ಬಿಜೆಪಿ ಮತ್ತು ಕಾಂಗ್ರೆಸ್ ಪ್ರಬಲ ಅಭ್ಯರ್ಥಿಗಳ ನಡುವೆ ಎರಡು ಶಾಕಿಂಗ್ ಸಮೀಕ್ಷೆಗಳು ಬಹಿರಂಗ..!
ಬೆಂಗಳೂರು: ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಜೋರಾಗಿದೆ. ಇತ್ತ ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನ ಘೋಷಿಸಿದ್ದು, ಒಟ್ಟು ಏಳು ಹಂತದಲ್ಲಿ ದೇಶದಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಹೀಗಾಗಿ ಗೆಲ್ಲುವ ಕುದುರೆಯ ಹುಡುಕಾಟ ನಡೆಸುತ್ತಿರುವ ನಡುವೆ ಸಮೀಕ್ಷೆ ಬಹಿರಂಗವಾಗಿದ್ದು, ರಾಜಕೀಯ ಪಕ್ಷಗಳಿಗೆ ಶಾಕ್ ನೀಡಿದೆ.
ಹೌದು, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರವನ್ನ ವಶಪಡಿಸಿಕೊಳ್ಳವ ನಿಟ್ಟಿಯಲ್ಲಿ ಆಡಳಿತರೂಢ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಇತ್ತ ಹಾಲಿ 25 ಸಂಸದರಿರುವ ಬಿಜೆಪಿಯೂ ಈ ಬಾರಿ ಕಾಂಗ್ರೆಸ್ ಗೆ ಸೋಲಿನ ರುಚಿ ತೋರಿಸಲು ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಫೈಕಿ 28 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಕೈ ವಿರುದ್ಧ ತಂತ್ರಗಾರಿಕೆ ನಡೆಸಿದೆ. ಆದರೆ, ಇದರ ನಡುವೆಯೇ ಸಮೀಕ್ಷೆಯೊಂದು ಪ್ರಕಟವಾಗಿದ್ದು, 28 ಕ್ಷೇತ್ರಗಳನ್ನು ಗೆಲ್ಲುವ ಕನಸು ಹೊತ್ತಿದ್ದ ಬಿಜೆಪಿ-ಜೆಡಿಎಸ್ ಮೈತ್ರಿಗೆ ಶಾಕ್ ಎದುರಾಗಿದೆ.
ಇಂಡಿಯಾ ಟಿವಿಯ ತಾಜಾ ಸಮೀಕ್ಷೆಯೊಂದು ಹೊರಬಿದ್ದಿದ್ದು, ಇದರ ಪ್ರಕಾರ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸುಲಭವಾಗಿ ಗೆಲುವನ್ನು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಅಲ್ಲದೇ ಕರ್ನಾಟಕದಲ್ಲಿ ಬಿಜೆಪಿಗೆ ಹೋದ ಚುನಾವಣೆಯಲ್ಲಿ ಬಂದಷ್ಟು ಸ್ಥಾನಗಳು ಬರುವ ಸಾಧ್ಯತೆಯಿಲ್ಲ, ಕೆಲವು ಸ್ಥಾನಗಳು ಕೈತಪ್ಪಲಿವೆ ಎಂದು ಸಮೀಕ್ಷೆ ಮೂಲಕ ತಿಳಿದು ಬಂದಿದೆ.
ಇಂಡಿಯಾ ಟಿವಿಯ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಬಿಜೆಪಿ 22 ಕ್ಷೇತ್ರಗಳನ್ನ ಗೆಲ್ಲುವ ಸಾಧ್ಯತೆ ಇದ್ದು,ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ ಗೆಲುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಹೇಳಿದೆ. ಅಲ್ಲದೇ ಪ್ರಾದೇಶಿಕ ಪಕ್ಷ ಜೆಡಿಎಸ್ ಕರ್ನಾಟಕದಲ್ಲಿ ಎರಡು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ ಎಂದು ಇಂಡಿಯಾ ಟಿವಿಯ ಸಮೀಕ್ಷೆ ಭವಿಷ್ಯ ನುಡಿದಿದೆ.
ಈ ದಿನ ಮೆಗಾ ಸಮೀಕ್ಷೆಯಲ್ಲಿ ಮೈತ್ರಿಗೆ ಶಾಕ್! ಈ ದಿನ ಮೆಗಾ ಸಮೀಕ್ಷೆಯೊಂದು ಪ್ರಕಟವಾಗಿದ್ದು, 28 ಕ್ಷೇತ್ರಗಳನ್ನು ಗೆಲ್ಲುವ ಕನಸು ಹೊತ್ತಿದ್ದ ಬಿಜೆಪಿ-ಜೆಡಿಎಸ್ ಮೈತ್ರಿಗೆ ಶಾಕ್ ನೀಡಿದ್ದರೆ, ಆಡಳಿತಾರೂಢ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಈಗಾಗಲೇ ಹಲವು ಸಮೀಕ್ಷೆಗಳು ಬಹಿರಂಗಗೊಂಡಿದ್ದು, ಬಹುತೇಕ ಸರ್ವೆಯಲ್ಲಿ ಬಿಜೆಪಿ -ಜೆಡಿಎಸ್ 23 ರಿಂದ 25 ಕ್ಷೇತ್ರಗಳನ್ನ ಗೆಲ್ಲುವ ಸಾಧ್ಯತೆ ಇದ್ದು,ಕಾಂಗ್ರೆಸ್ 4-5 ಕ್ಷೇತ್ರಗಳಲ್ಲಿ ಗೆಲುವ ಸಾಧ್ಯತೆ ಇದೆ ಎಂದು ಹೇಳಿವೆ.
ಈ ದಿನ ನಡೆಸಿದ ಮೆಗಾ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಕಾಂಗ್ರೆಸ್ ಅತಿ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಲಿದೆ. ಗ್ಯಾರಂಟಿಗಳನ್ನ ಕೊಟ್ಟಿರುವ ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ 11 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿದೆ ಎಂದು ಹೇಳಿದೆ. ಇನ್ನೂ ಉಳಿದ ಏಳು ಲೋಕಸಭಾ ಕ್ಷೇತ್ರಗಳಲ್ಲಿ ನೇರ ಹಣಾಹಣಿ ಏರ್ಪಡಿಲಿದೆ ಎಂದು ಸಮೀಕ್ಷೆ ಮೂಲಕ ತಿಳಿದು ಬಂದಿದೆ.