳಗೆ ಪ್ರವೇಶಿಸಿದ ವ್ಯಕ್ತಿಯ ಹೆಸರು ಸಾಗರ್ ಎಂದು ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ಮಾಹಿತಿ ನೀಡಿದ್ದಾರೆ. ಈ ವ್ಯಕ್ತಿ ಮೈಸೂರಿನ ಸಂಸದರ ಅತಿಥಿ ಎಂದು ಹೇಳಿ ಸಂಸತ್ ಪ್ರವೇಶಿಸಿದ್ದರು ಎಂದು ಡ್ಯಾನಿಶ್ ಅಲಿ ಹೇಳಿರುವುದಾಗಿ ಟಿವಿ9 ಭಾರತ್​​ವರ್ಷ್ ವರದಿ ಮಾಡಿದೆ.

ಇಲ್ಲಿಗೆ ಬರುವವರೆಲ್ಲರೂ – ಅದು ಸಂದರ್ಶಕರು ಅಥವಾ ವರದಿಗಾರರೇ ಆಗಿರಲಿ ಅವರು ಟ್ಯಾಗ್‌ಗಳನ್ನು ಹೊಂದಿರುವುದಿಲ್ಲ. ಹಾಗಾಗಿ, ಸರ್ಕಾರವು ಈ ಬಗ್ಗೆ ಗಮನ ಹರಿಸಬೇಕು ಎಂದು ನಾನು ಭಾವಿಸುತ್ತೇನೆ. ಇದು ಸಂಪೂರ್ಣ ಭದ್ರತಾ ಲೋಪ ಎಂದು ನಾನು ಭಾವಿಸುತ್ತೇನೆ. ಲೋಕಸಭೆಯ ಒಳಗೆ ಏನು ಬೇಕಾದರೂ ಆಗುತ್ತಿತ್ತು ಎಂದು ಲೋಕಸಭೆಯಲ್ಲಿ ಭದ್ರತಾ ಲೋಪದ ಬಗ್ಗೆ ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಡಿಂಪಲ್ ಯಾದವ್ ಹೇಳಿದ್ದಾರೆ.

ಇಬ್ಬರು 20 ವರ್ಷ ವಯಸ್ಸಿನ ಯುವಕರು ಇದ್ದಕ್ಕಿದ್ದಂತೆ ಸಂದರ್ಶಕರ ಗ್ಯಾಲರಿಯಿಂದ ಸದನಕ್ಕೆ ಜಿಗಿದರು ಮತ್ತು ಅವರ ಕೈಯಲ್ಲಿ ಡಬ್ಬಿಗಳನ್ನು ಹೊಂದಿದ್ದರು. ಈ ಡಬ್ಬಿಗಳು ಹಳದಿ ಹೊಗೆಯನ್ನು ಹೊರಸೂಸುತ್ತಿವೆ. ಅವರಲ್ಲಿ ಒಬ್ಬರು ಸ್ಪೀಕರ್ ಕುರ್ಚಿಯತ್ತ ಓಡಲು ಪ್ರಯತ್ನಿಸುತ್ತಿದ್ದರು. ಕೆಲವು ಘೋಷಣೆಗಳನ್ನು ಕೂಗಿದರು. ಹೊಗೆಯು ವಿಷಕಾರಿಯಾಗಿರಬಹುದು. ಇದು ವಿಶೇಷವಾಗಿ ಡಿಸೆಂಬರ್ 13 ರಂದು 2001 ರಲ್ಲಿ ಸಂಸತ್ತಿನ ಮೇಲೆ ದಾಳಿಯಾದ ದಿನದಂದು ಗಂಭೀರವಾದ ಭದ್ರತಾ ಉಲ್ಲಂಘನೆಯಾಗಿದೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಹೇಳಿದ್ದಾರೆ.

ಅದೇ ವೇಳೆ ಸಂಸತ್ ನ ಹೊರಗೆ ಸಾರಿಗೆ ಭವನದ ಮುಂದೆ ಬಣ್ಣ ಹೊಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದ ಇಬ್ಬರು ಪ್ರತಿಭಟನಾಕಾರರು, ಓರ್ವ ಪುರುಷ ಮತ್ತು ಮಹಿಳೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಡೆಹ್ರಾಡೂನ್: ಕಿಡಿಗೇಡಿಯಿಂದ ದೇವಾಲಯದ ಗೇಟ್​ ಮೇಲೆ ಮೂತ್ರ ವಿಸರ್ಜನೆ, ಕಲ್ಲು ತೂರಾಟ

ಉತ್ತರಾಖಂಡ(Uttarakhand)ದ ರಾಜಧಾನಿ ಡೆಹ್ರಾಡೂನ್‌ನಲ್ಲಿ ದೇವಾಲಯ(Temple) ಧ್ವಂಸ ಮಾಡಿದ ಘಟನೆಯೊಂದು ಮುನ್ನೆಲೆಗೆ ಬಂದಿದೆ. ರಾತ್ರಿ ವೇಳೆ ದೇವಸ್ಥಾನದ ಮೇಲೆ ದಾಳಿ ನಡೆಸಿದ ಕಿಡಿಗೇಡಿಯೊಬ್ಬ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದ್ದಾನೆ. ತಲೆಗೆ ಕ್ಯಾಪ್​ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಗೇಟ್​ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಡೆಹ್ರಾಡೂನ್-ಹರಿದ್ವಾರ ರಸ್ತೆಯಲ್ಲಿರುವ ಹರ್ರಾವಾಲಾದ ಮಾತಾ ಕಾಳಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ.

ಮಧ್ಯರಾತ್ರಿ 1 ಗಂಟೆ ವೇಳೆಗೆ ಘಟನೆ ನಡೆದಿದೆ, ದೇವಾಲಯದ ಹೊರಗೆ ಮೂತ್ರ ವಿಸರ್ಜನೆ ಮಾಡಿದ್ದು, ಬಳಿಕ ದೇವಸ್ಥಾನಕ್ಕೆ ಕಲ್ಲು ಎಸೆದಿದ್ದಾನೆ, ದೇವಾಲಯದ ಮುಂಭಾಗಕ್ಕೆ ಹಾನಿಯುಂಟಾಗಿದೆ, ಆತ ಸ್ಥಳದಿಂದ ಪರಾರಿಯಾಗಿದ್ದಾನೆ.

ದೋಯಿವಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸಿಸಿಟಿವಿ ಆಧಾರದಲ್ಲಿ ಆರೋಪಿಯನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ. ಈ ಘಟನೆಯು ಸ್ಥಳೀಯ ಹಿಂದೂ ಸಮುದಾಯದಲ್ಲಿ ಕೋಪವನ್ನು ಹುಟ್ಟುಹಾಕಿದೆ, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲು ಒತ್ತಾಯಿಸಲಾಗುತ್ತಿದೆ.

ಗುರುತಿಸುವಿಕೆ ಸವಾಲಿನದಾಗಿದೆ ಎಂದು ಪೊಲೀಸರು ಹೇಳಿಕೆ ನೀಡಿದ್ದು, ಕೃತ್ಯದ ಹಿಂದಿನ ಉದ್ದೇಶವನ್ನು ನಿರ್ಧರಿಸಲು ಕಷ್ಟವಾಗುತ್ತಿದೆ.ವ್ಯಕ್ತಿಯನ್ನು ಬಂಧಿಸಿದ ನಂತರ, ಹೆಚ್ಚಿನ ತನಿಖೆ ನಡೆಯಲಿದೆ.

ನವೆಂಬರ್‌ನಲ್ಲಿ ಜಾರ್ಖಂಡ್‌ನಲ್ಲಿ ಇದೇ ರೀತಿಯ ಘಟನೆ ಸಂಭವಿಸಿದ್ದು, ಅರ್ಚಕನ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿ ದೇವಾಲಯದಲ್ಲಿನ ಪ್ರತಿಮೆಯನ್ನು ಹಾನಿಗೊಳಿಸಿದ್ದರು, ನವೆಂಬರ್‌ನಲ್ಲಿ, ಮುರಾದಾಬಾದ್‌ನ ದೇವಾಲಯವನ್ನೂ ಸಹ ಧ್ವಂಸಗೊಳಿಸಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist